ಪಾಟ್ನಾ| ರೈಲ್ವೆ ನಿಲ್ದಾಣದ ಬಳಿಯ ಹೋಟೆಲ್‌ನಲ್ಲಿ ಅಗ್ನಿ ಅವಘಡ, ಆರು ಮಂದಿ ಸಾವು

Date:

ಪಾಟ್ನಾ ಜಂಕ್ಷನ್ ರೈಲ್ವೆ ನಿಲ್ದಾಣದ ಸಮೀಪವಿರುವ ಹೋಟೆಲ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಕನಿಷ್ಠ ಆರು ಮಂದಿ ಸಾವನ್ನಪ್ಪಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ, 20ಕ್ಕೂ ಹೆಚ್ಚು ಜನರನ್ನು ಸುರಕ್ಷಿತವಾಗಿ ಹೊರತರಲಾಗಿದೆ ಎಂದು ವರದಿಯಾಗಿದೆ.

ಡಿಎಸ್‌ಪಿ (ಕಾನೂನು ಮತ್ತು ಸುವ್ಯವಸ್ಥೆ) ಕೃಷ್ಣ ಮುರಾರಿ ಮಾತನಾಡಿ, “5-6 ಮಂದಿ ಸಾವನ್ನಪ್ಪಿದ್ದಾರೆ. 30ಕ್ಕೂ ಅಧಿಕ ಮಂದಿಯನ್ನು ರಕ್ಷಣೆ ಮಾಡಲಾಗಿದೆ. 7 ಮಂದಿಗೆ ಗಂಭೀರವಾಗಿ ಗಾಯವಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನಾ ಸ್ಥಳಕ್ಕೆ ದೌಡಾಯಿಸಿದ ಗೃಹ ರಕ್ಷಕ ದಳ ಮತ್ತು ಅಗ್ನಿಶಾಮಕ ದಳದ ಡಿಜಿ ಶೋಭಾ ಒಹತ್ಕರ್ ಸುದ್ದಿಗಾರರೊಂದಿಗೆ ಮಾತನಾಡಿ, “16 ಸಾವಿರಕ್ಕೂ ಹೆಚ್ಚು ಹೊಟೇಲ್‌ಗಳಲ್ಲಿ ಅಗ್ನಿಶಾಮಕ ಪರಿಶೋಧನೆ ನಡೆಸಲಾಗಿದೆ, ಇನ್ನೂ ಪ್ರಗತಿಯಲ್ಲಿದೆ. ಪರಿಶೋಧನೆಯ ವೇಳೆ ನಿರ್ದಿಷ್ಟ ಸೂಚನೆಗಳನ್ನು ನೀಡಲಾಗಿದೆ. ಆದರೆ ಕೆಲವರು ಆ ಸೂಚನೆಗಳನ್ನು ಅನುಸರಿಸುವುದಿಲ್ಲ” ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ?  ಬೆಂಗಳೂರು | ಸ್ಕ್ರಾಪ್ ಗೋದಾಮಿಗೆ ಬೆಂಕಿ ತಗುಲಿ ಹೊತ್ತಿ ಉರಿದ ಎರಡು ಟ್ರಾಕ್ಟರ್, ಬೈಕ್

“ನಾವು ನೀಡಿದ ಸೂಚನೆಗಳನ್ನು ಕೆಲವರು ಅನುಸರಿಸಿದರೆ, ಇನ್ನೂ ಕೆಲವರು ಸೂಚನೆಗೆ ಗಮನ ಹರಿಸುವುದಿಲ್ಲ. ಪ್ರಾಥಮಿಕ ತನಿಖೆಯಲ್ಲಿ ಸಿಲಿಂಡರ್ ಸ್ಫೋಟದಿಂದಾಗಿ ಬೆಂಕಿ ಕಾಣಿಸಿಕೊಂಡಿದೆ ಎಂದು ತಿಳಿದುಬರುತ್ತದೆ” ಎಂದು ತಿಳಿಸಿದ್ದಾರೆ.

“ನಾವು ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದೇವೆ, ಅದರ ಬಗ್ಗೆ ಬೆಳಿಗ್ಗೆ 11 ಗಂಟೆಯ ಸುಮಾರಿಗೆ ಮಾಹಿತಿ ಬಂದಿದೆ. ಸರಿಯಾದ ತನಿಖೆಯ ಮೂಲಕ ನಿಖರವಾದ ಕಾರಣವನ್ನು ಪತ್ತೆಹಚ್ಚಲಾಗುವುದು ಮತ್ತು ಸೂಕ್ತವಾದ ಕ್ರಮವನ್ನು ಅನುಸರಿಸಲಾಗುವುದು” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...