ತಿರುಪತಿ ಕಾಲ್ತುಳಿತದಲ್ಲಿ ಬಳ್ಳಾರಿ ಮೂಲದ ಮಹಿಳೆ ಸಾವು: ಮೃತರ ಸಂಖ್ಯೆ 6ಕ್ಕೆ ಏರಿಕೆ

Date:

ಆಂಧ್ರ ಪ್ರದೇಶದ ತಿರುಪತಿ ತಿರುಮಲ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಬುಧವಾರ ರಾತ್ರಿ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ ಮೃತಪಟ್ಟವರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ಘಟನೆಯಲ್ಲಿ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು ಹಲವಾರು ಮಂದಿ ಅಸ್ವಸ್ಥಗೊಂಡಿದ್ದಾರೆ.

ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವೈಕುಂಠ ಏಕಾದಶಿ ಪ್ರಯುಕ್ತ ತಿರುಪತಿಯ ವಿಷ್ಣು ನಿವಾಸಂನಲ್ಲಿ ಶುಕ್ರವಾರದಿಂದ 10 ದಿನಗಳ ಕಾಲ ವೈಕುಂಠ ದ್ವಾರ ಸರ್ವದರ್ಶನಕ್ಕಾಗಿ ಟೋಕನ್ ವಿತರಣೆಯ ಸಂದರ್ಭದಲ್ಲಿ ಕಾಲ್ತುಳಿತ ಸಂಭವಿಸಿದೆ. ಘಟನೆಯಲ್ಲಿ ಕರ್ನಾಟಕದ ಬಳ್ಳಾರಿ ಮೂಲದ ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ. ಮೃತರನ್ನು ನಿರ್ಮಲ (50) ಎಂದು ಗುರುತಿಸಲಾಗಿದೆ.

ಇನ್ನು ಗಾಯಾಳುಗಳಿಗೆ ರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಜನವರಿ 10 ರಿಂದ 14ರವರೆಗೆ ವೈಕುಂಠ ದ್ವಾರ ದರ್ಶನಕ್ಕೆ ಉಚಿತ ಟಿಕೆಟ್ ವಿತರಣೆ ಹಿನ್ನೆಲೆ ಟಿಕೆಟ್ ಪಡೆಯಲು ನೂಕುನುಗ್ಗಲು ಉಂಟಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಟಿಟಿಡಿಯಿಂದ ಒಟ್ಟು 7 ಲಕ್ಷ ಟಿಕೆಟ್ ವಿತರಣೆ ಕಾರ್ಯ ನಡೆಯುತ್ತಿತ್ತು. ಉಚಿತ ಟಿಕೆಟ್ ಪಡೆಯುವ ಸಲುವಾಗಿ ಏಕಾಏಕಿ ಸಾಗರೋಪಾದಿಯಲ್ಲಿ ಭಕ್ತರು ಕೌಂಟರ್ ಬಳಿ ಸೇರಿದ ಪರಿಣಾಮ ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಾವೋವಾದಿಗಳು ಮುಖ್ಯವಾಹಿನಿಗೆ ಮರಳುತ್ತಿರುವುದು ಸ್ವಾಗತಾರ್ಹ

ಗುರುವಾರದಿಂದ ತಿರುಪತಿಯ 9 ಕೇಂದ್ರಗಳಲ್ಲಿ 94 ಕೌಂಟರ್‌ಗಳ ಮೂಲಕ ವೈಕುಂಠ ದರ್ಶನ ಟೋಕನ್‌ಗಳನ್ನು ವಿತರಿಸಲು ಟಿಟಿಡಿ ವ್ಯವಸ್ಥೆ ಮಾಡಿದೆ. ಆದರೆ, ಬುಧವಾರ ಸಂಜೆ ಟೋಕನ್‌ಗಾಗಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು. ಇದೇ ವೇಳೆ ಭಕ್ತರೊಬ್ಬರು ಅಸ್ವಸ್ಥರಾದರು. ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ಮುಖ್ಯ ಗೇಟ್ ತೆರೆಯಲಾಗಿತ್ತು. ಆಗ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆ ಗೇಟ್ ಮೂಲಕ ಧಾವಿಸಿದರು. ಇದರಿಂದ ಘಟನೆ ನಡೆದಿದೆ ಎಂದು ವರದಿಯಾಗಿದೆ. 

ನೆರವು ನೀಡುವಂತೆ ಕಾರ್ಯಕರ್ತರಿಗೆ ರಾಹುಲ್‌ ಗಾಂಧಿ ಮನವಿ

ತಿರುಪತಿ ದೇವಸ್ಥಾನದಲ್ಲಿ ಸಂಭವಿಸಿದ ಕಾಲ್ತುಳಿತ ತೀವ್ರ ದುಃಖ ತಂದಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿಷಾದ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ‘ತಿರುಪತಿಯಲ್ಲಿ ಸಂಭವಿಸಿದ ದುರಂತ ತೀವ್ರ ದುಃಖವನ್ನುಂಟುಮಾಡಿದೆ. ದುಃಖತಪ್ತ ಕುಟುಂಬಗಳಿಗೆ ಸಂತಾಪಗಳು. ಗಾಯಗೊಂಡ ಎಲ್ಲರೂ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ಈ ಕಷ್ಟದ ಸಮಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಾಧ್ಯವಿರುವ ಎಲ್ಲ ನೆರವು ನೀಡಿ’ ಎಂದು ಬರೆದುಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...