ಭಾರತದಲ್ಲಿ ಪ್ರತಿ ವರ್ಷ 6 ಲಕ್ಷ ಶಿಶುಗಳು ವೈಕಲ್ಯದೊಂದಿಗೆ ಜನಿಸುತ್ತಿದ್ದಾರೆ

Date:

ಭಾರತದಲ್ಲಿ ಪ್ರತಿ ವರ್ಷ ಸುಮಾರು 6 ಲಕ್ಷ ಶಿಶುಗಳು ಜನ್ಮಜಾತ ವೈಕಲ್ಯಗಳೊಂದಿಗೆ ಜನಿಸುತ್ತವೆ. ಆದರೂ, ಈ ಶಿಶುಗಳನ್ನು ಪತ್ತೆಹಚ್ಚಲು ಅಥವಾ ಅವರ ಆರೋಗ್ಯವನ್ನು ಮೇಲ್ವಿಚಾರಣೆ ಮಾಡಲು ದೇಶದಲ್ಲಿ ಯಾವುದೇ ರಾಷ್ಟ್ರೀಯ ನೋಂದಣಿ ವ್ಯವಸ್ಥೆ ಇಲ್ಲವೆಂಬ ಆಘಾತಕಾರಿ ಸುದ್ದಿ ಬಹಿರಂಗವಾಗಿದೆ.

‘ಸ್ಮೈಲ್ ಟ್ರೈನ್ ಇಂಡಿಯಾ’ ಮತ್ತು ‘ಬರ್ತ್ ಡಿಫೆಕ್ಟ್ಸ್ ರಿಸರ್ಚ್ ಫೌಂಡೇಶನ್’ ಜಂಟಿಯಾಗಿ ಬಿಡುಗಡೆ ಮಾಡಿದ ವರದಿಯು ಈ ಆತಂಕಕಾರಿ ಸಂಗತಿಯನ್ನು ವಿವರಿಸಿದೆ. “ಸಾಂಕ್ರಾಮಿಕ ರೋಗಗಳಿಂದ ಉಂಟಾಗುವ ಶಿಶು ಮರಣಗಳ ಪ್ರಮಾಣ ಕಡಿಮೆಯಾಗುತ್ತಿದೆ. ಆದರೆ, ಜನ್ಮಜಾತ ದೋಷಗಳಿಂದ ಸಂಭವಿಸುವ ಮರಣಗಳ ಪಾಲು ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ, ಇವುಗಳ ಮೇಲೆ ನಿಗಾ ಇಡುವುದು ಮತ್ತು ಸಮನ್ವಯದ ಆರೈಕೆಯನ್ನು ಒದಗಿಸುವುದು ಇಂದಿನ ತುರ್ತು ಅಗತ್ಯವಾಗಿದೆ ಎಂದು ತಜ್ಞರು ಹೇಳುತ್ತಾರೆ. ಇತ್ತೀಚಿನ ಅಂದಾಜಿನ ಪ್ರಕಾರ, ಜನ್ಮಜಾತ ದೋಷಗಳಿಗೆ ಸಂಬಂಧಿಸಿದ ಜಾಗತಿಕ ಮರಣಗಳಲ್ಲಿ ಭಾರತದ ಪಾಲು 16% ರಷ್ಟಿದೆ” ಎಂದು ಹೇಳಿದೆ.

ಶಿಶುಗಳ ಮರಣ ತಡೆಗಟ್ಟುವಿಕೆ, ಆರಂಭಿಕ ರೋಗನಿರ್ಣಯ ಹಾಗೂ ರಚನಾತ್ಮಕ ದೀರ್ಘಕಾಲೀನ ಆರೈಕೆಗೆ ಒತ್ತು ನೀಡಲು ‘ಸ್ಮೈಲ್ ಟ್ರೈನ್ ಇಂಡಿಯಾ’ ಮತ್ತು ‘ಬರ್ತ್ ಡಿಫೆಕ್ಟ್ಸ್ ರಿಸರ್ಚ್ ಫೌಂಡೇಶನ್’ ಜಂಟಿಯಾಗಿ ‘ಬರ್ತ್ ಅನಾಮಲೀಸ್ ನೆಟ್‌ವರ್ಕ್ ಆಫ್ ಇಂಡಿಯಾ’ (BIND) ಎಂಬ ವೇದಿಕೆಯನ್ನು ಆರಂಭಿಸಿವೆ. ಸೋಮವಾರ ದೆಹಲಿಯಲ್ಲಿ ಅನಾವರಣಗೊಳಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೇಶದಾದ್ಯಂತ ವಿಶ್ವಾಸಾರ್ಹ ದತ್ತಾಂಶವನ್ನು (Data) ಸಂಗ್ರಹಿಸಲು, ತಡೆಗಟ್ಟಬಹುದಾದ ಅಪಾಯಕಾರಿ ಅಂಶಗಳನ್ನು ಗುರುತಿಸಲು ಹಾಗೂ ಆರೋಗ್ಯ ಯೋಜನೆಯನ್ನು ರೂಪಿಸಲು ‘ರಾಷ್ಟ್ರೀಯ ಜನ್ಮಜಾತ ವೈಕಲ್ಯಗಳ ನೋಂದಣಿ’ (National Birth Anomalies Registry) ವ್ಯವಸ್ಥೆಯನ್ನು ಸ್ಥಾಪಿಸುವುದು ಈ ವೇದಿಕೆಯ ಮುಖ್ಯ ಉದ್ದೇಶವಾಗಿದೆ.

ಪ್ರಸ್ತುತ ಇರುವ ನಿಗಾ ವ್ಯವಸ್ಥೆಯು ಚದುರಿಹೋಗಿದೆ, ತಪಾಸಣೆಯು ಅಸಮರ್ಪಕವಾಗಿದೆ ಎಂದು ತಜ್ಞರು ಹೇಳಿದ್ದಾರೆ.

ಜನ್ಮಜಾತ ಆರೋಗ್ಯ ಸಮಸ್ಯೆಗಳಲ್ಲಿ ಹೃದಯ ಕಾಯಿಲೆ, ಸೀಳು ತುಟಿ ಮತ್ತು ಅಂಗುಳು,ಬೆನ್ನುಮೂಳೆಯ ದೋಷ, ಪಾದದ ವಕ್ರತೆ, ಡೌನ್ ಸಿಂಡ್ರೋಮ್ ಹಾಗೂ ದೃಷ್ಟಿ ಮತ್ತು ಶ್ರವಣದೋಷಗಳು ಗಣನೀಯವಾಗಿವೆ. ಇವುಗಳಲ್ಲಿ ಹೆಚ್ಚಿನವುಗಳನ್ನು ಮೊದಲೇ ಪತ್ತೆಹಚ್ಚಿದರೆ ಗುಣಪಡಿಸಬಹುದು. ಆದರೆ, ಇವುಗಳನ್ನು ಪತ್ತೆ ಹಚ್ಚುವ ವ್ಯವಸ್ಥೆ ಅಸಮರ್ಪಕವಾಗಿದೆ ಎಂದು ತಜ್ಞರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...