ಮಧ್ಯಪ್ರದೇಶ| ಬೋರ್‌ವೆಲ್‌ಗೆ ಬಿದ್ದ 6 ವರ್ಷದ ಬಾಲಕ, ರಕ್ಷಣಾ ಕಾರ್ಯ ಪ್ರಾರಂಭ

Date:

ಮಧ್ಯಪ್ರದೇಶದ ರೇವಾ ಜಿಲ್ಲೆಯ ಕೃಷಿ ಕ್ಷೇತ್ರದಲ್ಲಿ ಆರು ವರ್ಷದ ಬಾಲಕ ತೆರೆದ ಬೋರ್‌ವೆಲ್‌ಗೆ ಬಿದ್ದಿದ್ದಾನೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಸುದ್ದಿ ಸಂಸ್ಥೆ ಎಎನ್‌ಐ ಜೊತೆ ಮಾತನಾಡಿದ ರೇವಾ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅನಿಲ್ ಸೋಂಕರ್, “ಆರು ವರ್ಷದ ಬಾಲಕ ಬಿದ್ದು ಪ್ರಸ್ತುತ ಸಿಕ್ಕಿಬಿದ್ದಿರುವ ಈ ಬೋರ್‌ವೆಲ್ 6 ಸೆಂಟಿ ಮೀಟರ್ ವ್ಯಾಸವನ್ನು ಹೊಂದಿದೆ” ಎಂದು ಮಾಹಿತಿ ನೀಡಿದ್ದಾರೆ.

“ಬಾಲಕ ತನ್ನ ಸ್ನೇಹಿತರೊಂದಿಗೆ ಕಟಾವು ಮಾಡಿದ ಗೋಧಿ ಹೊಲದಲ್ಲಿ ಆಟವಾಡುತ್ತಿದ್ದನು, ಈ ಸಮಯದಲ್ಲಿ ಅವನು ಬೋರ್‌ವೆಲ್‌ಗೆ ಬಿದಿದ್ದಾನೆ. ಇತರ ಮಕ್ಕಳು ಬಾಲಕನನ್ನು ಮೇಲೆತ್ತಲು ಪ್ರಯತ್ನಿಸಿದ್ದು ಸಾಧ್ಯವಾಗದಿದ್ದಾಗ, ತಕ್ಷಣವೇ ಬಾಲಕನ ಪೋಷಕರಿಗೆ ಮಾಹಿತಿ ನೀಡಿದರು” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಾಲಕನ ಪೋಷಕರು ಪೊಲೀಸರು ಮತ್ತು ಆಡಳಿತಕ್ಕೆ ಮಾಹಿತಿ ನೀಡಿದ್ದು ತಕ್ಷಣ ಠಾಣೆಯ ಉಸ್ತುವಾರಿ ಹಾಗೂ ಎಸ್‌ಡಿಎಂ ಸ್ಥಳಕ್ಕೆ ಆಗಮಿಸಿದರು. ಮಧ್ಯಾಹ್ನ 3.30ರ ವೇಳೆಗೆ ಈ ಘಟನೆ ಸಂಭವಿಸಿದ್ದು ಸ್ಥಳದಲ್ಲಿ ಎಲ್ಲ ಹಿರಿಯ ಅಧಿಕಾರಿಗಳು ಹಾಜರಿದ್ದು, ರಕ್ಷಣಾ ಕಾರ್ಯ ನಡೆಯುತ್ತಿದೆ” ಎಂದು ಹೇಳಿದರು.

ಇದನ್ನು ಓದಿದ್ದೀರಾ? ಕೊಳವೆಬಾವಿ ದುರಂತ | ಸತತ 18 ಗಂಟೆ ನಿರಂತರ ಕಾರ್ಯಾಚರಣೆಯ ನಂತರ ಬಾಲಕನ ರಕ್ಷಣೆ

“2 ಜೆಸಿಬಿಗಳು, ಕ್ಯಾಮರಾಮನ್‌ಗಳ ತಂಡ ಮತ್ತು ಎಸ್‌ಡಿಆರ್‌ಎಫ್ ತಂಡ ರಕ್ಷಣಾ ಕಾರ್ಯ ನಡೆಸುತ್ತಿದೆ. ಬನಾರಸ್‌ನಿಂದ ಎನ್‌ಡಿಆರ್‌ಎಫ್ ತಂಡವನ್ನು ಕಳುಹಿಸಲಾಗಿದೆ ಮತ್ತು ಅವರು ಶೀಘ್ರದಲ್ಲೇ ಇಲ್ಲಿಗೆ ಬರಲಿದ್ದಾರೆ” ಎಂದು ತಿಳಿಸಿದರು.

ಇತ್ತೀಚೆಗೆ ಕರ್ನಾಟಕದ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಕೊಳವೆ ಬಾವಿಗೆ ಬಿದ್ದ 2 ವರ್ಷದ ಬಾಲಕನನ್ನು 18 ಗಂಟೆಗಳ ನಿರಂತರ ಕಾರ್ಯಾಚರಣೆಯ ನಂತರ ರಕ್ಷಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...