ಬಾಲಕನ ಹೊಟ್ಟೆಯಲ್ಲಿ ಬ್ಯಾಟರಿ, ಚೈನ್ ಸೇರಿದಂತೆ 65 ವಸ್ತುಗಳು ಪತ್ತೆ; ಶಸ್ತ್ರಚಿಕಿತ್ಸೆ ಮಾಡಿದರೂ ಬದುಕುಳಿಯದ ಬಾಲಕ

Date:

14 ವರ್ಷದ ಬಾಲಕನ ಹೊಟ್ಟೆಯಲ್ಲಿ ಬ್ಯಾಟರಿ, ಚೈನ್, ಸ್ಕ್ರೂ ಹಾಗೂ ರೇಜರ್ ಬ್ಲೇಡ್ ಸೇರಿದಂತೆ ಬರೋಬ್ಬರಿ 65 ವಸ್ತುಗಳು ಪತ್ತೆಯಾಗಿದ್ದು, ಶಸ್ತ್ರಚಿಕಿತ್ಸೆ ಮೂಲಕ ಅವುಗಳನ್ನು ಹೊರತೆಗೆಯಲಾಗಿದೆ. ಆದರೆ, ಶಸ್ತ್ರಚಿಕಿತ್ಸೆ ಬಳಿಕ ಬಾಲಕ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಹಾತ್ರಾಸ್‌ ಜಿಲ್ಲೆಯಲ್ಲಿ ನಡೆದಿದೆ.

ಬಾಲಕನಿಗೆ ಸುಮಾರು ಐದು ಗಂಟೆಗಳ ಕಾಲ ಸುಧೀರ್ಘ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಹೊಟ್ಟೆಯಲ್ಲಿದ್ದ ಎಲ್ಲ ವಸ್ತುಗಳನ್ನು ಹೊರತೆಗೆಯಲಾಗಿದೆ. ಆದರೆ, ಕರುಳಿನ ಸೋಂಕಿನಿಂದ ಬಾಲಕ ಮೃತಪಟ್ಟಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ.

ಮೃತ ಬಾಲಕನನ್ನು ಆದಿತ್ಯ ಶರ್ಮಾ ಎಂದು ಗುರುತಿಸಲಾಗಿದೆ. ಆತನಿಗೆ ಇತ್ತೀಚೆಗೆ ಉಸಿರಾಟ ತೊಂದರೆ ಕಾಣಿಸಿಕೊಂಡಿದ್ದರಿಂದ ಆಸ್ಪತ್ರೆಗೆ ಸೇರಿಸಲಾಗಿತ್ತು. ಪರೀಕ್ಷೆ ವೇಳೆ ಆತನ ಹೊಟ್ಟೆಯಲ್ಲಿ ಹಲವು ವಸ್ತುಗಳು ಇರುವುದು ಪತ್ತೆಯಾಗಿತ್ತು. ಬಳಿಕ ಆತನಿಗೆ ಶಸ್ತ್ರಚಿಕಿತ್ಸೆಯನ್ನೂ ನಡೆಸಿ ಎಲ್ಲ ವಸ್ತುಗಳನ್ನು ವೈದ್ಯರು ಹೊರತೆಗೆದಿದ್ದಾರೆ. ಆದರೂ, ಬಾಲಕ ಬದುಕುಳಿಯಲಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಾಲಕ ಈ ಹಿಂದೆ ಆ ವಸ್ತುಗಳನ್ನು ನುಂಗಿರುವ ಸಾಧ್ಯತೆ ಇದೆ ಎಂದು ವೈದ್ಯರು ಶಂಕಿಸಿದ್ದಾರೆ. ಬಾಲಕನ ತಂದೆ ಸಂಕೇತ್ ಶರ್ಮಾ ಅವರು ಔಷಧ ಕಂಪನಿಯ ಪ್ರತಿನಿಧಿಯಾಗಿದ್ದಾರೆ. ಅವರು ಹೇಳುವಂತೆ, “ಅಕ್ಟೋಬರ್ 13ರಿಂದ ಬಾಲಕನಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ಆತನನ್ನು ಹಲವು ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿತ್ತು. ಅಕ್ಟೋಬರ್ 19ರಂದು ಜೈಪುರ ಆಸ್ಪತ್ರೆಯಲ್ಲಿ ಆತನನ್ನು ಸ್ಕ್ಯಾನಿಂಗ್‌ಗೆ ಒಳಪಡಿಸಿದಾಗ, ಆತನ ಹೊಟ್ಟೆಯಲ್ಲಿ ವಸ್ತುಗಳು ಇರುವುದು ಪತ್ತೆಯಾಗಿತ್ತು. ಬಳಿಕ, ಅಲೀಗಢ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಆದರೂ, ಮಗನನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...