ಐದು ವರ್ಷಗಳಲ್ಲಿ 65 ಐಐಟಿ ವಿದ್ಯಾರ್ಥಿಗಳ ಆತ್ಮಹತ್ಯೆ!

Date:

ಇತ್ತೀಚಿಗೆ ವರದಿಯಾದ ಕಾನ್ಪುರ ಐಐಟಿ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ ದೇಶದ ಅತ್ಯುನ್ನತ ತಾಂತ್ರಿಕ ಶಿಕ್ಷಣ ಕ್ಯಾಂಪಸ್ ಗಳಲ್ಲಿ ಮಾನಸಿಕ ಆರೋಗ್ಯದ ಸಮಸ್ಯೆಯ ಬಗೆಗಿನ ಚರ್ಚೆಯನ್ನು ಮತ್ತೆ ಹುಟ್ಟುಹಾಕಿದೆ. ಕಳೆದ ಐದು ವರ್ಷದ ಅಂಕಿ ಅಂಶಗಳನ್ನು ವಿಶ್ಲೇಷಿಸಿದರೆ ಪ್ರತಿ ವರ್ಷ ಸರಾಸರಿ 12-13 ಐಐಟಿ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ.

2021ರ ಜನವರಿಯಿಂದ 2025ರ ಡಿಸೆಂಬರ್ ವರೆಗೆ ದೇಶದ ಐಐಟಿಗಳಲ್ಲಿ ಕನಿಷ್ಠ 65 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಅಂಶ ಜಾಗತಿಕ ಐಐಟಿ ಹಳೆವಿದ್ಯಾರ್ಥಿಗಳ ಬೆಂಬಲ ಗುಂಪು ಕ್ರೋಢೀಕರಿಸಿದ ಅಂಕಿ ಅಂಶಗಳಿಂದ ತಿಳಿದುಬರುತ್ತದೆ. ಕಳೆದ ಎರಡು ವರ್ಷಗಳಲ್ಲಿ ಸುಮಾರು 30 ಇಂಥ ಪ್ರಕರಣಗಳು ವರದಿಯಾಗಿವೆ. ಇದು ಸಾಂಸ್ಥಿಕ ಹೊಣೆಗಾರಿಕೆ ಬಗೆಗಿನ ಆತಂಕಕ್ಕೆ ಕಾರಣವಾಗಿದೆ. ತಾಂತ್ರಿಕ ಪದವಿ, ಸ್ನಾತಕೋತ್ತರ ಪದವಿ ಅಥವಾ ಡಾಕ್ಟರೇಟ್ ವಿದ್ಯಾರ್ಥಿಗಳು ಕೂಡಾ ಆತ್ಮಹತ್ಯೆ ಮಾಡಿಕೊಂಡವರಲ್ಲಿ ಸೇರಿದ್ದಾರೆ. ಆತ್ಮಹತ್ಯೆಗೆ ಅಧಿಕಾರಿಗಳು ನೀಡುವ ಕಾರಣ ವೈಯಕ್ತಿಕ ಅಥವಾ ಶೈಕ್ಷಣಿಕ ಒತ್ತಡ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ರಾಜ್ಯಪಾಲರು ಕೇಂದ್ರದ ಕೈಗೊಂಬೆಯಲ್ಲ- ಆಯಾ ರಾಜ್ಯದ ಜನಾದೇಶ ಧಿಕ್ಕರಿಸುವ ನಡೆ ಸಂವಿಧಾನಬಾಹಿರ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿದ್ಯಾರ್ಥಿ ಸಂಘಗಳು ಮತ್ತು ಹಳೆ ವಿದ್ಯಾರ್ಥಿ ಸಂಘಗಳು ಇಂತಹ ವಿವರಣೆಗಳು ಸಂಕೀರ್ಣ ವಾಸ್ತವತೆಗಳನ್ನು ಮರೆಮಾಚುತ್ತವೆ ಎಂದು ಅಭಿಪ್ರಾಯಪಡುತ್ತವೆ. ನಿರ್ದಾಕ್ಷಿಣ್ಯ ಮೌಲ್ಯಮಾಪನ, ಸ್ಪರ್ಧಾತ್ಮಕತೆ, ಏಕಾಂತ ಹಾಗೂ ಕೆಲ ಪ್ರಕರಣಗಳಲ್ಲಿ ಜಾತಿ ಅಥವಾ ಭಾಷೆ ಆಧರಿತ ಬೇರ್ಪಡಿಸುವಿಕೆಯಿಂದ ಈ ವಿಪರೀತದ ಕ್ರಮಕ್ಕೆ ವಿದ್ಯಾರ್ಥಿಗಳು ಮುಂದಾಗುತ್ತಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ. ಆದರೆ ಎಚ್ಚರಿಕೆಯ ಸಂಕೇತಗಳನ್ನು ಸಾಮಾನ್ಯವಾಗಿ ನಿರ್ಲಕ್ಷಿಸಲಾಗುತ್ತಿದೆ ಹಾಗೂ ಹಸ್ತಕ್ಷೇಪದ ವೇಳೆಗೆ ಪರಿಸ್ಥಿತಿ ಕೈಮೀರಿರುತ್ತದೆ ಎನ್ನುವುದನ್ನು ಬೋಧಕ ಸಿಬ್ಬಂದಿ ಖಾಸಗಿಯಾಗಿ ಒಪ್ಪಿಕೊಳ್ಳುತ್ತಾರೆ.

ದೇಶಾದ್ಯಂತ 2023ರಲ್ಲಿ 13 ಸಾವಿರ ವಿದ್ಯಾರ್ಥಿಗಳು ಅಂದರೆ ದಿನಕ್ಕೆ 36 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂದು ಎನ್‌ಸಿಆರ್‌ಬಿ ದಾಖಲೆಗಳು ಹೇಳುತ್ತವೆ.

ದೇಶದ ಐಐಟಿಗಳಲ್ಲಿ ಸಂಭವಿಸಿದ ಒಟ್ಟು ಪ್ರಕರಣಗಳಲ್ಲಿ ಶೇಕಡ 30ರಷ್ಟು ಪ್ರಕರಣಗಳು ಕಾನ್ಪುರ ಐಐಟಿಯಲ್ಲೇ ವರದಿಯಾಗಿವೆ. ಸುಪ್ರೀಂಕೋರ್ಟ್ ಕೂಡಾ ಇದನ್ನು ಗಂಭೀರವಾಗಿ ಪರಿಗಣಿಸಿ, ವಿದ್ಯಾರ್ಥಿ ಆತ್ಮಹತ್ಯೆ ತಡೆಗೆ ಮತ್ತು ಮಾನಸಿಕ ಆರೋಗ್ಯ ಸಮಸ್ಯೆಗಳ ಪರಿಹಾರಕ್ಕೆ ಕಾರ್ಯಪಡೆಯನ್ನೂ ರಚಿಸಿದೆ. ಆದರೆ ಗ್ಲೋಬಲ್ ಐಐಟಿ ಅಲ್ಯುಮ್ನಿ ಸಪೋರ್ಟ್ ಗ್ರೂಪ್ ಸಂಸ್ಥಾಪಕ ಧೀರಜ್ ಸಿಂಗ್ ಅವರ ಪ್ರಕಾರ, ಆತ್ಮಹತ್ಯೆ ಪ್ರಕರಣಗಳಲ್ಲಿ ಉನ್ನತ ಮಟ್ಟದ ಅಧಿಕಾರಿಗಳನ್ನು ನೇರ ಹೊಣೆಗಾರರನ್ನಾಗಿ ಮಾಡುವುದು ಅಗತ್ಯ.

ಸೂಚನೆ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...