ಉತ್ತರ ಪ್ರದೇಶ: ರಸ್ತೆ ಬದಿ ಹಚ್ಚೆ ಹಾಕಿಸಿಕೊಂಡ 68 ಮಹಿಳೆಯರಿಗೆ ಹೆಚ್‌ಐವಿ ಸೋಂಕು

Date:

ರಸ್ತೆಬಬದಿ ಟ್ಯಾಟೂ ಹಾಕಿಸಿಕೊಂಡ 68 ಮಹಿಳೆಯರಿಗೆ ಎಚ್ ಐ ವಿ ಸೋಂಕು ತಗುಲಿರು ಆಘಾತಕಾರಿ ಘಟನೆ ಉತ್ತರಪ್ರದೇಶದ ಘಾಜಿಯಾಬಾದ್ ನಲ್ಲಿ ನಡೆದಿದೆ. ಈ ಮಹಿಳೆಯರು ಪ್ರಸವಪೂರ್ವ ಪರೀಕ್ಷೆಗೆಂದು ಜಿಲ್ಲಾ ಮಹಿಳೆಯರ ಆಸ್ಪತ್ರೆಗೆ ಭೇಟಿ ನೀಡಿದಾಗ ಹೆಚ್‌ಐವಿ ಸೋಂಕು ತಗುಲಿರುವುದು ಪತ್ತೆಯಾಗಿದೆ.

ಎಲ್ಲ ಮಹಿಳೆಯರಿಗೂ ಹಚ್ಚೆ ಮೂಲಕ ಹೆಚ್‌ಐವಿ ಸೋಂಕು ತಗುಲಿದ್ದು, ಈ ಮಹಿಳೆಯರು ರಸ್ತೆಬದಿ ಹಚ್ಚೆ ಕಲಾವಿದರಿಂದ ಹಚ್ಚೆ ಹಾಕಿಸಿಕೊಂಡಿದ್ದರು. ಹಚ್ಚೆ ಹಾಕಿಸಿಕೊಂಡ ನಂತರದ ದಿನಗಳಲ್ಲಿ ಆರೋಗ್ಯ ಹದಗೆಟ್ಟಿದ್ದು, ಹೆಚ್‌ಐವಿ ಲಕ್ಷಣಗಳು ಕಂಡುಬಂದಿವೆ.

ಮಹಿಳೆಯರಿಗೆ ಹಚ್ಚೆ ಹಾಕಿದ ಹಚ್ಚೆ ಹಾಕುವ ಕಲಾವಿದೆ ಸೂಚಿಯನ್ನು ಬದಲಾಯಿಸದೆ ಹಲವು ಬಾರಿ ಮರುಬಳಕೆ ಮಾಡಿದ ಕಾರಣದಿಂದ ಹೆಚ್‌ಐವಿ ಸೋಂಕು ಹರಡಿದೆ. ಹಲವಾರು ಬಾರಿ ಒಂದೇ ಸೂಚಿಯನ್ನು ಹಚ್ಚೆಗಾಗಿ ಬಳಸಿದ ಕಾರಣ 68 ಮಹಿಳೆಯರಿಗೆ ಭಯಾನಕ ರೋಗ ತಗುಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಮೆರಿಕದಲ್ಲಿ ಟ್ರಂಪ್ ಆಡಳಿತ; ಜಾಗರೂಕವಾಗಿರಬೇಕಿದೆ ಭಾರತ!

ಹೆಚ್‌ಐವಿ ಸೋಂಕಿಗೆ ಒಳಗಾದ 68 ಮಹಿಳೆಯರು 4 ವರ್ಷದಿಂದ ರೋಗದಿಂದ ಬಳಲುತ್ತಿದ್ದಾರೆ. ಎಲ್ಲ ಸೋಂಕಿತ ಮಹಿಳೆಯರು ಸುರಕ್ಷಿತವಾಗಿ ಮಕ್ಕಳಿಗೆ ಜನ್ಮ ನೀಡಿದ್ದಾರೆ.

ಹೆಚ್‌ಐವಿ ಹಾಗೂ ಹೆಪಟೈಟಿಸ್ ಸೋಂಕು ಸಾಮಾನ್ಯವಾಗಿ ಸೋಂಕಿತರಿಂದ ಅಸುರಕ್ಷಿತ ಲೈಂಗಿಕ ಸಂಪರ್ಕ ಹಾಗೂ ಸೋಂಕಿತ ರಕ್ತ ವರ್ಗಾವಣೆಯಿಂದ ಹರಡುತ್ತದೆ. ಹಾಗೆಯೇ ಸೋಂಕಿತರಿಗೆ ಬಳಸಿದ ಸೂಜಿಯಿಂದಲೂ ರೋಗ ಉಂಟಾಗುತ್ತದೆ. ಈ ಹಿನ್ನಲೆಯಲ್ಲಿ ಸೋಂಕನ್ನು ತಡೆಯಲು ಎಚ್ಚರಿಕೆ ಹಾಗೂ ಜಾಗೃತಿ ಅತ್ಯಗತ್ಯವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ 2170 ಹೆಚ್‌ಐವಿ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಬಹುತೇಕ ಸೋಂಕಿತರು ಹಿಂದುಳಿದ ಪ್ರದೇಶಗಳಲ್ಲಿ ವಾಸಿಸುವರಾಗಿದ್ದಾರೆ ಎಂದು ಗಾಜಿಯಾಬಾದ್‌ ಜಿಲ್ಲಾ ಆರೋಗ್ಯ ಕೇಂದ್ರದ ವರದಿ ತಿಳಿಸಿದೆ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...