7.4% ಜಿಡಿಪಿ? ಮೋದಿ ಸರ್ಕಾರದ ಸಂಭ್ರಮಕ್ಕೆ ಕೊಕ್ಕೆ ಹಾಕಿದ ಅರವಿಂದ್ ಸುಬ್ರಹ್ಮಣ್ಯಂ!

Date:

ಭಾರತದ ಜಿಡಿಪಿ 7.4%ಗೆ ಜಿಗಿದಿದೆ ಎಂದು ಮೋದಿ ಸರ್ಕಾರವು ಸಂಭ್ರಮಿಸುತ್ತಿದೆ. ಕೇಂದ್ರ ಸರ್ಕಾರದ ಸಂಭ್ರಮಕ್ಕೆ ಆರ್ಥಿಕ ತಜ್ಞ ಅರವಿಂದ್‌ ಸುಬ್ರಹ್ಮಣಂ ಮಂಜು ಎರಚಿದ್ದಾರೆ. “ಭಾರತದ ಆರ್ಥಿಕತೆಯು ಬಲವಾದ ಚೇತರಿಕೆಯ ಲಕ್ಷಣಗಳನ್ನು ತೋರಿಸುತ್ತಿಲ್ಲ. ಅಮೆರಿಕದ ಭಾರೀ ಸುಂಕಗಳ ಅಪಾಯ ಮತ್ತು ಕಡಿಮೆ ಬೆಲೆಯ ಚೀನೀ ಸರಕುಗಳ ಡಂಪಿಂಗ್‌ನಿಂದ ಭಾರತದ ಅರ್ಥಿಕ ಭವಿಷ್ಯವು ದುರ್ಬಲಗೊಳ್ಳಬಹುದು ಎಂದು ಮಾಜಿ ಮುಖ್ಯ ಆರ್ಥಿಕ ಸಲಹೆಗಾರ ಅರವಿಂದ್ ಸುಬ್ರಮಣಿಯನ್ ಹೇಳಿದ್ದಾರೆ.

ಈ ವರ್ಷ (2026) ಮಾರ್ಚ್‌ನಲ್ಲಿ ಕೊನೆಗೊಳ್ಳಲಿರುವ 2025-2026ರ ಆರ್ಥಿಕ ವರ್ಷದ ಅಂದಾಜು ದತ್ತಾಂಶವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಅದರಲ್ಲಿ, ಭಾರತದ ಆರ್ಥಿಕತೆಯು 7.4%ಗೆ ಏರಿಕೆಯಾಗಿದೆ. ಭಾರತವು ತನ್ನ ಬೆಳವಣಿಗೆಯ ಹಾದಿಯನ್ನು ವಿಸ್ತರಿಸಿದೆ ಎಂದು ಹೇಳಿಕೊಂಡಿದೆ.

ಆದರೆ, ಕೇಂದ್ರ ಸರ್ಕಾರದ ಈ ದತ್ತಾಂಶವನ್ನು ಸುಬ್ರಮಣಿಯನ್ ಅವರು ಅಲ್ಲಗಳೆದಿದ್ದಾರೆ. “ನಾವು ಆ ಅಂಕಿಅಂಶವನ್ನು ಎಚ್ಚರಿಕೆಯಿಂದ ಗಮನಿಸಬೇಕು. ಒಟ್ಟು ದೇಶೀಯ ಉತ್ಪನ್ನ ಲೆಕ್ಕಾಚಾರದಿಂದ ಹಣದುಬ್ಬರವನ್ನು ತೆಗೆದುಹಾಕಿದರೆ, ಭಾರತದ ಆರ್ಥಿಕತೆ ಚೆನ್ನಾಗಿದೆಯೆಂದು ಅಳೆಯಲು ಸಾಧ್ಯವೇ?” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರಗತಿಯ ದಿಕ್ಕು ಮತ್ತು ದೃಷ್ಟಿಯಿಂದಲೂ ಸಹ, ದೇಶದ ಆರ್ಥಿಕತೆ ಚೇತರಿಸಿಕೊಳ್ಳುತ್ತಿದೆ ಎಂಬುದು ಸ್ಪಷ್ಟವಾಗಿಲ್ಲ. ಅಮೆರಿಕದ ವ್ಯಾಪಾರ ನೀತಿಯಿಂದ ಅಪಾಯಗಳು ಸಹ ಹೆಚ್ಚಿವೆ. ಟ್ರಂಪ್ ಅವರು ಭಾರತೀಯ ಸರಕುಗಳ ಮೇಲಿನ ದಂಡನಾತ್ಮಕ 50% ಸುಂಕಗಳನ್ನು ಹೇರಿದ್ದಾರೆ. ಇದು ಅನಿಶ್ಚಿತತೆಗೆ ಕಾರಣವಾಗಿದೆ. ಸುಂಕ ದರ ಇನ್ನೂ ಹೆಚ್ಚಾಗಬಹುದು. ಇದೆಲ್ಲವೂ, ಅಮೆರಿಕ-ಭಾರತ ನಡುವಿನ ವ್ಯಾಪಾರ ಒಪ್ಪಂದದ ಸಾಧ್ಯತೆಯು ಕಡಿಮೆ ಇರುವಂತೆ ಕಾಣುತ್ತಿದೆ” ಎಂದು ಸುಬ್ರಮಣಿಯನ್ ಹೇಳಿದ್ದಾರೆ.

“ಭಾರತವು ‘ಚೀನೀ ವ್ಯಾಪಾರೀಕರಣ’ದ ಒತ್ತಡವನ್ನು ಎದುರಿಸುತ್ತಿದೆ. ಏಕೆಂದರೆ, ಚೀನಾ ತನ್ನ ಸರಕುಗಳನ್ನು ಭಾರತ ಸೇರಿದಂತೆ ಅಭಿವೃದ್ಧಿಶೀಲ ರಾಷ್ಟ್ರಗಳಿಗೆ ವೇಗವಾಗಿ ರಫ್ತು ಮಾಡುತ್ತಿದೆ. ಇದು ದೇಶೀಯ ಆರ್ಥಿಕತೆಯ ಮೇಲೆ ಪರಿಣಾಮ ಬೀರುತ್ತದೆ” ಎಂದು ಅವರು ಹೇಳಿದ್ದಾರೆ.

“ಜಗತ್ತಿನ ಆರ್ಥಿಕತೆಯಲ್ಲಿ ಭಾರತದ ಸ್ಥಾನವು ಗಟ್ಟಿಯಾಗಿದ್ದರೂ, ಆಂತರಿಕವಾಗಿ, ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಕಡಿತದಿಂದಾಗಿ ಹಣಕಾಸಿನ ಪರಿಸ್ಥಿತಿಯು ಪ್ರಬಲವಾಗಿಲ್ಲ” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...