ಪ್ರತಿ ದಿನ 7 ಮಂದಿ ಎಸ್‌ಸಿ/ಎಸ್‌ಟಿ ಮಹಿಳೆಯರ ಮೇಲೆ ಅತ್ಯಾಚಾರ: ಎಂಪಿ ಸರ್ಕಾರ ಮಾಹಿತಿ

Date:

ಮಧ್ಯಪ್ರದೇಶದಲ್ಲಿ ಪ್ರತಿ ದಿನ ಸರಾಸರಿ 7 ಮಂದಿ ದಲಿತ ಮತ್ತು ಬುಡಕಟ್ಟು ಸಮುದಾಯಗಳ ಮಹಿಳೆಯರ ಮೇಲೆ ಅತ್ಯಾಚಾರ ನಡೆಯುತ್ತಿದೆ ಎಂದು ಮಧ್ಯಪ್ರದೇಶದ ಆಡಳಿತಾರೂಢ ಬಿಜೆಪಿ ಸರ್ಕಾರ ತಿಳಿಸಿದೆ.

ಪ್ರಸ್ತುತ ನಡೆಯುತ್ತಿರುವ ವಿಧಾನಸಭಾ ಅಧಿವೇಶನದಲ್ಲಿ ಕಾಂಗ್ರೆಸ್‌ ಶಾಸಕ ಆರಿಫ್ ಮಸೂದ್ ಕೇಳಿದ್ದ ಪ್ರಶ್ನೆಗೆ ಸರ್ಕಾರ ಉತ್ತರಿಸಿದೆ. “2022ರಿಂದ 2024ರ ನಡುವೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಒಟ್ಟು 7,418 ಮಹಿಳೆಯರ ಮೇಲಿನ ಅತ್ಯಾಚಾರ ಪ್ರಕರಣಗಳು ವರದಿಯಾಗಿವೆ” ಎಂದು ಸರ್ಕಾರ ಹೇಳಿದೆ. ಅಂದರೆ, ದಿನನಿತ್ಯ ಸರಾಸರಿ 7 ಮಂದಿ ದಲಿತ ಮತ್ತು ಬುಡಕಟ್ಟು ಸಮುದಾಯಗಳ ಮಹಿಳೆಯರ ಮೇಲೆ ಅತ್ಯಾಚಾರಗಳು ನಡೆದಿವೆ.

ಅಲ್ಲದೆ, ಇದೇ 2022ರಿಂದ 2024ರ ಅವಧಿಯಲ್ಲಿ ದಲಿತ ಮತ್ತು ಬುಡಕಟ್ಟು ಸಮುದಾಯದ 558 ಮಹಿಳೆಯರ ಹತ್ಯೆಗಳಾಗಿವೆ. 338 ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರಗಳು ನಡೆದಿವೆ. ಸುಮಾರು 1,906 ಎಸ್‌ಸಿ/ಎಸ್‌ಟಿ ಮಹಿಳೆಯರು ಕೌಟುಂಬಿಕ ದೌರ್ಜನ್ಯಕ್ಕೆ ತುತ್ತಾಗಿದ್ದಾರೆ ಎಂದು ಸರ್ಕಾರದ ಅಂಕಿಅಂಶಗಳು ತಿಳಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಒಟ್ಟಾರೆಯಾಗಿ ಕಳೆದ ಮೂರು ವರ್ಷಗಳಲ್ಲಿ ಎಸ್‌ಸಿ/ಎಸ್‌ಟಿ ಮಹಿಳೆಯರ ಮೇಲಿನ ಒಟ್ಟು 44,978 ಅಪರಾಧ ಪ್ರಕರಣಗಳು ದಾಖಲಾಗಿವೆ. ಅಂದರೆ, ಎಸ್‌ಸಿ/ಎಸ್‌ಟಿ ಮಹಿಳೆಯರ ಮೇಲೆ ದಿನನಿತ್ಯ ಸರಾಸರಿ 41 ಅಪರಾಧ ಪ್ರಕರಣಗಳು ಘಟಿಸುತ್ತಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...