ರೇಬೀಸ್‌ ಲಸಿಕೆ ಪಡೆದರೂ ಬಾಲಕಿ ಸಾವು; ತಿಂಗಳಲ್ಲಿ ಕೇರಳದಲ್ಲಿ ಇದು ಮೂರನೇ ಪ್ರಕರಣ

Date:

ರೇಬೀಸ್ ಲಸಿಕೆ ಪಡೆದರೂ ಚಿಕಿತ್ಸೆ ಪಡೆಯುತ್ತಿದ್ದ ಏಳು ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ಕೇರಳದಲ್ಲಿ ನಡೆದಿದೆ.

ಕೊಲ್ಲಂನ ಕುನ್ನಿಕೋಡ್‌ನ ನಿಯಾ ಫೈಸಲ್‌ ಮೃತ ಬಾಲಕಿ. ರೇಬೀಸ್‌ ಪತ್ತೆಯಾದ ಬಳಿಕ ಆಕೆಯನ್ನು ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಈ ಸಾವಿನೊಂದಿಗೆ ಕಳೆದ ಒಂದು ತಿಂಗಳಲ್ಲಿ ಕೇರಳದಲ್ಲಿ ರೇಬೀಸ್ ಸೋಂಕಿನಿಂದ ಸಾವನ್ನಪ್ಪಿದ ಮಕ್ಕಳ ಸಂಖ್ಯೆ ಮೂರಕ್ಕೇರಿದೆ.

ಏಪ್ರಿಲ್ 8 ರಂದು ಬಾಲಕಿ ಅಂಗಳದಲ್ಲಿ ಆಟವಾಡುತ್ತಿದ್ದಾಗ ಬೀದಿ ನಾಯಿ ಕಚ್ಚಿತ್ತು. ಅಂಗಳದಲ್ಲಿದ್ದ ಬಾತುಕೋಳಿ ಮೇಲೆ ದಾಳಿ ಮಾಡಲು ಮುಂದಾಗಿದ್ದಾಗ ಬಾಲಕಿ ರಕ್ಷಿಸಲು ಹೋಗಿದ್ದಳು. ಈ ವೇಳೆ ನಾಯಿ ಬಾಲಕಿಯ ಮೊಣಕೈಗೆ ಕಚ್ಚಿತ್ತು. ಬಾಲಕಿಯನ್ನು ಕೂಡಲೇ ವಿಲಕ್ಕುಡಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ರೇಬೀಸ್ ಲಸಿಕೆಯ ಮೊದಲ ಡೋಸ್ ನೀಡಲಾಯಿತು. ನಂತರ ಏ.11 ಮತ್ತು 15 ರಂದು ಕ್ರಮವಾಗಿ ಎರಡನೇ ಮತ್ತು ಮೂರನೇ ಡೋಸ್ ನೀಡಲಾಯಿತು. ಅಂತಿಮ ಡೋಸ್ ಅನ್ನು ಮೇ 6 ರಂದು ನೀಡಲು ನಿಗದಿಪಡಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎರಡನೇ ಡೋಸ್‌ ಪಡೆದ ಕೆಲ ದಿನಗಳಲ್ಲಿ ಆಕೆಗೆ ಜ್ವರ ಬಂದಿದೆ. ನಾಯಿ ಕಚ್ಚಿದ ಮೊಣಕೈಯಲ್ಲಿ ನೋವು ಅನುಭವಿಸಲು ಪ್ರಾರಂಭಿಸಿದಳು. ನಂತರ ಆಕೆಯನ್ನು ಪುನಲೂರು ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಯಿತು ಮತ್ತು ನಂತರ ವಿಶೇಷ ಆರೈಕೆಗಾಗಿ ಸ್ಯಾಟ್‌ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಂಗಳೂರು ಹತ್ಯೆಗಳಲ್ಲಿ ಮಾಧ್ಯಮಗಳೂ ಆರೋಪಿಗಳಲ್ಲವೇ?

ಬಾಲಕಿಯನ್ನು ಕಚ್ಚಿದ್ದ ನಾಯಿಯನ್ನು ಸ್ಥಳೀಯ ನಿವಾಸಿಗಳು ಓಡಿಸಿದ್ದರೂ ಮರುದಿನ ಹತ್ತಿರದ ಹೊಲದಲ್ಲಿ ಅದು ಶವವಾಗಿ ಪತ್ತೆಯಾಗಿತ್ತು.

2021 ರಲ್ಲಿ ರಾಜ್ಯದಲ್ಲಿ 11 ಮಂದಿ ರೇಬೀಸ್‌ನಿಂದ ಸಾವನ್ನಪ್ಪಿದ್ದಾರೆ. 2022 ರಲ್ಲಿ 27, 2023 ರಲ್ಲಿ 25,2024 ರಲ್ಲಿ 26 ಮಂದಿ ಮೃತಪಟ್ಟಿದ್ದಾರೆ. ಈ ವರ್ಷದ ಐದನೇ ತಿಂಗಳಿಗೆ ಕಾಲಿಡುತ್ತಿದ್ದಂತೆ, 14 ಜನರು ಸಾವನ್ನಪ್ಪಿದ್ದಾರೆ. ಇವರಲ್ಲಿ ಹೆಚ್ಚಿನವರು ಮಕ್ಕಳು. ಕಳೆದ 5 ವರ್ಷಗಳಲ್ಲಿ 102 ಜನರು ರೇಬೀಸ್‌ನಿಂದ ಸಾವನ್ನಪ್ಪಿದ್ದಾರೆ. ಈ ಪೈಕಿ 20 ಮಂದಿ ಲಸಿಕೆ ಹಾಕಿಸಿಕೊಂಡಿದ್ದರೂ ಪ್ರಾಣ ಕಳೆದುಕೊಂಡಿದ್ದಾರೆ.

ನಾಯಿ ಕಚ್ಚಿದ ಮೊದಲ ಕೆಲವು ನಿಮಿಷಗಳು ನಿರ್ಣಾಯಕ ಎಂದು ವೈದ್ಯರು ಹೇಳುತ್ತಾರೆ. ಗಾಯವನ್ನು ಸೋಪಿನಿಂದ ಕೆಲವು ನಿಮಿಷ ತೊಳೆದುಕೊಂಡು ಲಸಿಕೆ ಹಾಕಿಸಿಕೊಳ್ಳುವುದು ತುರ್ತಾಗಿ ಮಾಡಬೇಕಾದ ಕೆಲಸಗಳಾಗಿವೆ. ರೇಬೀಸ್ ರೋಗವು ಅಂತಿಮ ಹಂತ ತಲುಪಿದರೆ ಯಾವುದೇ ಪರಿಣಾಮಕಾರಿ ಚಿಕಿತ್ಸೆ ಇಲ್ಲ ಮತ್ತು ಇದು ಶೇ. 100 ಮಾರಣಾಂತಿಕವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...