ಲೋಕಸಭೆ ಚುನಾವಣೆ| 74 ಮಹಿಳೆಯರಿಗೆ ಗೆಲುವು, 2019ಕ್ಕಿಂತ ಕಡಿಮೆ

Date:

ಲೋಕಸಭೆ ಚುನಾವಣೆಯಲ್ಲಿ ಈ ಬಾರಿ 74 ಮಹಿಳೆಯರಿಗೆ ಗೆಲುವು ಕೈಹಿಡಿದಿದ್ದು, 2019ರಲ್ಲಿ ಚುನಾಯಿತರಾದ 78 ಮಹಿಳೆಯರಿಗಿಂತ ಸ್ವಲ್ಪ ಕಡಿಮೆಯಾಗಿದೆ. ದೇಶದಲ್ಲಿ ಪಶ್ಚಿಮ ಬಂಗಾಳದಲ್ಲಿ ಅಧಿಕ ಮಹಿಳೆಯರು ಚುನಾಯಿತರಾಗಿದ್ದು ಒಟ್ಟು 11 ಬಂಗಾಳದ ಮಹಿಳೆಯರು ಸಂಸದರಾಗಿದ್ದಾರೆ.

ಒಟ್ಟು 797 ಮಹಿಳಾ ಅಭ್ಯರ್ಥಿಗಳು ಚುನಾವಣೆಯಲ್ಲಿ ಸ್ಪರ್ಧಿಸಿದ್ದು, ಬಿಜೆಪಿ ಗರಿಷ್ಠ 69 ಮತ್ತು ಕಾಂಗ್ರೆಸ್ 41 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.

ಸಂಸತ್ತಿನಲ್ಲಿ ಮಹಿಳೆಯರಿಗೆ ಮೂರನೇ ಒಂದು ಭಾಗದಷ್ಟು ಸ್ಥಾನಗಳನ್ನು ಮೀಸಲಿಡುವ ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರವಾದ ನಂತರ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ನಡೆದ ಮೊದಲ ಚುನಾವಣೆ ಇದಾಗಿದೆ. ಈ ಕಾನೂನು ಇನ್ನೂ ಜಾರಿಗೆ ಬಂದಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?  ಲೋಕಸಭಾ ಚುನಾವಣೆ | ಅಖಾಡದಲ್ಲಿ ಮಹಿಳೆಯರು ಗೆದ್ದಿದ್ಯಾಕೆ? ಸೋತಿದ್ಯಾಕೆ?

ಥಿಂಕ್-ಟ್ಯಾಂಕ್ ಪಿಆರ್‌ಎಸ್‌ನ ವಿಶ್ಲೇಷಣೆಯ ಪ್ರಕಾರ, ಈ ಮಹಿಳಾ ಸಂಸದರಲ್ಲಿ ಶೇಕಡ 16ರಷ್ಟು ಮಹಿಳೆಯರು 40 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿದ್ದಾರೆ. ಶೇಕಡ 41ರಷ್ಟು ಮಹಿಳಾ ಸಂಸದರು (30 ಸಂಸದರು) ಈ ಹಿಂದೆ ಲೋಕಸಭೆಯ ಸದಸ್ಯರಾಗಿದ್ದರು. ಉಳಿದವರಲ್ಲಿ ಒಬ್ಬ ಸಂಸದರು ರಾಜ್ಯಸಭಾ ಸದಸ್ಯರಾಗಿದ್ದಾರೆ.

“ವರ್ಷಗಳಿಂದ ಲೋಕಸಭೆಯಲ್ಲಿ ಮಹಿಳೆಯರ ಸಂಖ್ಯೆಯಲ್ಲಿ ನಿಧಾನಗತಿಯ ಹೆಚ್ಚಳ ಕಂಡುಬಂದಿದೆ. ಮಹಿಳಾ ಸಂಸದರ ಲೆಕ್ಕಾಚಾರದಲ್ಲಿ ಭಾರತ ಇನ್ನೂ ಹಲವಾರು ದೇಶಗಳಿಗಿಂತ ಹಿಂದುಳಿದಿದೆ. ಉದಾಹರಣೆಗೆ, ದಕ್ಷಿಣ ಆಫ್ರಿಕಾದಲ್ಲಿ ಶೇಕಡ 46ರಷ್ಟು ಸಂಸದರು ಮಹಿಳೆಯರು, ಯುಕೆಯಲ್ಲಿ ಶೇಕಡ 35 ಮತ್ತು ಯುಎಸ್‌ನಲ್ಲಿ ಶೇಕಡ 29ರಷ್ಟು ಸಂಸದರು ಮಹಿಳೆಯರಾಗಿದ್ದಾರೆ” ಎಂದು ವಿಶ್ಲೇಷಣೆ ಹೇಳಿದೆ.

ಚುನಾವಣಾ ಆಯೋಗದ ಅಂಕಿಅಂಶಗಳ ಪ್ರಕಾರ ಈ ಬಾರಿ ಚುನಾವಣೆಯಲ್ಲಿ ಬಿಜೆಪಿಯ 30 ಮಹಿಳಾ ಅಭ್ಯರ್ಥಿಗಳು, ಕಾಂಗ್ರೆಸ್‌ನ 14, ಟಿಎಂಸಿಯ 11, ಸಮಾಜವಾದಿ ಪಕ್ಷದ 4, ಡಿಎಂಕೆಯ ಮೂರು ಮತ್ತು ಜೆಡಿಯು ಮತ್ತು ಎಲ್‌ಜೆಪಿ (ಆರ್) ತಲಾ ಇಬ್ಬರು ಗೆದ್ದಿದ್ದಾರೆ.

ಇದನ್ನು ಓದಿದ್ದೀರಾ?  ಮಹಾಲಕ್ಷ್ಮೀ ಯೋಜನೆ | ಕಾಂಗ್ರೆಸ್‌ ಗೆಲುವಿನ ಭರವಸೆ; ಖಾತೆ ತೆರೆಯಲು ಪೋಸ್ಟ್‌ ಆಫೀಸ್‌ ಮುಂದೆ ನಿಂತ ಮಹಿಳೆಯರು

ಶೇಕಡ 13.62ರಷ್ಟು ಮಹಿಳಾ ಸಂಸದರನ್ನು ಹೊಂದಿರುವ 18ನೇ ಲೋಕಸಭೆಯು 1952ಕ್ಕೆ ಹೋಲಿಸಿದರೆ ಅತಿ ಹೆಚ್ಚು ಮಹಿಳಾ ಸದಸ್ಯರನ್ನು ಹೊಂದಿದೆ. 17ನೇ ಲೋಕಸಭೆಯು 78 ಮಹಿಳಾ ಸಂಸದರನ್ನು ಹೊಂದಿದ್ದು ಇದು ಒಟ್ಟು ಬಲದ ಶೇಕಡ 14 ಆಗಿತ್ತು. 16ನೇ ಲೋಕಸಭೆಯಲ್ಲಿ, 64 ಮಹಿಳೆಯರು ಅದರ ಸದಸ್ಯರಾಗಿದ್ದರೆ, 15ನೇ ಲೋಕಸಭೆಗೆ 52 ಮಹಿಳೆಯರು ಆಯ್ಕೆಯಾಗಿದ್ದರು.

ಮಹಿಳಾ ಸಂಸದರಿವರು

ಬಿಜೆಪಿಯ ಹೇಮಾ ಮಾಲಿನಿ, ಟಿಎಂಸಿಯ ಮಹುವಾ ಮೊಯಿತ್ರಾ, ಎನ್‌ಸಿಪಿಯ ಸುಪ್ರಿಯಾ ಸುಲೆ ಮತ್ತು ಎಸ್‌ಪಿಯ ಡಿಂಪಲ್ ಯಾದವ್ ಅವರು ಲೋಕಸಭೆ ಚುನಾವಣೆಯಲ್ಲಿ ತಮ್ಮ ಸ್ಥಾನಗಳನ್ನು ಉಳಿಸಿಕೊಂಡಿದ್ದಾರೆ. ಕಂಗನಾ ರಣಾವತ್ ಮತ್ತು ಮಿಶಾ ಭಾರತಿ ಹೊಸದಾಗಿ ಸಂಸದರಾಗಿ ಆಯ್ಕೆಯಾಗಿದ್ದಾರೆ.

ಬಿಜೆಪಿಯ ಭದ್ರಕೋಟೆಯಾದ ಗುಜರಾತ್‌ನಲ್ಲಿ ಮಹಿಳಾ ಅಭ್ಯರ್ಥಿ ಗೆನಿಬೆನ್ ಠಾಕೂರ್ ಹತ್ತು ವರ್ಷಗಳ ಬಳಿಕ ಕಾಂಗ್ರೆಸ್‌ಗೆ ಗೆಲುವು ತಂದುಕೊಟ್ಟಿದ್ದಾರೆ. ಸಮಾಜವಾದಿ ಪಕ್ಷದ ಮಚ್ಲಿಶಹರ್‌ನ 25 ವರ್ಷದ ಅಭ್ಯರ್ಥಿ ಪ್ರಿಯಾ ಸರೋಜ್ ಮತ್ತು ಕೈರಾನಾ ಕ್ಷೇತ್ರದಿಂದ 29ವರ್ಷದ ಇಕ್ರಾ ಚೌಧರಿ ಗೆಲುವು ಸಾಧಿಸಿದ ಅತ್ಯಂತ ಕಿರಿಯ ಮಹಿಳಾ ಸಂಸದರು.

ಇದನ್ನು ಓದಿದ್ದೀರಾ?  ಈ ದಿನ ಸಂಪಾದಕೀಯ | ಅಧಿಕಾರ ಸ್ಥಾನಗಳಿಂದ ಮಹಿಳೆಯರನ್ನು ಹೊರಗಿಟ್ಟು ಸಮಾನತೆ ಬಗ್ಗೆ ಮಾತನಾಡುವುದಕ್ಕೆ ಅರ್ಥವಿದೆಯೇ?

ಗಮನಾರ್ಹವಾಗಿ, ನಾಮ್ ತಮಿಲರ್ ಕಚ್ಚಿಯಂತಹ ಪಕ್ಷಗಳು ಶೇಕಡ 50ರಷ್ಟು ಮಹಿಳಾ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಮೂಲಕ ಸಮಾನ ಲಿಂಗ ಪ್ರಾತಿನಿಧ್ಯವನ್ನು ಸಾಧಿಸಿವೆ. ಮಹಿಳಾ ಪ್ರಾತಿನಿಧ್ಯವನ್ನು ಹೊಂದಿರುವ ಇತರ ಪಕ್ಷಗಳಲ್ಲಿ ಲೋಕ ಜನಶಕ್ತಿ ಪಕ್ಷ (ರಾಮ್ ವಿಲಾಸ್) ಮತ್ತು ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ಸೇರಿದೆ. ಈ ಎರಡೂ ಪಕ್ಷಗಳಲ್ಲಿ ಶೇಕಡ 40ರಷ್ಟು ಮಹಿಳೆಯರಿಗೆ ಪ್ರಾತಿನಿಧ್ಯ ನೀಡಲಾಗಿದೆ.

ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಮತ್ತು ಬಿಜು ಜನತಾ ದಳ (ಬಿಜೆಡಿ) ಎರಡೂ ಶೇಕಡ 33ರಷ್ಟು ಮಹಿಳಾ ಪ್ರಾತಿನಿಧ್ಯವನ್ನು ಹೊಂದಿದ್ದರೆ, ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಶೇಕಡ 29ರಷ್ಟು ಮಹಿಳಾ ಪ್ರಾತಿನಿಧ್ಯವನ್ನು ಹೊಂದಿದೆ. ಸಮಾಜವಾದಿ ಪಕ್ಷವು ಶೇಕಡ 20ರಷ್ಟು ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಶೇಕಡ 25ರಷ್ಟು ಮಹಿಳಾ ಪ್ರಾತಿನಿಧ್ಯ ಹೊಂದಿದೆ.

ಲೋಕಸಭೆ ಚುನಾವಣೆಯಲ್ಲಿ ಒಟ್ಟು 8,360 ಅಭ್ಯರ್ಥಿಗಳು ಕಣದಲ್ಲಿದ್ದರು. ಮೂವರು ತೃತೀಯಲಿಂಗಿ ಅಭ್ಯರ್ಥಿಗಳು ಸ್ವತಂತ್ರವಾಗಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದು ಪರಾಭವಗೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...