ಒಡಿಶಾ | ಅಸ್ವಸ್ಥ ಪತ್ನಿಯನ್ನು ಆಸ್ಪತ್ರೆಗೆ 300 ಕಿ.ಮೀ. ಸೈಕಲ್ ರಿಕ್ಷಾದಲ್ಲೇ ಕರೆದೊಯ್ದ 75ರ ವೃದ್ಧ!

Date:

ತನ್ನ ಪಾರ್ಶ್ವವಾಯು ಪೀಡಿತ ಅಸ್ವಸ್ಥ ಪತ್ನಿಯನ್ನು 75ರ ವೃದ್ಧ ಆಸ್ಪತ್ರೆಗೆ 300 ಕಿ.ಮೀ. ಸೈಕಲ್ ರಿಕ್ಷಾದಲ್ಲೇ ಕರೆದೊಯ್ದ ಘಟನೆ ಒಡಿಶಾದಲ್ಲಿ ನಡೆದಿದೆ. ಸಂಬಲ್ಪುರದ ಮೋದಿಪಾದ ನಿವಾಸಿ ಬಾಬು ಲೋಹರ್ ಅವರ 70 ವರ್ಷ ಪತ್ನಿ ಜ್ಯೋತಿ ಅವರನ್ನು ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಕರೆದೊಯ್ಯುವಂತೆ ಸಂಬಲ್ಪುರದ ಸ್ಥಳೀಯ ವೈದ್ಯರು ಸಲಹೆ ನೀಡಿದ್ದರು. ಆದರೆ ಖಾಸಗಿ ಆಂಬ್ಯುಲೆನ್ಸ್ ಪಡೆಯಲು ಸಾಧ್ಯವಾಗದ ಕಾರಣ ಲೋಹರ್ ಸೈಕಲ್ ರಿಕ್ಷಾದಲ್ಲೇ ತನ್ನ ಪತ್ನಿಯನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

“ನಮಗೆ ಬೇರೆ ಯಾರೂ ಇಲ್ಲ. ನನಗೆ ಅವಳು, ಅವಳಿಗೆ ನಾನು ಅಷ್ಟೇ” ಎಂದು ಲೋಹರ್ ಮಾಧ್ಯಮಗಳಿಗೆ ಹೇಳಿದ್ದಾರೆ. ಸಂಬಲ್ಪುರದಿಂದ ಕಟಕ್‌ಗೆ ಲೋಹರ್ ಸೈಕಲ್ ರಿಕ್ಷಾ ತುಳಿದಿದ್ದಾರೆ. ಲೋಹರ್ ಹಗಲು ಪೂರ್ತಿ ಸೈಕಲ್ ತುಳಿದು ರಾತ್ರಿ ರಸ್ತೆ ಬದಿಯ ಅಂಗಡಿಗಳ ಬಳಿ ಆಶ್ರಯ ಪಡೆದಿದ್ದರು. ಸುಮಾರು ಒಂಬತ್ತು ದಿನಗಳ ಕಾಲ ಸಾಗಿ ಆಸ್ಪತ್ರೆಗೆ ತಲುಪಿದ್ದಾರೆ. ಅಲ್ಲಿ ಜ್ಯೋತಿ ಎರಡು ತಿಂಗಳ ತೀವ್ರ ಚಿಕಿತ್ಸೆ ಪಡೆದಿದ್ದಾರೆ.

ಇದನ್ನು ಓದಿದ್ದೀರಾ? ಅಧಿಕಾರಸ್ಥರಿಗೆ ಸುಡು ಬೆಂಕಿಯಾಗಿ, ಆದಿವಾಸಿಗಳ ಹಾದಿಯ ಬೆಳಕಾಗಿ ಬದುಕಿದ್ದಳು ಆಕೆ!

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚಿಕಿತ್ಸೆಯ ಬಳಿಕ ದಂಪತಿಗಳು ಜನವರಿ 19ರಂದು ಮತ್ತೆ ತಮ್ಮ ಊರಿಗೆ ಪ್ರಯಾಣ ಆರಂಭಿಸಿದ್ದಾರೆ. ಆದರೆ ಚೌದ್ವಾರ ಬಳಿ ವಾಹನವೊಂದು ಅವರ ರಿಕ್ಷಾಕ್ಕೆ ಡಿಕ್ಕಿ ಹೊಡೆದಿದ್ದು, ಅಪಘಾತದಲ್ಲಿ ವೃದ್ಧ ಮಹಿಳೆ ಗಂಭೀರವಾಗಿ ಗಾಯಗೊಂಡು ಹತ್ತಿರದ ಆರೋಗ್ಯ ಕೇಂದ್ರದಲ್ಲಿ ತಾತ್ಕಾಲಿಕವಾಗಿ ಚಿಕಿತ್ಸೆ ಪಡೆಯಬೇಕಾಯಿತು ಎಂದು ವರದಿಯಾಗಿದೆ.

ಈ ವೇಳೆ ಚೌದ್ವಾರದ ಆರೋಗ್ಯ ಕೇಂದ್ರದ ಡಾ. ವಿಕಾಸ್, ಈ ವೃದ್ದೆಗೆ ವೈದ್ಯಕೀಯ ಚಿಕಿತ್ಸೆಯನ್ನು ನೀಡಿದ್ದು, ಮಾತ್ರವಲ್ಲದೆ ದಂಪತಿ ತಮ್ಮ ಊರಿಗೆ ಮರಳಲು ವೈಯಕ್ತಿಕವಾಗಿ ಆರ್ಥಿಕ ಸಹಾಯವನ್ನೂ ಮಾಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...