ಒಂದೇ ವರ್ಷದಲ್ಲಿ 77,539 ಬೈಕ್ ಸವಾರರು ಸಾವು!

Date:

ದೇಶಾದ್ಯಂತ ಅಪಘಾತ ಪ್ರಕರಣಗಳು ದಿನದಿಂದ ದಿನಕ್ಕೆ ಏರುತ್ತಲೇ ಇವೆ. ಅಪಘಾತಗಳಿಗೆ ಸಂಚಾರ ನಿಯಮಗಳ ಉಲ್ಲಂಘನೆಗಳು ಕಾರಣವೆಂದು ಹೇಳಲಾಗುತ್ತಿದ್ದರೂ, ರಸ್ತೆಗುಂಡಿಗಳು ಹಾಗೂ ಅಸಮರ್ಪಕ ರಸ್ತೆಗಳೂ ಹೆಚ್ಚು ಅಪಘಾತಗಳಿಗೆ ಕಾರಣವೆಂದು ಹೇಳಲಾಗಿದೆ. ಈ ರಸ್ತೆ ಅಪಘಾತಗಳಲ್ಲಿ ಒಂದೇ ವರ್ಷದಲ್ಲಿ 77,539 ಮಂದಿ ದ್ವಿಚಕ್ರ (ಬೈಕ್) ವಾಹನ ಸವಾರರು ಸಾವನ್ನಪ್ಪಿದ್ದಾರೆ ಎಂದು ವರದಿ ಹೇಳಿದೆ.

2023ರಲ್ಲಿ ಸಂಭವಿಸಿರುವ ರಸ್ತೆ ಅಪಘಾತಗಳು ಮತ್ತು ಸಾವುಗಳ ಬಗ್ಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯವು ವರದಿ ಬಿಡುಗಡೆ ಮಾಡಿದೆ. ವರದಿ ಪ್ರಕಾರ, 2023ರಲ್ಲಿ ಒಟ್ಟು 77,539 ಮಂದಿ ಬೈಕ್ ಸವಾರರು ಸಾವನ್ನಪ್ಪಿದ್ದಾರೆ. ಈ ಪ್ರಮಾಣವು ದೇಶದಲ್ಲಿ ಘಟಿಸಿರುವ ಒಟ್ಟು ಅಪಘಾತ ಸಾವುಗಳಲ್ಲಿ 54%ರಷ್ಟಾಗಿದೆ.

ದೇಶದಲ್ಲಿ 2023ರಲ್ಲಿ ರಸ್ತೆ ಅಪಘಾತಗಳಿಂದ ಒಟ್ಟು 1,72,890 ಮಂದಿ ಸಾವನ್ನಪ್ಪಿದ್ದಾರೆ. ಈ ಸಾವುಗಳ ಸಂಖ್ಯೆ 2022ಕ್ಕೆ ಹೋಲಿಸಿದರೆ 2.6%ರಷ್ಟು ಏರಿಕೆಯಾಗಿವೆ. 2022ರಲ್ಲಿ ರಸ್ತೆ ಅಪಘಾತದಲ್ಲಿ ಒಟ್ಟು 1,68,491 ಮಂದಿ ಮೃತಪಟ್ಟಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2023ರಲ್ಲಿ ಸಂಭವಿಸಿದ ಅಪಘಾತ ಸಾವುಗಳಲ್ಲಿ ಅಗ್ರ ಸ್ಥಾನದಲ್ಲಿ ಬೈಕ್ ಅಪಘಾತ ಸಾವುಗಳಿವೆ. ಇನ್ನು, 2ನೇ ಸ್ಥಾನದಲ್ಲಿ ಕಾರು/ಟ್ಯಾಕ್ಸಿ ಅಪಘಾತ ಸಾವುಗಳಿವೆ.

ಈ ಲೇಖನ ಓದಿದ್ದೀರಾ?: ಭಾರತ-ಚೀನಾ-ರಷ್ಯಾ ದೋಸ್ತಿ: ಅಮೆರಿಕದ ನಿಲುವೇನು?

ಇನ್ನು, 35,000ಕ್ಕಿಂತ ಹೆಚ್ಚು ಮಂದಿ ಪಾದಚಾರಿಗಳು ಕೂಡ ಅಪಘಾತಗಳಲ್ಲಿ ಮೃತಪಟ್ಟಿದ್ದಾರೆ. ಇವರಲ್ಲಿ, 25,000ಕ್ಕೂ ಹೆಚ್ಚು ಮಂದಿ ದ್ವಿಚಕ್ರ ವಾಹನಗಳು ಡಿಕ್ಕಿ ಹೊಡೆದು ಮೃತಪಟ್ಟಿದ್ದಾರೆ. ಬೈಕ್ ಡಿಕ್ಕಿ ಹೊಡೆದು ಸಾವನ್ನಪ್ಪಿದ ಪಾದಚಾರಿಗಳ ಸಂಖ್ಯೆಯ ತಮಿಳುನಾಡಿನಲ್ಲಿ ಅಧಿಕವಾಗಿದೆ. ಅಲ್ಲಿ, 1,796 ಮಂದಿ ಪಾದಚಾರಿಗಳು ಮೃತಪಟ್ಟಿದ್ದಾರೆ. ಪಶ್ಚಿಮ ಬಂಗಾಳದಲ್ಲಿ 938, ಬಿಹಾರದಲ್ಲಿ 865, ಕರ್ನಾಟಕದಲ್ಲಿ 787 ಹಾಗೂ ಮಹಾರಾಷ್ಟ್ರ 747 ಮಂದಿ ಪಾದಚಾರಿಗಳು ಬೈಕ್‌ ಡಿಕ್ಕಿಗೆ ಬಲಿಯಾಗಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...