ಸಾಮೂಹಿಕ ‘ಸಿಕ್ ಲೀವ್’ ಹಾಕಿಕೊಂಡ ಸಿಬ್ಬಂದಿಗಳು; 78 ವಿಮಾನಗಳು ರದ್ದು!

Date:

ಸಿಬ್ಬಂದಿಗಳು ಯಾವುದೇ ಸೂಚನೆಯಿಲ್ಲದೆ ಸಾಮೂಹಿಕವಾಗಿ ‘ಸಿಕ್ ಲೀವ್’ (Mass Sick Leave) ತೆಗೆದುಕೊಂಡ ಕಾರಣದಿಂದಾಗಿ ಕನಿಷ್ಠ 78 ಅಂತರರಾಷ್ಟ್ರೀಯ ಮತ್ತು ದೇಶೀಯ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ.

ಸಿಬ್ಬಂದಿಗಳು ವೇತನ ಮತ್ತು ಪ್ರೋತ್ಸಾಹಧನದ ವಿಚಾರದಲ್ಲಿ ಅತೃಪ್ತರಾಗಿದ್ದಾರೆಂದು ಶಂಕಿಸಲಾಗಿದೆ ಎಂದು ವಿಮಾನಯಾನ ಸಂಸ್ಥೆಯ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ಇಂಡಿಯಾ ಟುಡೆ ಟಿವಿ ವರದಿ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಮಾನ ನಿಲ್ದಾಣಗಳಲ್ಲಿ ಅವ್ಯವಸ್ಥೆಯನ್ನೂ ಸರಿಪಡಿಸಲು ಸಿಬ್ಬಂದಿಗಳು ಬಯಸಿದ್ದರು. ಈಗ ಪ್ರತಿಭಟನೆಯ ಭಾಗವಾಗಿ ಎಲ್ಲ ಸಿಬ್ಬಂದಿಗಳು ಏಕಾಏಕಿ ರಜೆ ಹಾಕಿಕೊಂಡಿದ್ದಾರೆ. ಅಲ್ಲದೆ, ತಮ್ಮ ಫೋನ್‌ಗಳನ್ನು ಕೂಡಾ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಇದನ್ನು ಓದಿದ್ದೀರಾ? ಮಂಗಳೂರು | ಬೆಂಗಳೂರಿಗೆ ತೆರಳಬೇಕಿದ್ದ ಏರ್‌ಇಂಡಿಯಾ ವಿಮಾನ ಕೊನೆ ಕ್ಷಣದಲ್ಲಿ ರದ್ದು: ಪ್ರಯಾಣಿಕರಿಂದ ಆಕ್ರೋಶ

“ನಮ್ಮ ಸಂಸ್ಥೆಯ ಸಿಬ್ಬಂದಿಗಳ ಒಂದು ವಿಭಾಗವು ಕೊನೆಯ ಕ್ಷಣದಲ್ಲಿ ಅನಾರೋಗ್ಯಕ್ಕೆ ಒಳಗಾಗಿರುವುದಾಗಿ ತಿಳಿಸಿದೆ. ಇದರಿಂದಾಗಿ ವಿಮಾನ ವಿಳಂಬ ಮತ್ತು ರದ್ದತಿಯಾಗಿದೆ. ನಾವು ಪ್ರಯಾಣಿಕರಿಗೆ ಇದರಿಂದ ಉಂಟಾಗುವ ಅನಾನುಕೂಲತೆಗಳನ್ನು ತಪ್ಪಿಸಲು ಎಲ್ಲ ರೀತಿಯ ಪ್ರಯತ್ನ ಮಾಡುತ್ತೇವೆ. ಜೊತೆಗೆ ಸಿಬ್ಬಂದಿಗಳು ದಿಢೀರ್ ರಜೆ ಹಾಕಲು ಕಾರಣವೇನು ಎಂದು ತಿಳಿಯುವ ಪ್ರಯತ್ನ ಮಾಡುತ್ತೇವೆ” ಎಂದು ಏರ್ ಇಂಡಿಯಾ ಹೇಳಿದೆ.

“ಈ ಅನಿರೀಕ್ಷಿತ ಅಡಚಣೆಗಾಗಿ ನಾವು ನಮ್ಮ ಪ್ರಯಾಣಿಕರಿಗೆ ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇವೆ. ಅಡಚಣೆಯು ನಾವು ಒದಗಿಸಲು ಶ್ರಮಿಸುವ ಸೇವೆಯ ಗುಣಮಟ್ಟವನ್ನು ಪ್ರತಿಬಿಂಬಿಸುವುದಿಲ್ಲ ಎಂದು ಒತ್ತಿಹೇಳುತ್ತೇವೆ. ಈ ವಿಮಾನ ರದ್ದಾದ ಬಳಿಕ ತೊಂದರೆಗೆ ಒಳಗಾದ ಪ್ರಯಾಣಿಕರಿಗೆ ನಾವು ಪೂರ್ಣ ಮರುಪಾವತಿ ಅಥವಾ ಇನ್ನೊಂದು ದಿನಾಂಕಕ್ಕೆ ಟಿಕೆಟ್ ವರ್ಗಾವಣೆ ಮಾಡುತ್ತೇವೆ” ಎಂದು ತಿಳಿಸಿದೆ.

ಇದನ್ನು ಓದಿದ್ದೀರಾ? ಕೆಟ್ಟಿದ್ಯಾ ಶಿವಮೊಗ್ಗ ಏರ್‌ಪೋರ್ಟ್‌ ನಸೀಬು; ಬೆಂಗಳೂರಿಗೆ ಹಾರಬೇಕಿದ್ದ ವಿಮಾನ ರದ್ದು

ಇನ್ನು 200ಕ್ಕೂ ಹೆಚ್ಚು ಕ್ಯಾಬಿನ್ ಸಿಬ್ಬಂದಿ ಅನಾರೋಗ್ಯ ಕಾರಣ ನೀಡಿ ರಜೆ ಹಾಕಿದ್ದಾರೆ. ಇದರಿಂದಾಗಿ ಕೊಚ್ಚಿ, ಕ್ಯಾಲಿಕಟ್ ಮತ್ತು ಬೆಂಗಳೂರು ಸೇರಿದಂತೆ ವಿವಿಧ ವಿಮಾನ ನಿಲ್ದಾಣಗಳಲ್ಲಿ ವಿಮಾನ ಹಾರಾಟಕ್ಕೆ ಅಡಚಣೆಯಾಗಿದೆ.

ಈ ಪ್ರತಿಭಟನೆಗೆ ಕಾರಣವೇನು?

ಮೂಲಗಳ ಪ್ರಕಾರ, ಟಾಟಾ ಗ್ರೂಪ್‌ನೊಂದಿಗೆ ವಿಲೀನಗೊಂಡ ನಂತರ ಸಿಬ್ಬಂದಿಗಳನ್ನು ಸಮಾನವಾಗಿ ನೋಡಲಾಗುತ್ತಿಲ್ಲ. ಇಂಟರ್‌ವೀವ್‌ನಲ್ಲಿ ಪಾಸ್ ಆಗಿದ್ದರೂ ಕೂಡಾ ಕೆಲವು ಸಿಬ್ಬಂದಿಗೆ ಕಡಿಮೆ ದರ್ಜೆಯ ಉದ್ಯೋಗ ನೀಡಲಾಗಿದೆ ಎಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್‌ನ ಸಿಬ್ಬಂದಿ ಆರೋಪಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...