ಬಿಹಾರ | ಭೀಕರ ಅಪಘಾತ; ಎಂಟು ಮಂದಿ ಸಾವು, ಇಬ್ಬರಿಗೆ ಗಾಯ

Date:

ಕಾರು ಮತ್ತು ಟ್ರ್ಯಾಕ್ಟರ್ ನಡುವೆ ಭೀಕರ ಅಪಘಾತ ಸಂಭವಿಸಿ ಎಂಟು ಮಂದಿ ಸಾವನ್ನಪ್ಪಿ, ಇಬ್ಬರು ಗಾಯಗೊಂಡಿರುವ ಘಟನೆ ಬಿಹಾರದ ಕತಿಹಾರ್ ಜಿಲ್ಲೆಯಲ್ಲಿ ನಡೆದಿದೆ.

ಕಾರು ಮತ್ತು ಟ್ರ್ಯಾಕ್ಟರ್ ಮುಖಾಮುಖಿ ಡಿಕ್ಕಿ ಸಂಭವಿಸಿ ಈ ಅಪಘಾತ ನಡೆದಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಸೋಮವಾರ ಮತ್ತು ಮಂಗಳವಾರ ಮಧ್ಯರಾತ್ರಿ ಮದುವೆ ಸಮಾರಂಭದಲ್ಲಿ ಭಾಗಿಯಾಗಿ ಹಿಂತಿರುಗುತ್ತಿದ್ದಾಗ ಕಾರು ಅಪಘಾತ ಸಂಭವಿಸಿದೆ. ಸದ್ಯ ಮೃತರ ಗುರುತು ಪತ್ತೆಹಚ್ಚಲಾಗುತ್ತಿದೆ.

ಇದನ್ನು ಓದಿದ್ದೀರಾ? ಬಿಹಾರ | ಭೀಕರ ಅಪಘಾತ; ಇಬ್ಬರು ಮಕ್ಕಳು ಸೇರಿ ಐವರ ದಾರುಣ ಸಾವು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ ಕತಿಹಾರ್ ಎಸ್‌ಪಿ ವೈಭವ್ ಶರ್ಮಾ, “ಸಮೇಲಿ ಬ್ಲಾಕ್ ಕಚೇರಿ ಬಳಿಯ ಎನ್‌ಎಚ್‌-31ರಲ್ಲಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಟ್ರ್ಯಾಕ್ಟರ್‌ಗೆ ಎಸ್‌ಯುವಿ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಕನಿಷ್ಠ ಎಂಟು ಮಂದಿ ಸಾವನ್ನಪ್ಪಿದ್ದಾರೆ. ಇಬ್ಬರು ಗಾಯಗೊಂಡಿದ್ದಾರೆ” ಎಂದು ತಿಳಿಸಿದ್ದಾರೆ.

ಪೊಲೀಸರು ತಕ್ಷಣ ಸ್ಥಳಕ್ಕೆ ತಲುಪಿ ಗಾಯಾಳುಗಳನ್ನು ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದರು. ಅಲ್ಲಿ ಎಂಟು ಮಂದಿ ಮೃತಪಟ್ಟಿದ್ದಾರೆ. ಇಬ್ಬರು ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಎಸ್‌ಪಿ ವೈಭವ್ ಹೇಳಿದ್ದಾರೆ.

ಮೃತರು ಸುಪೌಲ್ ನಿವಾಸಿಗಳು ಎಂದು ಸ್ಥಳೀಯರು ಹೇಳಿದ್ದಾರೆ. ಆದರೆ ಗುರುತು ಪತ್ತೆಯಾಗಿಲ್ಲ. ಸದ್ಯ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಮಾಹಿತಿ ನೀಡಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...