ರಾಜಸ್ಥಾನ | ನೀರಿನ ಪಾತ್ರೆ ಮುಟ್ಟಿದ್ದಕ್ಕಾಗಿ ದಲಿತ ಬಾಲಕನ ತಲೆಕೆಳಗೆ ನೇತುಹಾಕಿ ದೌರ್ಜನ್ಯ

Date:

ರಾಜಸ್ಥಾನದ ಬಾರ್ಮರ್ ಜಿಲ್ಲೆಯ ಭಖರ್ಪುರ ಗ್ರಾಮದಲ್ಲಿ ಎಂಟು ವರ್ಷದ ದಲಿತ ಸಮುದಾಯದ ಬಾಲಕನೋರ್ವನನ್ನು ನೀರಿನ ಪಾತ್ರೆ ಮುಟ್ಟಿದ ಕಾರಣಕ್ಕೆ ಮರಕ್ಕೆ ತಲೆಕೆಳಗಾಗಿ ನೇತುಹಾಕಿ ಥಳಿಸಿರುವ ಆಘಾತಕಾರಿ ಘಟನೆ ನಡೆದಿದೆ. ಈ ದೌರ್ಜನ್ಯದಲ್ಲಿ ಒಬ್ಬ ಆರೋಪಿಯನ್ನು ಬಂಧಿಸಲಾಗಿದ್ದು, ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ.

ಬಾಲಕನ ಮೇಲಿನ ಹಲ್ಲೆಯನ್ನು ತಡೆಯಲು ಪ್ರಯತ್ನಿಸಿದ ಅವನ ತಾಯಿ ಪುರಿ ದೇವಿ ಮತ್ತು ಅಜ್ಜಿಯ ಮೇಲೂ ಆರೋಪಿಗಳು ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾಲಕನ ತಾಯಿ ಪುರಿ ದೇವಿ ಅವರ ಪ್ರಕಾರ, ಶುಕ್ರವಾರ ಗ್ರಾಮದಲ್ಲಿ ಆಟವಾಡುತ್ತಿದ್ದ ಅವರ ಮಗನಿಗೆ ನರನಾರಾಮ್ ಪ್ರಜಾಪತ್ ಮತ್ತು ದೇಮಾರಾಮ್ ಪ್ರಜಾಪತ್ ಎಂಬಿಬ್ಬರು ಸ್ನಾನಗೃಹ ಸ್ವಚ್ಛಗೊಳಿಸುವಂತೆ ಮತ್ತು ಕಸ ಸಂಗ್ರಹಿಸುವಂತೆ ಆದೇಶಿಸಿದ್ದಾರೆ.

ಕೆಲಸ ಮುಗಿಸಿದ ಬಾಲಕ ಬಾಯಾರಿಕೆಯಿಂದ ನೀರು ಕುಡಿಯಲೆಂದು ಆರೋಪಿಗಳ ನೀರಿನ ಪಾತ್ರೆ ಮುಟ್ಟಿದಾಗ, ನರನಾರಾಮ್ ಆತನನ್ನು ತನ್ನ ನಿವಾಸಕ್ಕೆ ಕರೆದೊಯ್ದು ಮರಕ್ಕೆ ತಲೆಕೆಳಗಾಗಿ ಕಟ್ಟಿಹಾಕಿ ಥಳಿಸಿದ್ದಾನೆ. ಈ ದೌರ್ಜನ್ಯವು ಬಾಲಕನ ಸಂಬಂಧಿಯೊಬ್ಬರು ಘಟನೆಯನ್ನು ತಮ್ಮ ಫೋನ್‌ನಲ್ಲಿ ಚಿತ್ರೀಕರಿಸುವವರೆಗೆ ಮುಂದುವರೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಒಬಿಸಿಗಳಿಗೆ ಸಿಗಬೇಕಿದೆ ಶಾಸನಸಭೆಗಳಲ್ಲಿ ಮೀಸಲಾತಿ

ಪೊಲೀಸ್ ಅಧಿಕಾರಿ ಸುಖರಾಮ್ ಬಿಷ್ಣೋಯ್, ಪ್ರಾಥಮಿಕ ತನಿಖೆ ಮತ್ತು ವೈದ್ಯಕೀಯ ಪರೀಕ್ಷೆಯಿಂದ ಬಾಲಕನ ಮೇಲೆ ತೀವ್ರವಾಗಿ ಹಲ್ಲೆ ನಡೆದಿರುವುದು ಮತ್ತು ತಲೆಕೆಳಗಾಗಿ ನೇತುಹಾಕಲಾಗಿರುವುದು ದೃಢಪಟ್ಟಿದೆ. ಆದರೆ, ನೀರಿನ ಪಾತ್ರೆ ಮುಟ್ಟಿದ ಕಾರಣಕ್ಕೆ ಈ ದೌರ್ಜನ್ಯ ನಡೆದಿದೆ ಎಂಬ ಆರೋಪವನ್ನು ಇನ್ನೂ ತನಿಖೆ ಮಾಡಲಾಗುತ್ತಿದೆ. ಆರೋಪಿಗಳಾದ ನರನಾರಾಮ್, ದೇಮಾರಾಮ್ ಮತ್ತು ರೂಪರಾಮ್ ಪ್ರಜಾಪತ್ ಎಂಬ ಭಖರ್ಪುರ ನಿವಾಸಿಗಳ ವಿರುದ್ಧ ಆಗಸ್ಟ್ 30 ರಂದು ಎಫ್‌ಐಆರ್ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.

ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 115(2) (ಸ್ವಯಂಪ್ರೇರಿತವಾಗಿ ನೋವುಂಟುಮಾಡುವಿಕೆ), ಸೆಕ್ಷನ್ 127(2) (ಅಕ್ರಮವಾಗಿ ಬಂಧಿಸುವುದು), ಸೆಕ್ಷನ್ 137(2) (ಅಪಹರಣ) ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ, 1989ರ ಸಂಬಂಧಿತ ವಿಭಾಗಗಳಡಿಯಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...