ಎಂಟು ವರ್ಷದ ಬಾಲಕಿ ಮೇಲೆ 10ನೇ ತರಗತಿ ವಿದ್ಯಾರ್ಥಿಯಿಂದ ಅತ್ಯಾಚಾರ; ಆರೋಪಿ ಬಂಧನ

Date:

ಎಂಟು ವರ್ಷದ ಬಾಲಕಿ ಮೇಲೆ 10ನೇ ತರಗತಿ ವಿದ್ಯಾರ್ಥಿ ಅತ್ಯಾಚಾರ ಎಸಗಿರುವ ಘಟನೆ ಮಧ್ಯಪ್ರದೇಶದ ಭಿಂಡ್ ಜಿಲ್ಲೆಯಲ್ಲಿ ನಡೆದಿದೆ. ಸದ್ಯ ಆರೋಪಿ ಬಾಲಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಗುರುವಾರ ಸಂಜೆ ಈ ಘಟನೆ ನಡೆದಿದ್ದು, ಪೊಲೀಸರು ಹತ್ತನೇ ತರಗತಿ ವಿದ್ಯಾರ್ಥಿ, 17 ವರ್ಷದ ಆರೋಪಿಯನ್ನು ಬಂಧಿಸಿ ಬಾಲಾಪರಾಧಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಜಾಮೀನು ಪಡೆದು ಹೊರಬಂದು ಸಂತ್ರಸ್ತೆಯನ್ನು ಹತ್ಯೆಗೈದ ಅತ್ಯಾಚಾರ ಆರೋಪಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಂಟು ವರ್ಷದ ಬಾಲಕಿ ಮನೆಯಲ್ಲಿ ಒಬ್ಬಂಟಿಯಾಗಿರುವುದನ್ನು ನೋಡಿದ ನೆರೆಮನೆಯಲ್ಲಿ ವಾಸಿಸುತ್ತಿದ್ದ ಆರೋಪಿ ಆಕೆಯ ಮನೆಗೆ ನುಗ್ಗಿ ಅತ್ಯಾಚಾರ ಎಸಗಿದ್ದಾನೆ ಎಂದು ಪ್ರದೇಶ ಪೊಲೀಸ್ ಅಧಿಕಾರಿ ಮುಖೇಶ್ ಕುಮಾರ್ ಶಕ್ಯಾ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.

ಆರೋಪಿ ಹತ್ತನೇ ತರಗತಿ ವಿದ್ಯಾಭ್ಯಾಸ ಮಾಡುವ ಜೊತೆಗೆ ಸಣ್ಣಪುಟ್ಟ ಕೆಲಸಗಳನ್ನೂ ಮಾಡುತ್ತಿದ್ದ ಎನ್ನಲಾಗಿದೆ.

ಬಾಲಕಿ ಕಿರುಚುವುದನ್ನು ಕೇಳಿದ ಸ್ಥಳೀಯರು ಮನೆಯೊಳಗೆ ನುಗ್ಗಿ ಆರೋಪಿಯನ್ನು ಹಿಡಿದಿದ್ದಾರೆ. ಪೊಲೀಸರು ಬಂದ ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ. ಸಂತ್ರಸ್ತ ಬಾಲಕಿಯ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಆಕೆ ತನ್ನ ಪೋಷಕರೊಂದಿಗೆ ಮನೆಯಲ್ಲಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಲಕನ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ಆತನನ್ನು ಸುಧಾರಣಾ ಗೃಹಕ್ಕೆ ಕಳುಹಿಸಲಾಗಿದೆ. ತನಿಖೆ ನಡೆಯುತ್ತಿದ್ದು, ಬಾಲಕಿಯ ಹೇಳಿಕೆಯನ್ನು ಶೀಘ್ರದಲ್ಲೇ ದಾಖಲಿಸಲಾಗುವುದು ಎಂದು ಅಧಿಕಾರಿ ಹೇಳಿದ್ದಾರೆ.

ಅತ್ಯಾಚಾರ ಪ್ರಕರಣಗಳ ಏರಿಕೆ

2016ರಿಂದ ದೇಶದಲ್ಲಿ ಅತ್ಯಾಚಾರ ಪ್ರಕರಣಗಳು ಅಧಿಕವಾಗಿದೆ. ಅದರಲ್ಲಿಯೂ ಪ್ರಮುಖವಾಗಿ ಅಪ್ರಾಪ್ತರ ಮೇಲೆ ಲೈಂಗಿಕ ದೌರ್ಜನ್ಯ, ಅತ್ಯಾಚಾರ, ಗರ್ಭಪಾತ, ಅತ್ಯಾಚಾರ-ಕೊಲೆ – ಇಂತಹ ಅಪರಾಧಗಳು ಹೆಚ್ಚಾಗುತ್ತಿದೆ. ಎನ್‌ಜಿಒ ಸಿಆರ್‌ವೈ ವರದಿಯ ಪ್ರಕಾರ ದೇಶದಲ್ಲಿ 2016ರಿಂದ 2022ರ ನಡುವೆ ಅಪ್ರಾಪ್ತರ ಮೇಲೆ ಅತ್ಯಾಚಾರ ಪ್ರಕರಣಗಳು ಸುಮಾರು ಶೇಕಡ 96ರಷ್ಟು ಏರಿಕೆಯಾಗಿದೆ. 2020 ಹೊರತುಪಡಿಸಿ 2016ರಿಂದ ದೇಶದಲ್ಲಿ ಅತ್ಯಾಚಾರ ಪ್ರಕರಣಗಳು ಭಾರೀ ಪ್ರಮಾಣದಲ್ಲಿ ಹೆಚ್ಚಾಗಿದೆ. 2021ರಿಂದ 2022ರ ನಡುವೆ ಶೇಕಡ 6.9ರಷ್ಟು ಪ್ರಕರಣಗಳು ಅಧಿಕವಾಗಿದೆ. ಜೊತೆಗೆ ಬಾಲಾಪರಾಧಿಗಳ ಸಂಖ್ಯೆಯು ಅಧಿಕವಾಗುತ್ತಿದೆ. ಬಾಲಕರು ಇಂತಹ ದುಷ್ಕೃತ್ಯ ಮಾಡಲು ಲೈಂಗಿಕತೆ ಬಗ್ಗೆ ಸರಿಯಾದ ಜ್ಞಾನ ನೀಡದಿರುವುದು, ಸೂಕ್ಷ್ಮತೆ ಮೂಡಿಸದಿರುವುದು ಕಾರಣ ಎನ್ನಬಹುದು.

ಇವು ವರದಿಯಾದ ಪ್ರಕರಣಗಳಾದರೆ, ಇನ್ನೂ ಅದೆಷ್ಟೋ ಪ್ರಕರಣಗಳು ಮುನ್ನೆಲೆಗೆ ಬಂದಿಲ್ಲ. ಸಂತ್ರಸ್ತೆ/ ಸಂತ್ರಸ್ತ ಅಥವಾ ಆಕೆ/ ಆತನ ಕುಟುಂಬಸ್ಥರು ಮರ್ಯಾದೆಗೆ ಅಂಜಿ ಅತ್ಯಾಚಾರಿಗಳ ವಿರುದ್ದ ದೂರು ದಾಖಲಿಸುವುದೇ ಇಲ್ಲ. ಇನ್ನೊಂದೆಡೆ ಸಮಾಜದಲ್ಲಿ ಉನ್ನತ ಸ್ಥಾನದಲ್ಲಿರುವ ಅತ್ಯಾಚಾರಿಗಳಿಗೆ ಭಯಪಟ್ಟು ಸಂತ್ರಸ್ತರು ದೂರು ದಾಖಲಿಸುವುದಿಲ್ಲ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...