ಛತ್ತೀಸ್‌ಗಢ| ಟ್ರಕ್‌ಗೆ ಸರಕು ಸಾಗಣೆ ವಾಹನ ಡಿಕ್ಕಿ; ಒಂಬತ್ತು ಸಾವು, 23 ಜನರಿಗೆ ಗಾಯ

Date:

ಛತ್ತೀಸ್‌ಗಢದ ಬೆಮೆತಾರಾ ಜಿಲ್ಲೆಯಲ್ಲಿ ಸರಕು ಸಾಗಣೆ ವಾಹನವೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಒಂಬತ್ತು ಮಂದಿ ಸಾವನ್ನಪ್ಪಿದ್ದು, 23 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತರಲ್ಲಿ ಐವರು ಮಹಿಳೆಯರು ಮತ್ತು ಮೂವರು ಮಕ್ಕಳು ಸೇರಿದ್ದಾರೆ.

ಭಾನುವಾರ ತಡರಾತ್ರಿ ಕಥಿಯಾ ಗ್ರಾಮದ ಬಳಿ ಕುಟುಂಬದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ಪಿಟಿಐ ವರದಿ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೃತರು ಪಥರಾ ಗ್ರಾಮದವರಾಗಿದ್ದು ತಿರಯ್ಯ ಗ್ರಾಮದಲ್ಲಿ ನಡೆದ ಕುಟುಂಬ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಹಿಂತಿರುಗುತ್ತಿದ್ದಾಗ ರಸ್ತೆ ಬದಿ ನಿಂತಿದ್ದ ಮಿನಿ ಟ್ರಕ್‌ಗೆ ಸರಕು ಸಾಗಣೆ ವಾಹನ ಡಿಕ್ಕಿ ಹೊಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ?  ಬೆಂಗಳೂರು | ಆ್ಯಂಬುಲೆನ್ಸ್ ಚಾಲಕನ ಅಚಾತುರ್ಯ: ಸರಣಿ ಅಪಘಾತ

ಮೃತರನ್ನು ಭೂರಿ ನಿಶಾದ್ (50), ನೀರಾ ಸಾಹು (55), ಗೀತಾ ಸಾಹು (60), ಅಗ್ನಿಯಾ ಸಾಹು (60), ಖುಷ್ಬು ಸಾಹು (39), ಮಧು ಸಾಹು (5), ರಿಕೇಶ್ ನಿಶಾದ್ (6) ಮತ್ತು ಟ್ವಿಂಕಲ್ ನಿಶಾದ್ ( 6) ಎಂದು ಗುರುತಿಸಲಾಗಿದೆ. ಉಳಿದ ಮೃತರ ಮಾಹಿತಿ ಲಭ್ಯವಾಗಿಲ್ಲ.

ಈ ಬಗ್ಗೆ ಎಎನ್‌ಐಗೆ ಮಾಹಿತಿ ನೀಡಿದ ಬೆಮೆತಾರಾ ಜಿಲ್ಲಾಧಿಕಾರಿ ರಣವೀರ್ ಶರ್ಮಾ “9 ಮಂದಿ ಸಾವನ್ನಪ್ಪಿದ್ದು, 23 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ” ಎಂದು ತಿಳಿಸಿದ್ದಾರೆ.

ತೀವ್ರವಾಗಿ ಗಾಯಗೊಂಡ ನಾಲ್ವರನ್ನು ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ರಾಯ್‌ಪುರಕ್ಕೆ ಸ್ಥಳಾಂತರಿಸಲಾಗಿದೆ ಎಂದು ವರದಿಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...