14 ತಿಂಗಳಲ್ಲಿ 9 ಮಹಿಳೆಯರ ಹತ್ಯೆ; ಸರಣಿ ಕೊಲೆ ಶಂಕೆ

Date:

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಗ್ರಾಮಾಂತರ ಪ್ರದೇಶದಲ್ಲಿ ಕಳೆದ 14 ತಿಂಗಳ ಅವಧಿಯಲ್ಲಿ ಒಂಬತ್ತು ಮಹಿಳೆಯರು ಒಂದೇ ರೀತಿಯಲ್ಲಿ ಹತ್ಯೆಗೀಡಾಗಿರುವುದು ಕಂಡುಬಂದಿದೆ. ಸರಣಿ ಹಂತಕರು ಈ ಹತ್ಯೆಗಳನ್ನು ಮಾಡಿದ್ದಾರೆ ಎಂದು ಶಂಕಿಸಲಾಗಿದ್ದು, ಜಿಲ್ಲೆಯಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ.

ಜಿಲ್ಲೆಯ ಎರಡು ಪೊಲೀಸ್‌ ಠಾಣೆಗಳ 25 ಕಿ.ಮೀ ವ್ಯಾಪ್ತಿಯಲ್ಲಿ ಈ ಹತ್ಯೆಗಳು ನಡೆದಿವೆ. ಒಂದೇ ರೀತಿಯಲ್ಲಿ ಹತ್ಯೆಯಾಗಿರುವ ಭೀಕರ ಪ್ರಕರಣಗಳು ಕಂಡುಬಂದಿದ್ದು, ಮಹಿಳೆಯರಲ್ಲಿ ಆತಂಕ ಹೆಚ್ಚಾಗಿದೆ. ಹತ್ಯೆಗೀಡಾದ ಎಲ್ಲ ಮಹಿಳೆಯರು 45ರಿಂದ 55 ವರ್ಷ ವಯಸ್ಸಿನವರು ಎಂದು ಪೊಲೀಸರು ತಿಳಿಸಿದ್ದಾರೆ. ಅದಾಗ್ಯೂ, ಅವರ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ಯಾವುದೇ ಲಕ್ಷಣಗಳಿಲ್ಲ ಎಂದು ಹೇಳಲಾಗಿದೆ. ಇದು, ಸೀರಿಯಲ್ ಕೊಲೆಗಳೇ ಆಗಿರಬಹುದು ಎಂದು ಶಂಕಿಸಲಾಗಿದೆ.

ಕಳೆದ ವರ್ಷ ಜೂನ್‌ನಲ್ಲಿ ಮೊದಲ ಶವ ಪತ್ತೆಯಾಗಿತ್ತು. ಅಂದಿನಿಂದ ಈವರೆಗೆ 9 ಮಹಿಳೆಯರ ಮೃತದೇಹಗಳು ಪತ್ತೆಯಾಗಿವೆ. ಇತ್ತೀಚೆಗೆ, ಜುಲೈ 3ರಂದು ಬರೇಲಿಯ ಶಾಹಿ ಶೀಶ್‌ಗಢ ಪ್ರದೇಶದ ಜಮೀನಿನಲ್ಲಿ 45 ವರ್ಷದ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಕಳೆದ ವರ್ಷ ನವೆಂಬರ್ ವೇಳೆಗೆ ಇಂತಹ 8 ಪ್ರಕರಣಗಳು ನಡೆದಿದ್ದವು. ಇದೀಗ, 9ನೇ ಪ್ರಕರಣ ಕಳೆದ ತಿಂಗಳು ನಡೆದಿದೆ. ಇದು, ಸ್ಥಳೀಯ ನಿವಾಸಿಗಳಲ್ಲಿ ತುಂಬಾ ಆತಂಕ ಉಂಟುಮಾಡಿದೆ. ಇತ್ತೀಚೆಗೆ, ಪೊಲೀಸರು ಮೂರವನ್ನು ಬಂಧಿಸಿದ್ದರು. ಆದರೂ, ಕೊಲೆಗಳು ಮುಂದುವರೆದಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಮ್ಮ ತಂಡಗಳು ಈ ಪ್ರಕರಣವನ್ನು ಆರು ತಿಂಗಳಿಂದ ತನಿಖೆ ನಡೆಸುತ್ತಿವೆ. ಕೊಲೆಗಳು ಬಹುತೇಕ ಒಂದೇ ರೀತಿಯಲ್ಲಿ ನಡೆದಿದ್ದು, ಸರಣಿ ಕೊಲೆಗಾರನೇ ಹತ್ಯೆಗಳನ್ನು ಮಾಡಿದ್ದಾನೆ ಎಂಬ ಸಾಧ್ಯತೆಯನ್ನು ತಳ್ಳಿಹಾಕಲಾಗದು. ಕೆಲವು ಸುಳಿವುಗಳ ಆಧಾರದ ಮೇಲೆ, ನಾವು ಈಗ ಮೂವರು ಶಂಕಿತರ ರೇಖಾಚಿತ್ರಗಳನ್ನು ಬಿಡುಗಡೆ ಮಾಡಿದ್ದೇವೆ” ಎಂದು ಉತ್ತರ ಪ್ರದೇಶದ ಡಿಜಿಪಿ ಪ್ರಶಾಂತ್ ಕುಮಾರ್ ತಿಳಿಸಿದ್ದಾರೆ.

“ಒಂದೇ ರೀತಿಯಲ್ಲಿ ಕೊಲೆಗಳು ನಡೆದಿವೆ ಎಂಬುದು ಸ್ಪಷ್ಟವಾಗಿದೆ. ಪ್ರತಿ ಪ್ರಕರಣದಲ್ಲೂ ಮಧ್ಯಾಹ್ನದ ವೇಳೆ ಕತ್ತು ಹಿಸುಕಿ ಹತ್ಯೆಗೈದು, ಜಮೀನಿನಲ್ಲಿ ಶವಗಳನ್ನು ಎಸೆಯಲಾಗಿದೆ. ಮರಣೋತ್ತರ ಪರೀಕ್ಷೆಯಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆದಿಲ್ಲವೆಂದು ತಿಳಿದುಬಂದಿದೆ. ಪೊಲೀಸ್‌ ಇಲಾಖೆಯು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ತನಿಖೆ ನಡೆಸುತ್ತಿದೆ” ಎಂದು ಬರೇಲಿ ಎಸ್‌ಎಸ್‌ಪಿ ಅನುರಾಗ್ ಆರ್ಯ ಹೇಳಿದ್ದಾರೆ.

ಬಂಧಿತ ಮೂವರು ಆರೋಪಿಗಳು ನಿಜವಾದ ಅಪರಾಧಿಗಳಲ್ಲ ಎಂದು ತನಿಖಾ ಸಂಸ್ಥೆಗಳು ಅನುಮಾನ ವ್ಯಕ್ತಪಡಿಸಿವೆ. ಏಕೆಂದರೆ, ಅವರು ಜೈಲಿನಲ್ಲಿದ್ದಾಗಲೂ ಹತ್ಯೆಗಳು ಮುಂದುವರೆದಿವೆ. ಇತ್ತೀಚೆಗೆ ಜಾಮೀನು ಪಡೆದ ಅಥವಾ ಬಿಡುಗಡೆಯಾದ ಕೈದಿಗಳ ವಿವರಗಳನ್ನು ಹಿರಿಯ ಅಧಿಕಾರಿಗಳು ಈಗ ಪರಿಶೀಲಿಸುತ್ತಿದ್ದಾರೆ. 90 ಹಳ್ಳಿಗಳಲ್ಲಿ ಜನರನ್ನು ವಿಚಾರಣೆ ನಡೆಸಿದ ಬಳಿಕ, ಶಂಕಿತರ ರೇಖಾಚಿತ್ರಗಳನ್ನು ಬಿಡುಗಡೆ ಮಾಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...