ಮಧ್ಯಪ್ರದೇಶದಲ್ಲಿ ಆಯ್ಕೆಯಾದ ಶಾಸಕರಲ್ಲಿ 90 ಮಂದಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ

Date:

ಮಧ್ಯಪ್ರದೇಶ ವಿಧಾನಸಭೆ ಚುನಾವಣೆ ಆಯ್ಕೆಯಾದ 230 ಶಾಸಕರ ಪೈಕಿ 90 ಶಾಸಕರ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳಿವೆ ಎಂದು ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ಸಂಸ್ಥೆ ತನ್ನ ವರದಿಯಲ್ಲಿ ತಿಳಿಸಿದೆ.

” 230 ಅಭ್ಯರ್ಥಿಗಳಲ್ಲಿ 90 ವಿಜೇತ ಅಭ್ಯರ್ಥಿಗಳು ತಮ್ಮ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳನ್ನು ಘೋಷಿಸಿಕೊಂಡಿದ್ದಾರೆ. ಅದೇ ರೀತಿ 34 ವಿಜೇತ ಅಭ್ಯರ್ಥಿಗಳು ಅಂದರೆ ಸುಮಾರು ಶೇ. 15 ರಷ್ಟು ಜನರು ತಮ್ಮ ವಿರುದ್ಧ ಗಂಭೀರ ಕ್ರಿಮಿನಲ್ ಮೊಕದ್ದಮೆಗಳನ್ನು ಘೋಷಿಸಿದ್ದಾರೆ” ಎಂದು ಎಡಿಆರ್ ವರದಿ ಹೇಳುತ್ತದೆ.

ಕ್ರಿಮಿನಲ್ ಪ್ರಕರಣಗಳನ್ನು ಹೊಂದಿರುವ ಈ 90 ಶಾಸಕರಲ್ಲಿ 51 ಮಂದಿ ಬಿಜೆಪಿ, 38 ಕಾಂಗ್ರೆಸ್‌ಗೆ ಸೇರಿದವರು ಮತ್ತು ಒಬ್ಬರು ಭಾರತೀಯ ಆದಿವಾಸಿ ಪಕ್ಷದವರು ಎಂದು ವರದಿಯಲ್ಲಿ ತಿಳಿಸಿದೆ. ಹಿಂದಿನ 2018 ರ ವಿಧಾನಸಭಾ ಚುನಾವಣೆಗೆ ಹೋಲಿಸಿದರೆ ಈ ಬಾರಿ ಅಂಕಿಅಂಶದಲ್ಲಿ ಸ್ವಲ್ಪ ಇಳಿಕೆಯಾಗಿದೆ. 2018 ರಲ್ಲಿ 230 ಶಾಸಕರಲ್ಲಿ 94 ಮಂದಿ ತಮ್ಮ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳನ್ನು ಘೋಷಿಸಿಕೊಂಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹುಟ್ಟುವ ಮುನ್ನವೇ ಹೆಣ್ಣು ಜೀವಗಳನ್ನು ಬಲಿ ಪಡೆಯುತ್ತಿರುವ ಅನಾಗರಿಕ ವ್ಯವಸ್ಥೆ

ಮಧ್ಯಪ್ರದೇಶ ರಾಜ್ಯದಲ್ಲಿ ನೂತನವಾಗಿ ಚುನಾಯಿತರಾದ 205 ಶಾಸಕರು(ಶೇ.89) ‘ಕೋಟ್ಯಾಧಿಪತಿಗಳು’. ಈ ಕೋಟ್ಯಾಧಿಪತಿಗಳ ಪೈಕಿ 144 ಮಂದಿ ಬಿಜೆಪಿ ಹಾಗೂ 61 ಮಂದಿ ಕಾಂಗ್ರೆಸ್‌ಗೆ ಸೇರಿದವರಾಗಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಗೆ ಹೋಲಿಸಿದರೆ ರಾಜ್ಯದಲ್ಲಿ ಕೋಟ್ಯಾಧಿಪತಿಗಳ ಸಂಖ್ಯೆ ಹೆಚ್ಚಾಗಿದೆ. 2018 ರ ವಿಧಾನಸಭಾ ಚುನಾವಣೆಯಲ್ಲಿ 187 ಶಾಸಕರು ಕೋಟ್ಯಾಧಿಪತಿಗಳಾಗಿದ್ದರು.

ಆಯ್ಕೆಯಾದವರಲ್ಲಿ 161 ವಿಜೇತ ಅಭ್ಯರ್ಥಿಗಳು ಪದವೀಧರರು ಅಥವಾ ಶೈಕ್ಷಣಿಕ ಅರ್ಹತೆಗಿಂತ ಹೆಚ್ಚಿನವರು. ಅದೇ ರೀತಿ, 64 ಅಭ್ಯರ್ಥಿಗಳು ತಮ್ಮ ಶೈಕ್ಷಣಿಕ ಅರ್ಹತೆಯನ್ನು 5 ನೇ ತರಗತಿ ಮತ್ತು 12 ನೇ ತರಗತಿಯ ನಡುವೆ ಎಂದು ಘೋಷಿಸಿಕೊಂಡಿದ್ದಾರೆ.

230 ಕ್ಷೇತ್ರಗಳ ವಿಧಾನಸಭಾ ಚುನಾವಣಾ ಫಲಿತಾಂಶದಲ್ಲಿ ಬಿಜೆಪಿ 163 ಸ್ಥಾನಗಳನ್ನು ಗೆಲ್ಲುವ ಮೂಲಕ ಬಹುಮತ ಗಳಿಸಿದರೆ, ಕಾಂಗ್ರೆಸ್ 66 ಸ್ಥಾನ ಹಾಗೂ ಭಾರತ್ ಆದಿವಾಸಿ ಪಕ್ಷವು ಒಂದು ಸ್ಥಾನವನ್ನು ಗೆದ್ದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...