8 ಮಂದಿ ಶಸ್ತ್ರಾಧಾರಿ ದಾಳಿಕೋರರಿಂದ ತಂದೆಯನ್ನು ರಕ್ಷಿಸಿದ 17 ವರ್ಷದ ಬಾಲಕಿ

Date:

17 ವರ್ಷದ ಬುಡಕಟ್ಟು ಬಾಲಕಿಯೊಬ್ಬಳು ತನ್ನ ತಂದೆಯನ್ನು ಕೊಲ್ಲಲು ಯತ್ನಿಸಿದ ಎಂಟು ಮಂದಿ ಶಸ್ತ್ರಸಜ್ಜಿತ ದಾಳಿಕೋರರ ವಿರುದ್ಧ ಹೋರಾಟ, ತಂದೆಯನ್ನು ರಕ್ಷಿಸಿರುವ ಘಟನೆ ಛತ್ತಿಸ್‌ಗಢದ ಬಸ್ತಾರ್ ಪ್ರದೇಶದಲ್ಲಿ ನಡೆದಿದೆ.

ಬಸ್ತಾರ್‌ನ ನಾರಾಯಣಪುರ ಜಿಲ್ಲೆಯ ಜರಗಾಂವ್ ಎಂಬ ಹಳ್ಳಿಯಲ್ಲಿ ದುಷ್ಕರ್ಮಿಗಳ ಗುಂಪೊಂದು ಮನೆಗೆ ನುಗ್ಗಿ, ರೈತನ ಮೇಲೆ ಕೊಡಲಿಯಿಂದ ಹಲ್ಲೆ ಮಾಡಿದೆ. ಈ ವೇಳೆ, ದಾಳಿಕೋರರ ಮೇಲೆರಗಿದ ಹುಡುಗಿ, ದುಷ್ಕರ್ಮಿಗಳೊಂದಿಗೆ ಹೋರಾಡಿ ತನ್ನ ತಂದೆಯನ್ನು ರಕ್ಷಿಸಿದ್ದಾರೆ.

ಆಕೆಯ ಪ್ರತಿದಾಳಿಯಿಂದ ವಿಚಲಿತವಾದ ಗುಂಪು ಸ್ಥಳದಿಂದ ಪರಾರಿಯಾಗಿದೆ. ಹಲ್ಲೆಗೊಳಗಾದ ಬಾಲಕಿಯ ತಂದೆ ಸೋಮಧರ್ ಕೊರ್ರಂ ಅವರ ಎದೆ ಭಾಗದಲ್ಲಿ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

“ಅವರಲ್ಲಿ ಎಂಟು ಮಂದಿ ಇದ್ದರು. ಅವರು ನಮ್ಮ ಮನೆಯ ಬಾಗಿಲನ್ನು ಬಡಿದರು. ಕಿಟಕಿಯಿಂದ ನೋಡಿದಾಗ, ಅವರೆಲ್ಲರೂ ಮುಖಗವಸನ್ನು ಧರಿಸಿದ್ದರು. ಅವರ ಬಳಿ ಕೊಡಲಿ ಮತ್ತು ಬಂದೂಕು ಇತ್ತು. ನನ್ನ ತಂದೆ ಇದ್ದಾರೆಯೇ ಎಂದು ಕೇಳಿದರು. ನನ್ನ ತಂದೆಗೆ ಅಪಾಯವಿದೆ ಎಂದು ಅರಿವಾಯಿತು. ನನ್ನ ತಂದೆ ಇಲ್ಲವೆಂದು ಹೇಳಿದೆ. ಅವರು ಹೊರಟರು. ಆದರೆ, ಕೆಲವೇ ಕ್ಷಣದಲ್ಲಿ ಮನೆಯೊಳಗೆ ನುಗ್ಗಿದರು. ಒಬ್ಬ ವ್ಯಕ್ತಿ ಕೊಡಲಿಯಿಂದ ನನ್ನ ತಂದೆ ಮೇಲೆ ಹಲ್ಲೆ ಮಾಡುವುದನ್ನು ಕಂಡು ನಾನು ಅಲ್ಲಿಗೆ ಓಡಿ ಹೋದೆ. ಅವರ ಬಳಿಯಿಂದ ಕೊಡಲಿಯನ್ನು ಕಿತ್ತುಕೊಂಡು ದೂರ ಹೋಗುವಂತೆ ಕಿರುಚಿದೆ. ಕಿರುಚಾಟ ಕೇಳಿ ನೆರೆಹೊರೆಯವರು ನಮ್ಮ ಮನೆ ಬಳಿಗೆ ಬರಲಾರಂಭಿಸಿದರು. ಇದನ್ನು ಕಂಡ ದಾಳಿಕೋರರು ಪರಾರಿಯಾದರು” ಎಂದು ಘಟನೆ ಬಗ್ಗೆ ಬಾಲಕಿ ವಿವರಿಸಿದ್ದಾಳೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪೊಲೀಸರಿಗೆ ಘಟನೆ ಬಗ್ಗೆ ಮಾಹಿತಿ ನೀಡಿ, ಆಂಬ್ಯುಲೆನ್ಸ್‌ನಲ್ಲಿ ತಂದೆಯನ್ನು ಆಸ್ಪತ್ರೆಗೆ ಕರೆದೊಯ್ದೆವು. ವೈದ್ಯರು ತಕ್ಷಣ ಶಸ್ತ್ರಚಿಕಿತ್ಸೆ ಮಾಡಿದ್ದಾರೆ. ಅವರ ಆರೋಗ್ಯ ಸುಧಾರಿಸುತ್ತಿದೆ. ನನ್ನ ತಂದೆ ಸರಳ ರೈತ. ನಮಗೆ ಈ ಹಿಂದೆ ಯಾವುದೇ ಬೆದರಿಕೆ ಇರಲಿಲ್ಲ. ಈ ದಾಳಿಯಿಂದ ಆತಂಕಗೊಂಡಿದ್ದೇವೆ” ಎಂದು ಬಾಲಕಿ ಹೇಳಿದ್ದಾಳೆ.

ನಾರಾಯಣಪುರ ಎಸ್‌ಪಿ ಪ್ರಭಾತ್ ಸಿಂಗ್ ಮಾತನಾಡಿ, “ಪೊಲೀಸರು ಕೊಲೆ ಯತ್ನ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದ್ದಾರೆ. ನಾವು ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸುತ್ತಿದ್ದೇವೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...