ತೆಲಂಗಾಣ | ಮಗ ಮೃತಪಟ್ಟಿರುವುದು ತಿಳಿಯದೆ 4 ದಿನ ಶವದೊಂದಿಗೆ ಕಳೆದ ಅಂಧ ದಂಪತಿ!

Date:

ವೃದ್ಧ ಅಂಧ ದಂಪತಿ ತಮ್ಮ ಮಗ ಮೃತಪಟ್ಟಿರುವ ವಿಷಯ ತಿಳಿಯದೆ 4 ದಿನಗಳ ಕಾಲ ಮೃತದೇಹದೊಂದಿಗೆ ಮನೆಯಲ್ಲೇ ಇದ್ದ ಹೃದಯ ವಿದ್ರಾವಕ ಘಟನೆ ತೆಲಂಗಾಣದ ಹೈದರಾಬಾದ್‌ನಲ್ಲಿ ನಡೆದಿದೆ.

30 ವರ್ಷದ ಪ್ರಮೋದ್ ಮೃತಪಟ್ಟಿದ್ದು, 60 ವಯಸ್ಸಿನ ಕೆ.ರಮಣ, 65 ವಯಸ್ಸಿನ ಶಾಂತಕುಮಾರಿ ಎಂಬ ಅಂಧ ಪೋಷಕರು ಅರೆಪ್ರಜ್ಞಾವಸ್ಥೆಯಲ್ಲಿ ಬಿದ್ದಿದ್ದರು. ಮನೆಯಿಂದ ದುರ್ವಾಸನೆ ಬರುತ್ತಿದ್ದಂತೆ ಅಕ್ಕಪಕ್ಕದ ಮನೆಯವರು ಪೊಲೀಸರಿಗೆ ಮಾಹಿತಿ ತಲುಪಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದಾಗ ಅರೆ ಪ್ರಜ್ಞಾವಸ್ಥೆಯಲ್ಲಿದ್ದ ವೃದ್ಧ ಅಂಧ ದಂಪತಿಯೊಂದಿಗೆ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ.

ʼಮನೆಯಲ್ಲಿ ವ್ಯಕ್ತಿ ಶವವಾಗಿ ಪತ್ತೆಯಾಗಿದ್ದು, ನಾಲ್ಕೈದು ದಿನಗಳ ಹಿಂದೆ ನಿದ್ರೆಯಲ್ಲಿಯೇ ಸಾವನ್ನಪ್ಪಿರುವ ಶಂಕೆ ಇದೆ ಎಂದು ನಾಗೋಲ್ ಪೊಲೀಸ್ ಠಾಣೆ ಎಸ್‌ಎಚ್‌ಒ ಸೂರ್ಯ ನಾಯಕ್ ಪ್ರಾಥಮಿಕ ತನಿಖೆಯಿಂದ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼ60 ವರ್ಷಕ್ಕಿಂತ ಮೇಲ್ಪಟ್ಟ ವೃದ್ಧ ಅಂಧ ದಂಪತಿಗೆ ತಮ್ಮ ಮಗ ಸಾವನ್ನಪ್ಪಿದ್ದಾನೆ ಎಂದು ತಿಳಿದಿರಲಿಲ್ಲ. ಆಹಾರ ಮತ್ತು ನೀರಿಗಾಗಿ ಆತನನ್ನು ಕರೆಯಲು ಪ್ರಯ್ನತಿಸಿದ್ದಾರೆ. ಆದರೆ, ಆತನಿಂದ ಯಾವುದೇ ಪ್ರತಿಕ್ರಿಯೆ ಬಂದಿರಲಿಲ್ಲ ಊಟ, ನೀರಿಲ್ಲದೆ ದಿನ ಕಳೆದ ಹಿನ್ನಲೆ ಅವರು ಸುಸ್ತಾಗಿದ್ದರು. ಅವರ ದುರ್ಬಲ ಧ್ವನಿ ನೆರೆಹೊರೆಯವರಿಗೂ ಕೇಳುತ್ತಿರಲಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ. ‌

ಈ ಸುದ್ದಿ ಓದಿದ್ದೀರಾ? ಕೇರಳ ಮುಖ್ಯಮಂತ್ರಿ ತೆರಳುತ್ತಿದ್ದ ಕಾರು – ಬೆಂಗಾವಲು ವಾಹನಗಳ ಮಧ್ಯೆ ಸರಣಿ ಅಪಘಾತ

ನಗರದ ಬೇರೆ ಪ್ರದೇಶದಲ್ಲಿ ವಾಸಿಸುತ್ತಿರುವ ತಮ್ಮ ಹಿರಿಯ ಮಗನ ಬಗ್ಗೆ ದಂಪತಿಯಿಂದ ಮಾಹಿತಿ ಪಡೆದ ನಂತರ ಪೊಲೀಸರು ಅವರಿಗೆ ಮಾಹಿತಿ ನೀಡಿದ್ದಾರೆ. ವ್ಯಕ್ತಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಕುರಿತು ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...