ಗೋಡೆ ಮೇಲೆ ಡೆತ್‌ನೋಟ್‌ ಬರೆದು ದಂಪತಿ ಆತ್ಮಹತ್ಯೆ

Date:

ಮನೆಯ ಗೋಡೆ ಮೇಲೆ ಡೆತ್‌ನೋಟ್‌ ಬರೆದು ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಛತ್ತೀಸ್​ಗಢದ ಬಿಲಾಸ್​ಪುರದಲ್ಲಿ ನಡೆದಿದೆ. ಡೆತ್‌ನೋಟ್‌ ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ.

ಶಿವಾನಿ ತಾಂಬೆ ಅಲಿಯಾಸ್ ನೇಹಾ ಅವರ ಮೃತದೇಹ ಹಾಸಿಗೆಯ ಮೇಲೆ ಪತ್ತೆಯಾಗಿದ್ದರೆ, ಅವರ ಪತಿ ರಾಜ್ ತಾಂಬೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಆರಂಭದಲ್ಲಿ ಇದೊಂದು ಕೌಟುಂಬಿಕ ಕಲಹದಿಂದ ನಡೆದಿರುವ ಆತ್ಮಹತ್ಯೆಯೆಂದು ಭಾವಿಸಲಾಗಿತ್ತು. ಆದರೆ, ಗೋಡೆಯ ಮೇಲಿನ ಡೆತ್‌ನೋಟ್‌ನಿಂದಾಗಿ ಆತ್ಮಹತ್ಯೆಗೆ ಬೇರೆಯದ್ದೇ ಕಾರಣಗಳಿವೆ ಎಂಬುದು ಗೊತ್ತಾಗಿದೆ.

ಡೆತ್‌ನೋಟ್‌ನಲ್ಲಿ ರಾಜೇಶ್ ವಿಶ್ವಾಸ್ ಎಂಬ ವ್ಯಕ್ತಿಯ ಹೆಸರು ಮತ್ತು ಮೊಬೈಲ್ ಸಂಖ್ಯೆಯನ್ನೂ ದಂಪತಿ ಉಲ್ಲೇಖಿಸಿದ್ದಾರೆ. ರಾಜೇಶ್‌ ಎಂಬಾತದ ತಮ್ಮ ದಾಂಪತ್ಯದಲ್ಲಿ ಗೊಂದಲ ಉಂಟು ಮಾಡುತ್ತಿದ್ದಾನೆ. ಆತನಿಂದಾಗಿಯೇ ತಾವು ಸಾವಿನ ನಿರ್ಧಾರ ಮಾಡಿದ್ದಾಗಿ ಬರೆಯಲಾಗಿದೆ. ಜೊತೆಗೆ, ‘ಮಕ್ಕಳೇ, ನಾವು ನಿಮ್ಮನ್ನು ಪ್ರೀತಿಸುತ್ತೇವೆ’ ಎಂದು ಬರೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದಂಪತಿಗಳು 10 ವರ್ಷಗಳ ಹಿಂದೆ ಪ್ರೀತಿಸಿ ವಿವಾಹವಾಗಿದ್ದರು. ದಂಪತಿಗೆ ಮೂವರು ಮಕ್ಕಳಿದ್ದಾರೆ. ದಾಂಪತ್ಯ ಚೆನ್ನಾಗಿಯೇ ಇತ್ತು. ಆದರೆ, ಕೆಲವು ತಿಂಗಳುಗಳಿಂದ ದಂಪತಿ ನಡುವೆ ಬಿರುಕು ಮೂಡಿತ್ತು ಎಂದು ಹೇಳಲಾಗಿದೆ. ಅವರ ನಡುವಿನ ಬಿರುಕು ಮತ್ತು ಜಗಳಕ್ಕೆ ರಾಜೇಶ್‌ ಕಾರಣವೆಂದು ಆರೋಪಿಸಲಾಗಿದೆ.

ಆದಾಗ್ಯೂ, ನೇಹಾಳನ್ನು ರಾಜ್‌ ಕೊಂದು, ಬಳಿಕ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದೂ ಶಂಕಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಲಾಗುತ್ತದೆ ಎಂದು ತಿಳಿಸಿರುವುದಾಗಿ ವರದಿಯಾಗಿದೆ.

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...