ಮಾಲಿನ್ಯದ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ, ಪಟಾಕಿಗಳನ್ನು ಸಿಡಿಸಿ: ಅಣ್ಣಾಮಲೈ

Date:

ಪಟಾಕಿ ಉದ್ಯಮದಲ್ಲಿ ತೊಡಗಿರುವ ಕಾರ್ಮಿಕರ ಕಲ್ಯಾಣವನ್ನು ಗಮನದಲ್ಲಿಟ್ಟುಕೊಂಡು ದೀಪಾವಳಿಯಂದು ಸಾಕಷ್ಟು ಪ್ರಮಾಣದಲ್ಲಿ ಪಟಾಕಿಗಳನ್ನು ಖರೀದಿಸಿ, ಸಿಡಿಸುವಂತೆ ಬಿಜೆಪಿ ನಾಯಕ ಕೆ ಅಣ್ಣಾಮಲೈ ಮನವಿ ಮಾಡಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ವಿಡಿಯೊವನ್ನು ಪೋಸ್ಟ್ ಮಾಡಿರುವ ಅವರು, ಪಟಾಕಿಗಳನ್ನು ಸಿಡಿಸುವ ಅಗತ್ಯವನ್ನು ವಿವರಿಸಿದ್ದಾರೆ. ಪಟಾಕಿ ಸಿಡಿಸುವುದು ನಮ್ಮ ಸಂಸ್ಕೃತಿ ಮಾತ್ರವಲ್ಲ, ನಮ್ಮ ಜನರ ಜೀವನಾಧಾರ, ನಮ್ಮ ಶಿವಕಾಶಿ ಜನರ ಒಟ್ಟಾರೆ ಆರ್ಥಿಕತೆ. ನಮ್ಮ ಸಂತೋಷಕ್ಕಾಗಿ ಪಟಾಕಿಗಳನ್ನು ತಯಾರಿಸುವ ಕಾರ್ಮಿಕರ ಜೀವನೋಪಾಯಕ್ಕಾಗಿ ನಾವೆಲ್ಲರೂ ನಮ್ಮಿಂದ ಸಾಧ್ಯವಾದಷ್ಟು ಪಟಾಕಿಗಳನ್ನು ಖರೀದಿಸಿ ಸಿಡಿಸಬೇಕೆಂದು ನಾನು ವಿನಂತಿಸುತ್ತೇನೆ. ಒಂದು ದಿನ ಪಟಾಕಿಗಳನ್ನು ಹಚ್ಚುವುದರಿಂದ ಏನೂ ಆಗುವುದಿಲ್ಲ. ಇದರಿಂದ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ಮಾರಾಟದ ಮೂಲಕ ಸಾಲ ತೀರಿಸುವ ಕನಸು ಕಾಣುತ್ತಿರುವ ಲಕ್ಷಾಂತರ ಸಣ್ಣ ವ್ಯಾಪಾರಿಗಳ ಕನಸು ನನಸಾಗುತ್ತದೆ’ ಎಂದು ಅಣ್ಣಾಮಲೈ ಹೇಳಿದ್ದಾರೆ.

ವಾತಾವರಣಕ್ಕೆ ಇಂಗಾಲ ಹೊರಸೂಸುವಿಕೆಯಲ್ಲಿ ಭಾರತ 125ನೇ ಸ್ಥಾನದಲ್ಲಿದೆ. ಅಮೆರಿಕ 16 ಮತ್ತು ಚೀನಾ 25ನೇ ಸ್ಥಾನದಲ್ಲಿವೆ. ಆದರೆ ನಾವು ಕೇವಲ ಒಂದು ದಿನ ಪಟಾಕಿ ಸಿಡಿಸುವುದನ್ನು ಪ್ರಮುಖ ವಿಷಯವಾಗಿ ಚರ್ಚಿಸುತ್ತಿದ್ದೇವೆ. ಸುಮಾರು 8 ಲಕ್ಷ ಜನ ನೇರವಾಗಿ ಮತ್ತು ಪರೋಕ್ಷವಾಗಿ ಪಟಾಕಿ ಉದ್ಯಮದೊಂದಿಗೆ ಸಂಪರ್ಕ ಹೊಂದಿದ್ದಾರೆ. ಅವರು ನಮ್ಮ ಸಂತೋಷಕ್ಕಾಗಿ ಸಾಕಷ್ಟು ಸವಾಲುಗಳ ನಡುವೆ ಪಟಾಕಿಗಳನ್ನು ತಯಾರಿಸುತ್ತಾರೆ. ನಾವು ಅವರ ಸಂತೋಷಕ್ಕಾಗಿ ಪಟಾಕಿಗಳನ್ನು ಖರೀದಿಸಿ ಏಕೆ ಸಿಡಿಸಬಾರದು’ ಎಂದು ಅವರು ಕೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಜಾಹೀರಾತುಗಳಲ್ಲಿ ಸೆಲೆಬ್ರಿಟಿಗಳು; ರಾಜ್‌ರಿಂದ ಕಲಿಯುವುದು ಬಹಳಷ್ಟಿದೆ

‘ಪಟಾಕಿ ಸಿಡಿಸುವುದು ನಮ್ಮ ಸಂಸ್ಕೃತಿ ಮಾತ್ರವಲ್ಲ, ನಮ್ಮ ಜನರ ಜೀವನಾಧಾರ, ನಮ್ಮ ಶಿವಕಾಶಿ ಜನರ ಒಟ್ಟಾರೆ ಆರ್ಥಿಕತೆ. ನಮ್ಮ ಸಂತೋಷಕ್ಕಾಗಿ ಪಟಾಕಿಗಳನ್ನು ತಯಾರಿಸುವ ಕಾರ್ಮಿಕರ ಜೀವನೋಪಾಯಕ್ಕಾಗಿ ನಾವೆಲ್ಲರೂ ನಮ್ಮಿಂದ ಸಾಧ್ಯವಾದಷ್ಟು ಪಟಾಕಿಗಳನ್ನು ಖರೀದಿಸಿ ಸಿಡಿಸಬೇಕೆಂದು ನಾನು ವಿನಂತಿಸುತ್ತೇನೆ.

ಒಂದು ದಿನ ಪಟಾಕಿಗಳನ್ನು ಹಚ್ಚುವುದರಿಂದ ಏನೂ ಆಗುವುದಿಲ್ಲ. ಇದರಿಂದ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ಮಾರಾಟದ ಮೂಲಕ ಸಾಲ ತೀರಿಸುವ ಕನಸು ಕಾಣುತ್ತಿರುವ ಲಕ್ಷಾಂತರ ಸಣ್ಣ ವ್ಯಾಪಾರಿಗಳ ಕನಸು ನನಸಾಗುತ್ತದೆ’ ಎಂದು ಅಣ್ಣಾಮಲೈ ಹೇಳಿದ್ದಾರೆ.

ಆದರೆ ಪಟಾಕಿ ಸಿಡಿಸುವಾಗ ಜಾಗರೂಕರಾಗಿರಿ. ಪ್ರಾಣಿಗಳು ಸೇರಿದಂತೆ ಅನೇಕ ಜೀವಿಗಳು ನಮ್ಮೊಂದಿಗೆ ವಾಸಿಸುತ್ತವೆ. ಅವುಗಳಿಗೆ ಯಾವುದೇ ತೊಂದರೆಯಾಗದಂತೆ ಎಚ್ಚರ ವಹಿಸಿ. ಈ ದೀಪಾವಳಿ ಹಬ್ಬ ಪ್ರತಿಯೊಬ್ಬರ ಬಾಳಿನಲ್ಲಿ ಬೆಳಕು ಚೆಲ್ಲಲಿ ಎಂದು ಅವರು ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...