ಚಲಿಸುತ್ತಿದ್ದ ಆ್ಯಂಬುಲೆನ್ಸ್‌ನಲ್ಲಿಯೇ 16ರ ಬಾಲಕಿ ಮೇಲೆ ಅತ್ಯಾಚಾರ, ಐವರು ಆರೋಪಿಗಳ ಬಂಧನ

Date:

ಚಲಿಸುತ್ತಿದ್ದ ಆ್ಯಂಬುಲೆನ್ಸ್‌​ನಲ್ಲಿಯೇ ದುರುಳರು 16 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಅಮಾನವೀಯ ಘಟನೆ ಮಧ್ಯಪ್ರದೇಶದ ಮೌಗಂಜ್​ ಜಿಲ್ಲೆಯಲ್ಲಿ ನಡೆದಿದೆ. 

ನವೆಂಬರ್​ 22ರಂದು ತುರ್ತು ಸೇವಾ ಆಂಬ್ಯುಲೆನ್ಸ್​ 108ರಲ್ಲಿ ದುಷ್ಕೃತ್ಯ ಎಸಗಿದ ನಾಲ್ವರು ದುರುಳರ ಪೈಕಿ ಚಾಲಕ​ ಸೇರಿದಂತೆ ಐವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ರೇವಾ ವ್ಯಾಪ್ತಿಯ ಪ್ರಧಾನ ಉಪ ಇನ್ಸ್‌ಪೆಕ್ಟರ್​​ ಸಾಕೇತ್​ ಪಾಂಡೆ ಮಾಹಿತಿ ನೀಡಿದ್ದಾರೆ.

ನವೆಂಬ‌ರ್ 22ರಂದು ಶಾನಸಾನ್ ಎಂಬ ಹಳ್ಳಿಯ ಬಳಿ ಬಾಲಕಿ ಮತ್ತು ಆತನ ಸಂಬಂಧಿ ಬಾಲಕನನ್ನು 108 ಆ್ಯಂಬುಲೆನ್ಸ್‌ನಲ್ಲಿ ಆರೋಪಿಗಳ ಹತ್ತಿಸಿಕೊಂಡಿದ್ದರು. ಈ ವೇಳೆ ಬಾಲಕಿಯ ಸಂಬಂಧಿ ನೀರು ತರುವ ನೆಪದಲ್ಲಿ ಮಾರ್ಗಮಧ್ಯದಲ್ಲಿ ಇಳಿದು ಹೋಗಿದ್ದ. ನಂತರ ಆಂಬುಲೆನ್ಸ್ ಚಲಿಸುತ್ತಿರುವಾಗಲೇ ರಾಜೇಶ್ ಕೇವಾತ್ ಎನ್ನುವ ಯುವಕ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾನೆ. ಇದಾದ ಬಳಿಕ ಬಾಲಕಿಯನ್ನು ರಾತ್ರಿಯಿಡೀ ತಮ್ಮ ವಶದಲ್ಲಿರಿಸಿಕೊಂಡಿದ್ದು, ಮರುದಿನ ಬೆಳಗ್ಗೆ ರಸ್ತೆ ಬದಿ ಎಸೆದು ಹೋಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಉಡುಪಿ | ಪಡುಬಿದ್ರಿ ವಿವಾಹಿತ ಮಹಿಳೆ ನಾಪತ್ತೆ, ಪ್ರಕರಣ ದಾಖಲು

ಮನೆ ತಲುಪಿದ ಸಂತ್ರಸ್ತೆ ನಡೆದ ಘಟನೆಯನ್ನು ತಾಯಿಗೆ ವಿವರಿಸಿದ್ದಾರೆ. ಸಮಾಜದಲ್ಲಿ ಕುಟುಂಬದ ಗೌರವ ಏನಾಗುತ್ತದೋ ಎಂಬ ಆತಂಕದಿಂದ ಎರಡು ದಿನಗಳ ಕಾಲ ಅವರು ಪೊಲೀಸರಿಗೆ ಮಾಹಿತಿ ನೀಡಿರಲಿಲ್ಲ. ಬಳಿಕ ನವೆಂಬರ್​ 25ರಂದು ಪ್ರಕರಣ ದಾಖಲಿಸಿದ್ದಾರೆ. ಇದಕ್ಕೆ ಬಾಲಕಿಯ ಸಂಬಂಧಿ ಹಾಗೂ ಚಾಲಕ ಸೇರಿದಂತೆ ಇತರ ಮೂವರು ಸಹಕಾರ ಕೊಟ್ಟಿದ್ದಾರೆ ಎಂದು ರೇವಾ ವಲಯದ ಡಿಐಜಿಪಿ ಸಾಕೇತ್ ಪಾಂಡೆ ತಿಳಿಸಿದ್ದಾರೆ.

25ರಿಂದ 30 ವರ್ಷದ ಐವರ ಮೇಲೂ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಆರೋಪಿಗಳ ಮೇಲೆ ಪೋಕ್ಸೋ ಮತ್ತು ಭಾರತೀಯ ನ್ಯಾಯಸಂಹಿತೆ ಅಡಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...