‘ಸನ್ನಿ ಲಿಯೋನ್’ ಹೆಸರಿನಲ್ಲಿ ನಕಲಿ ಖಾತೆ ತೆರೆದು ಸರ್ಕಾರದಿಂದ ಪ್ರತಿ ತಿಂಗಳು ₹1000 ಪಡೆದ ವ್ಯಕ್ತಿ!

Date:

ಛತ್ತೀಸ್‌ಗಢ ಸರ್ಕಾರ ನೀಡುವ ಮಹತಾರಿ ವಂದನಾ ಯೋಜನೆಯಡಿ ವಿವಾಹಿತ ಮಹಿಳೆಯರಿಗೆ ನೀಡುವ ಒಂದು ಸಾವಿರ ರೂಪಾಯಿ ಹಣಕ್ಕೆ ನಟಿ ಸನ್ನಿ ಲಿಯೋನ್ ಕೂಡ ಫಲಾನುಭವಿಯಾಗಿದ್ದಾರೆ!

ಪರೀಕ್ಷೆ ಹಾಲ್ ಟಿಕೆಟ್​ನಲ್ಲಿ ಸನ್ನಿ ಲಿಯೋನ್ ಫೊಟೋ, ಸರ್ಕಾರಿ ಫಲಾನುಭವಿಗಳ ಲಿಸ್ಟ್​ನಲ್ಲಿ ಸನ್ನಿ ಲಿಯೋನ್ ಹೆಸರು ಸಾಕಷ್ಟು ಬಾರಿ ವೈರಲ್ ಆಗಿದೆ. ಆದರೆ ಈ ಸಲ ವಿವಾಹಿತ ಮಹಿಳೆಯರಿಗಾಗಿ ಛತ್ತೀಸ್‌ಗಢ ಬಿಜೆಪಿ ಸರ್ಕಾರ ಪ್ರತಿ ತಿಂಗಳು 1 ಸಾವಿರ ನೀಡುವ ಯೋಜನೆಯಡಿ ವ್ಯಕ್ತಿಯೊಬ್ಬರು ನಟಿ ಸನ್ನಿ ಲಿಯೋನ್ ಹೆಸರಿನಲ್ಲಿ ಖಾತೆಯನ್ನು ತೆರೆದು ಪ್ರತಿ ತಿಂಗಳು ₹1,000 ಮೊತ್ತವನ್ನು ಜೇಬಿಗಿಳಿಸುತ್ತಿರುವುದು ಬೆಳಕಿಗೆ ಬಂದಿದೆ.

ಎಲ್ಲ ಸರ್ಕಾರಿ ಯೋಜನೆಗಳು ದುರುಪಯೋಗವಾಗುವಂತೆ ಈ ಯೋಜನೆಯೂ ಕೂಡ ದುರುಪಯೋಗವಾಗಿದೆ. ಛತ್ತೀಸ್‌ಗಢದ ಬಸ್ತಾರ್ ಪ್ರದೇಶದ ತಾಲೂರ್ ಗ್ರಾಮದಲ್ಲಿ ಈ ರೀತಿಯ ನಕಲಿ ಖಾತೆ ತೆರೆದು ವಂಚನೆ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ. ಈ ಬಗ್ಗೆ ತನಿಖೆ ನಡೆಸಿ ಬ್ಯಾಂಕ್ ಖಾತೆಗೆ ಹಾಕಿದ ಹಣ ವಸೂಲಿ ಮಾಡಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಜಿಲ್ಲಾಧಿಕಾರಿ ಹಾರಿಸ್ ಎಸ್. ಸೂಚಿಸಿದ್ದಾರೆ. ಮಾಧ್ಯಮಗಳಲ್ಲಿ ವರದಿ ಪ್ರಸಾರವಾದ ನಂತರ ಅಧಿಕಾರಿಗಳಿಗೆ ಈ ವಿಚಾರ ಬೆಳಕಿಗೆ ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವೀರೇಂದ್ರ ಜೋಶಿ ಎಂಬಾತ ಈ ರೀತಿ ಸನ್ನಿ ಲಿಯೋನ್‌ ಹೆಸರಿನಲ್ಲಿ ನಕಲಿ ಖಾತೆಯನ್ನು ತೆರೆದಿದ್ದು, ಆತನ ವಿರುದ್ಧ ಈಗ ಪೊಲೀಸರು ಕೇಸು ದಾಖಲಿಸಿದ್ದಾರೆ. ಅಲ್ಲದೇ ಯೋಜನೆಯ ಅರ್ಹ ಫಲಾನುಭವಿಗಳ ಪರಿಶೀಲನೆಯ ಜವಾಬ್ದಾರಿ ಹೊಂದಿರುವ ಅಧಿಕಾರಿಗಳನ್ನು ಈ ಪ್ರಕರಣದಲ್ಲಿ ಆರೋಪಿಗಳನ್ನಾಗಿಸಲಾಗಿದೆ.

ಈ ಸಂಗತಿಯು ಆಡಳಿತಾರೂಢ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್ ನಡುವೆ ತೀವ್ರ ವಾಗ್ವಾದಕ್ಕೂ ಕಾರಣವಾಗಿದೆ. ಮಹತಾರಿ ವಂದನ್ ಯೋಜನೆಯಡಿ ಶೇಕಡಾ 50 ರಷ್ಟು ಫಲಾನುಭವಿಗಳು ನಕಲಿಯಾಗಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ದೀಪಕ್ ಬೈಜ್ ಆರೋಪಿಸಿದ್ದಾರೆ. ಆದರೆ ಇದಕ್ಕೆ ತಿರುಗೇಟು ನೀಡಿದ ಉಪಮುಖ್ಯಮಂತ್ರಿ ಅರುಣ್ ಸಾವೋ ಅವರು, ಕಾಂಗ್ರೆಸ್ ತನ್ನ ಹಿಂದಿನ ಅವಧಿಯಲ್ಲಿ ನೀಡಲಾಗದ ಮಾಸಿಕ ಸಹಾಯವನ್ನು ಈಗ ರಾಜ್ಯದ ಮಹಿಳೆಯರು ಪಡೆಯುತ್ತಿರುವುದರಿಂದ ಕಾಂಗ್ರೆಸ್‌ಗೆ ನೋವಾಗಿದೆ ಎಂದು ತಿರುಗೇಟು ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...