ಮಹಾರಾಷ್ಟ್ರ | ಗೋಮಾಂಸ ಕಳ್ಳಸಾಗಣೆ ಆರೋಪ, ಮುಸ್ಲಿಂ ವ್ಯಕ್ತಿ ಹತ್ಯೆ

Date:

  • ಗೋಹತ್ಯೆ ನಿಷೇಧ ಕಾನೂನು ಜಾರಿಗೆ ಆಯೋಗ ರಚನೆ ಪ್ರಸ್ತಾವನೆ ಅಂಗೀಕರಿಸಿದ್ದ ಮಹಾರಾಷ್ಟ್ರ
  • ಥಳಿತದಿಂದ ಗಂಭೀರ ಗಾಯಗೊಂಡ ಅಫಾನ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವು

ಮಹಾರಾಷ್ಟ್ರ ನಾಸಿಕ್‌ ಜಿಲ್ಲೆಯಲ್ಲಿ ಗೋಮಾಂಸ ಕಳ್ಳಸಾಗಣೆ ಆರೋಪದಲ್ಲಿ ಗೋರಕ್ಷಕರ ಗುಂಪೊಂದು ಮುಸ್ಲಿಂ ವ್ಯಕ್ತಿಯೊಬ್ಬನನ್ನು ಹೊಡೆದು ಕೊಂದಿದೆ ಎಂದು ಅಧಿಕಾರಿಗಳು ಸೋಮವಾರ (ಜೂನ್‌ 26) ಹೇಳಿದ್ದಾರೆ.

32 ವರ್ಷದ ಅಫಾನ್‌ ಅನ್ಸಾರಿ ಹತ್ಯೆಯಾದ ವ್ಯಕ್ತಿ. ಮುಂಬೈನ ಕುರ್ಲಾ ನಿವಾಸಿಯಾದ ಈತ ತನ್ನ ಸಹಾಯಕ ನಾಸಿರ್‌ ಶೇಖ್‌ ಎಂಬ ವ್ಯಕ್ತಿಯೊಂದಿಗೆ ಕಾರೊಂದರಲ್ಲಿ ಪ್ರಾಣಿಯ ಮಾಂಸವನ್ನು ಸಾಗಿಸುತ್ತಿದ್ದರು. ಈ ವೇಳೆ ಗೋರಕ್ಷಕರು ಅಡ್ಡಗಟ್ಟಿ ಇವರನ್ನು ಥಳಿಸಿದ್ದರು.

“ಸ್ಥಳಕ್ಕೆ ಧಾವಿಸಿದಾಗ ಕಾರು ಹಾನಿಗೊಂಡಿತ್ತು. ಗೋ ರಕ್ಷಕರ ಥಳಿತದಿಂದ ಗಂಭೀರವಾಗಿ ಗಾಯಗೊಂಡ ಅಫಾನ್‌ ಮತ್ತು ನಾಸಿರ್‌ನನ್ನು ಮಹಾರಾಷ್ಟ್ರ ಆಸ್ಪತ್ರೆಯೊಂದಕ್ಕೆ ರವಾನಿಸಲಾಯಿತಾದರೂ ಚಿಕಿತ್ಸೆ ವೇಳೆ ಅಫಾನ್ ಮೃತಪಟ್ಟಿದ್ದಾರೆ” ಎಂದು ಸಬ್‌ ಇನ್‌ಸ್ಪೆಕ್ಟರ್‌ ಸುನೀಲ್‌ ಭಾಮ್ರೆ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗಾಯಗೊಂಡ ವ್ಯಕ್ತಿಯ ದೂರಿನ ಮೇರೆಗೆ ಪೊಲೀಸರು ಹತ್ಯೆ ಪ್ರಕರಣ ದಾಖಲಿಸಿದ್ದಾರೆ. ಈ ಸಂಬಂಧ ಇದುವರೆಗೆ 10 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ಪೊಲೀಸರು ಪ್ರಕರಣದ ತನಿಖೆ ಕೈಗೊಂಡಿದ್ದಾರೆ.

ಮಹಾರಾಷ್ಟ್ರ ಘಟನೆಯಲ್ಲಿ ಮುಸ್ಲಿಂ ವ್ಯಕ್ತಿಯು ಗೋಮಾಂಸ ಸಾಗಿಸುತ್ತಿದ್ದರೋ ಇಲ್ಲವೋ ಎಂಬುದು ಪ್ರಯೋಗಾಲಯದ ವರದಿ ನಂತರ ತಿಳಿಯಲಿದೆ. ಚಿಕಿತ್ಸೆ ಪಡೆಯುತ್ತಿರುವ ವ್ಯಕ್ತಿಯ ಹೇಳಿಕೆ ಪಡೆಯಲಾಗುವುದು ಎಂದು ಪೊಲೀಸರು ಹೇಳಿದರು.

ಘಟನೆಯ ಸಂಪೂರ್ಣ ತನಿಖೆ ನಡೆಸಲಾಗುವುದು. ಪ್ರಕರಣದಲ್ಲಿ ತಪ್ಪು ತಿಳಿವಳಿಕೆಯಾಗಿದ್ದಲ್ಲಿ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಪಶ್ಚಿಮ ಬಂಗಾಳ | ಎರಡು ಗೂಡ್ಸ್ ರೈಲುಗಳ ನಡುವೆ ಡಿಕ್ಕಿ; ಹಳಿ ತಪ್ಪಿದ ಬೋಗಿಗಳು

ಗೋಹತ್ಯೆ ನಿಷೇಧ ಕಾಯ್ದೆಯ ಸಿಂಧುತ್ವವನ್ನು ಬಾಂಬೆ ಹೈಕೋರ್ಟ್‌ ಎತ್ತಿ ಹಿಡಿದ ಎಂಟು ವರ್ಷಗಳ ನಂತರ ಕಳೆದ ಮಾರ್ಚ್‌ನಲ್ಲಿ ಮಹಾರಾಷ್ಟ್ರ ಸರ್ಕಾರ ಗೋಹತ್ಯೆ ನಿಷೇಧ ಕಾನೂನನ್ನು ಜಾರಿಗೊಳಿಸಲು ಆಯೋಗವೊಂದನ್ನು ರಚಿಸುವ ಪ್ರಸ್ತಾವನೆಯನ್ನು ಅಂಗೀಕರಿಸಿತ್ತು.

ಗೋಹತ್ಯೆ ನಿಷೇಧ ಕಾನೂನು ಜಾರಿಗೆ ನಿಗದಿಪಡಿಸಿರುವ ಪ್ರಾಧಿಕಾರವು ಹಸು, ಎತ್ತು ಅಥವಾ ಗೂಳಿ ರಫ್ತಿಗೆ ಬಳಸುವ ಯಾವುದೇ ವಾಹನವನ್ನು ತಡೆಯುವ ಮತ್ತು ಶೋಧಿಸುವ ಅಧಿಕಾರ ಹೊಂದಿದೆ ಎಂದು ನ್ಯಾಯಾಲಯ ತನ್ನ ಆದೇಶದಲ್ಲಿ ಹೇಳಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...