ಚಂದ್ರಬಾಬು ನಾಯ್ಡು ಹಗರಣ : ‘ಸುಪ್ರೀಂ’ನಿಂದ ಭಿನ್ನ ತೀರ್ಪು, ಮುಖ್ಯ ನ್ಯಾಯಮೂರ್ತಿ ಪೀಠಕ್ಕೆ ವರ್ಗಾವಣೆ

Date:

ಆಂಧ್ರ ಪ್ರದೇಶ ಮಾಜಿ ಮುಖ್ಯಮಂತ್ರಿ ಎನ್‌ ಚಂದ್ರಬಾಬು ನಾಯ್ಡು ಅವರ ಕೌಶಲ್ಯಾಭಿವೃದ್ಧಿ ಹಗರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಇಂದು ಭಿನ್ನ ತೀರ್ಪು ನೀಡಿದೆ.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅನಿರುದ್ಧ ಬೋಸ್ ಮತ್ತು ನ್ಯಾಯಮೂರ್ತಿ ಬೆಲಾ ಎಂ.ತ್ರಿವೇದಿ ಅವರನ್ನೊಳಗೊಂಡ ಪೀಠ ತೀರ್ಪು ನೀಡಿದೆ. ಆದರೆ ಇಬ್ಬರು ನ್ಯಾಯಾಧೀಶರು ವಿಭಿನ್ನ ತೀರ್ಪು ನೀಡಿದ್ದಾರೆ.

ನ್ಯಾಯಮೂರ್ತಿ ಅನಿರುದ್ಧ ಬೋಸ್‌ ಅವರು, ಸೆಕ್ಷನ್ 17ಎ ಭ್ರಷ್ಟಾಚಾರ ತಡೆ ಕಾಯ್ದೆ ಅನ್ವಯ ಸರ್ಕಾರಿ ನೌಕರನ ತನಿಖೆಗೆ ಪೂರ್ವಾನುಮತಿ ಪಡೆಯಬೇಕು. ಆದರೆ ಚಂದ್ರಬಾಬು ಅವರನ್ನು ವಿಚಾರಣೆಗೆ ಒಳಪಡಿಸಲು ಸಕ್ಷಮ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆದಿಲ್ಲ ಎಂದು ತೀರ್ಪು ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅನಂತಕುಮಾರ್ ಎಂಬ ಬೆಂಕಿ ಬಾಲಕನೂ, ಜನಿವಾರದಾಟವೂ

ಈ ತೀರ್ಪಿಗೆ ಭಿನ್ನಾಭಿಪ್ರಾಯ ವ್ಯಕ್ತಪಡಿಸಿದ ಪೀಠದ ಮತ್ತೊಬ್ಬ ನ್ಯಾಯಮೂರ್ತಿ ಬೆಲಾ ಎಂ ತ್ರಿವೇದಿ, ಸೆಕ್ಷನ್ 17ಎ ಕಾಯ್ದೆಯನ್ನು 2018ರಲ್ಲಿ ತಿದ್ದುಪಡಿ ತರುವ ಮೊದಲೇ ಚಂದ್ರಬಾಬು ನಾಯ್ಡು ವಿರುದ್ಧ ಪ್ರಕರಣ ದಾಖಲಾಗಿದೆ. ಆದ ಕಾರಣ ತನಿಖೆಗೆ ಸೆಕ್ಷನ್‌ 17ಎ ಕಾಯ್ದೆಯ ಪೂರ್ವಾನುಮತಿ ಅಗತ್ಯವಿಲ್ಲ ಎಂದು ತಿಳಿಸಿದರು.

ಪ್ರಕರಣವನ್ನು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ನೇತೃತ್ವದ ತ್ರಿಸದಸ್ಯ ಪೀಠಕ್ಕೆ ವರ್ಗಾಯಿಸಲಾಯಿತು. ಈ ಪ್ರಕರಣದಲ್ಲಿ ನಾಯ್ಡು ಅವರಿಗೆ ಆಂಧ್ರ ಪ್ರದೇಶ ಹೈಕೋರ್ಟ್ ಕಳೆದ ವರ್ಷ ನವೆಂಬರ್ 20ರಂದು ನಿಯಮಿತ ಜಾಮೀನು ಮಂಜೂರು ಮಾಡಿತ್ತು.

ಸೆಕ್ಷನ್ 17ಎ ತಿದ್ದುಪಡಿಯನ್ನು ಜುಲೈ 26,2018 ರಂದು ಜಾರಿಗೊಳಿಸಲಾಗಿದೆ. ಈ ಕಾಯ್ದೆಯ ಅನ್ವಯ ಸರ್ಕಾರಿ ಅಧಿಕಾರಿಯನ್ನು ಭ್ರಷ್ಟಾಚಾರ ತಡೆ ಕಾಯ್ದೆಯಡಿಯಲ್ಲಿ ವಿಚಾರಣೆಗೊಳಪಡಿಸಲು ಅಥವಾ ತನಿಖೆಗೊಳಪಡಿಸಲು ಸಂಬಂಧಿಸಿದ ಪೊಲೀಸ್ ಅಧಿಕಾರಿಯು ಸಕ್ಷಮ ಪ್ರಾಧಿಕಾರದ ಅನುಮತಿ ಪಡೆಯುವುದು ಕಡ್ಡಾಯವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...