ಡೇಟಾ ದುರುಪಯೋಗಕ್ಕೆ ಕಡಿವಾಣ; ಶೀಘ್ರದಲ್ಲೇ ಹೆಸರು-ವಿಳಾಸ ಮರೆಮಾಚುವ ಆಧಾರ್‌

Date:

ಆಧಾರ್ ಕಾರ್ಡ್‌ನಲ್ಲಿರುವ ವೈಯಕ್ತಿಕ ಮಾಹಿತಿಯ ದುರುಪಯೋಗ ಸಾಧ್ಯತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ UIDAI ಮಹತ್ವದ ಕ್ರಮಕ್ಕೆ ಮುಂದಾಗಿದೆ. ಡಿಸಂಬರ್‌ನಲ್ಲಿ ಹೊಸ ಮಾದರಿಯ Aadhaar ಕಾರ್ಡ್‌ಗಳನ್ನು ವಿತರಣೆ ಮಾಡಲು ಸರ್ಕಾರ ಸಜ್ಜಾಗಿದೆ. ಹೊಸ ಕಾರ್ಡ್‌ನಲ್ಲಿ ವ್ಯಕ್ತಿಯ ಹೆಸರು, ವಿಳಾಸ, ಜನ್ಮದಿನಾಂಕ ಮತ್ತು ಆಧಾರ್ ನಂಬರ್ ಯಾವುದೂ ಕಾಣುವುದಿಲ್ಲ. ಕಾರ್ಡ್‌ನಲ್ಲಿ ಕೇವಲ ವ್ಯಕ್ತಿಯ ಫೋಟೋ ಮತ್ತು QR ಕೋಡ್ ಮಾತ್ರ ಇರುವಂತೆ ವಿನ್ಯಾಸ ಮಾಡಲಾಗಿದೆ.

ವರದಿಗಳ ಪ್ರಕಾರ, UIDAI ಪ್ರಸ್ತಾಪಿಸಿರುವ ಈ ಹೊಸ ಕ್ರಮವು ಆಧಾರ್ ಡೇಟಾದ ಭದ್ರತೆಯನ್ನು ಹೆಚ್ಚಿಸುವ ಉದ್ದೇಶ ಹೊಂದಿದೆ. ಈಗಿನ ಕಾರ್ಡ್‌ಗಳಲ್ಲಿ ಇದ್ದ ಮಾಹಿತಿಯನ್ನು ದುರುಪಯೋಗಪಡಿಸಿಕೊಳ್ಳುವ ಭೀತಿ ಇರುವುದರಿಂದ ಈ ಬದಲಾವಣೆ ಅಗತ್ಯವೆಂದು ಅಧಿಕಾರಿಗಳು ತಿಳಿಸಿದ್ದಾರೆ. ಹೊಸ ವ್ಯವಸ್ಥೆ ಜಾರಿಯಾದ ನಂತರ, ಆಫ್‌ಲೈನ್ ಆಧಾರ್ ವೆರಿಫಿಕೇಶನ್‌ ವಿಧಾನವನ್ನು ಹಂತ ಹಂತವಾಗಿ ಕೈಬಿಡಲಾಗುವುದು.

ಇನ್ನು ಮುಂದೆ ಆಧಾರ್ ಆಧಾರಿತ ಗುರುತಿನ ಪರಿಶೀಲನೆ ಆನ್‌ಲೈನ್‌ನಲ್ಲಿ ಮಾತ್ರ ಸಾಧ್ಯ. ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆಗಳು ಮಾತ್ರ QR ಕೋಡ್ ಸ್ಕ್ಯಾನ್ ಮಾಡುವ ಮೂಲಕ UIDAI ಡೇಟಾಬೇಸ್‌ನಿಂದ ವ್ಯಕ್ತಿಯ ಹೆಸರು, ವಿಳಾಸ ಸೇರಿದಂತೆ ಅಗತ್ಯ ವಿವರಗಳನ್ನು ಪಡೆಯಲು ಅವಕಾಶ ಇರುತ್ತದೆ. ಹೀಗಾಗಿ ಅನಧಿಕೃತ ವ್ಯಕ್ತಿಗಳು ಕಾರ್ಡ್‌ನ ಮೂಲಕ ಯಾವುದೇ ಮಾಹಿತಿಯನ್ನು ಪಡೆಯುವ ಅವಕಾಶವೇ ಇರುವುದಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ತಂತ್ರಜ್ಞಾನವು ಸಿನಿಮಾದಲ್ಲಿ ಏಕರೂಪತೆ ಹೇರುತ್ತಿದೆ: ನಿರ್ದೇಶಕ ಗಿರಿರಾಜ್

UIDAI ಜಾರಿಗೆ ತರಲಿರುವ ಈ ಕ್ರಮವು Aadhaar ಕಾಯ್ದೆಗೆ ಪೂರಕವಾಗಿದೆ. ಕಾಯ್ದೆಯ ಪ್ರಕಾರ, ವ್ಯಕ್ತಿಯ ಆಧಾರ್ ನಂಬರ್ ಅಥವಾ ಬಯೋಮೆಟ್ರಿಕ್ ಮಾಹಿತಿಯನ್ನು ಯಾರೂ ಸಂಗ್ರಹಿಸಬಾರದು, ಹಂಚಿಕೊಳ್ಳಬಾರದು. QR ಕೋಡ್ ಆಧಾರಿತ ಪರಿಶೀಲನೆ ವ್ಯವಸ್ಥೆ ಈ ನಿಯಮಗಳನ್ನು ಇನ್ನಷ್ಟು ಕಠಿಣಗೊಳಿಸುವಲ್ಲಿ ಸಹಕಾರಿಯಾಗಿದೆ.

ಆಧಾರ್ ಪರಿಶೀಲನೆ ಮಾಡುವಾಗ ವ್ಯಕ್ತಿಯ ಅನುಮತಿ ಅವಶ್ಯ. OTP, ಬೆರಳಚ್ಚು (ಫಿಂಗರ್‌ಪ್ರಿಂಟ್) ಅಥವಾ ಕಣ್ಣಿನ ಸ್ಕ್ಯಾನ್ (ಐರಿಸ್) ಮೂಲಕ ಒಪ್ಪಿಗೆ ಪಡೆದ ನಂತರವೇ ವೆರಿಫಿಕೇಶನ್ ಮಾಡಬೇಕು. ಈ ನಿಯಮ ಉಲ್ಲಂಘಿಸಿದರೆ 1 ಕೋಟಿ ರೂ. ವರೆಗೆ ದಂಡ ವಿಧಿಸಬಹುದು ಎಂದು UIDAI ತಿಳಿಸಿದೆ.

ಹೊಸ ಆಧಾರ್ ಕಾರ್ಡ್ ಬಂದರೆ ಜನರ ವೈಯಕ್ತಿಕ ಮಾಹಿತಿ ಇನ್ನಷ್ಟು ಸುರಕ್ಷಿತವಾಗುತ್ತದೆ. QR ಕೋಡ್ ಮೂಲಕ ಮಾತ್ರ ವಿವರಗಳನ್ನು ಪಡೆಯಲು ಸಾಧ್ಯವಾಗುವುದರಿಂದ, ಕಾರ್ಡ್‌ನ್ನು ತಪ್ಪಾಗಿ ಬಳಸಿ ದುರುಪಯೋಗ ಮಾಡುವ ಅವಕಾಶ ಬಹಳಷ್ಟು ಕಡಿಮೆಯಾಗುತ್ತದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...