ಅಬಕಾರಿ ನೀತಿ ಹಗರಣ | ಜಾಮೀನು ಸಿಕ್ಕ ಬಳಿಕ ಜೈಲಿನಿಂದ ಬಿಡುಗಡೆಗೊಂಡ ಆಪ್ ಸಂಸದ ಸಂಜಯ್ ಸಿಂಗ್‌

Date:

ದೆಹಲಿ ಅಬಕಾರಿ ನೀತಿಯ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಎಎಪಿಯ ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್‌ ಅವರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ಜಾಮೀನು ಮಂಜೂರು ಮಾಡಿದ ಹಿನ್ನೆಲೆಯಲ್ಲಿ ಬುಧವಾರ ಸಂಜೆ ತಿಹಾರ್ ಜೈಲಿನಿಂದ ಬಿಡುಗಡೆಗೊಂಡಿದ್ದಾರೆ.

ತಮ್ಮ ಪಕ್ಷದ ಮುಖಂಡನನ್ನು ಸ್ವಾಗತಿಸಲು ನೂರಾರು ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ನೆರೆದಿದ್ದರು. ಸಂಜಯ್ ಸಿಂಗ್ ಜೈಲಿನಿಂದ ಹೊರಬರುತ್ತಿದ್ದಂತೆಯೇ ಸಂಭ್ರಮಾಚರಣೆ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಾಮೀನಿನಿಂದ ಹೊರಬಂದ ತಕ್ಷಣ ನೆರೆದಿದ್ದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಎಎಪಿ ಸಂಸದ ಸಂಜಯ್ ಸಿಂಗ್, “ಇದು ನಾವು ಸಂಭ್ರಮಿಸಬೇಕಾದ ಸಮಯವಲ್ಲ. ಹೋರಾಟ ಸಂಘರ್ಷ ನಡೆಸಬೇಕಾದ ಸಮಯ” ಎಂದು ಹೇಳಿದರು.

“ನಮ್ಮ ಪಕ್ಷದ ಹಿರಿಯ ನಾಯಕರಾದ ಅರವಿಂದ್ ಕೇಜ್ರಿವಾಲ್, ಸತ್ಯೇಂದ್ರ ಜೈನ್ ಮತ್ತು ಮನೀಶ್ ಸಿಸೋಡಿಯಾ ಅವರನ್ನು ಜೈಲಿನ ಕಂಬಿಗಳ ಹಿಂದೆ ಇರಿಸಲಾಗಿದೆ. ಅವರೆಲ್ಲರೂ ಶೀಘ್ರದಲ್ಲೇ ಹೊರಬರಲಿದ್ದಾರೆ ಎಂಬ ವಿಶ್ವಾಸ ನನಗಿದೆ” ಎಂದು ಆಪ್ ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ ತಿಳಿಸಿದರು.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನ ಹಾಗೂ ರಿಮ್ಯಾಂಡ್ ಕಸ್ಟಡಿಯಲ್ಲಿರುವುದನ್ನು ಪ್ರಶ್ನಿಸಿ ಸಂಜಯ್‌ ಸಿಂಗ್‌ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು.

ಹೆಚ್ಚುವರಿ ಸಾಲಿಟರ್‌ ಜನರಲ್‌ ಎಸ್‌ ವಿ ರಾಜು ಅವರಿಗೆ ಮುಂದಿನ ಕಸ್ಟಡಿ ಅವಧಿಯ ಬಗ್ಗೆ ತಿಳಿಸಲು ನ್ಯಾಯಮೂರ್ತಿಗಳಾದ ಸಂಜೀವ್‌ ಖನ್ನಾ, ದೀಪಂಕರ್ ದತ್ತ ಹಾಗೂ ಪಿ ಬಿ ವರಾಳೆ ಅವರಿದ್ದ ಪೀಠ ಮಂಗಳವಾರ ನಿರ್ದೇಶಿಸಿತ್ತು.

ಅಬಕಾರಿ ಹಗರಣದಲ್ಲಿ ತಮ್ಮದು ಯಾವುದೇ ಪಾತ್ರವಿಲ್ಲ ಎಂದು ಜಾರಿ ನಿರ್ದೇಶನಾಲಯ ಬಂಧಿಸಿರುವುದನ್ನು ಪ್ರಶ್ನಿಸಿ ಸಂಜಯ್‌ ಸಿಂಗ್‌ ಅವರು ಜಾಮೀನಿಗಾಗಿ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದರು. ದೆಹಲಿ ಹೈಕೋರ್ಟ್ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು.

ದೆಹಲಿ ಅಬಕಾರಿ ಹಗರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಹಲವು ನಾಯಕರನ್ನು ಬಂಧಿಸಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...