ಕಾಂಗ್ರೆಸ್‌ನೊಂದಿಗೆ ಐದು ರಾಜ್ಯಗಳಲ್ಲಿ ಚುನಾವಣಾ ಮೈತ್ರಿಗೆ ಆಪ್ ಸಿದ್ಧ

Date:

ಅಪ್‌ ಪಕ್ಷ ಪಂಜಾಬ್ ಒಳಗೊಂಡು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನೊಂದಿಗೆ ಐದು ರಾಜ್ಯಗಳಲ್ಲಿ ಚುನಾವಣಾ ಮೈತ್ರಿ ಮಾಡಿಕೊಳ್ಳುವುದಾಗಿ ತಿಳಿಸಿದೆ.

ಈ ಬಗ್ಗೆ ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆಪ್ ರಾಷ್ಟ್ರೀಯ ವಕ್ತಾರ ಗೋಪಾಲ್ ರೈ, ಚರ್ಚೆ ಇಲ್ಲಿಯವರೆಗೂ ಸಕಾರಾತ್ಮಕವಾಗಿದೆ. ಸ್ಥಾನ ಹಂಚಿಕೆಯ ಬಗ್ಗೆ ಎರಡು ಪಕ್ಷಗಳಲ್ಲಿ ಮಾತುಕತೆ ಶುರುವಾಗಿದೆ. ಕಾಂಗ್ರೆಸ್‌ನೊಂದಿಗೆ ದೆಹಲಿ, ಪಂಜಾಬ್, ಹರುಯಾಣ, ಗೋವಾ ಹಾಗೂ ಗುಜರಾತ್‌ನಲ್ಲಿ ಚುನಾವಣಾ ಮೈತ್ರಿ ಮಾಡಿಕೊಳ್ಳಲು ನಮ್ಮ ಪಕ್ಷ ಬದ್ಧವಾಗಿದೆ” ಎಂದು ತಿಳಿಸಿದರು.

ಸ್ಥಾನ ಹಂಚಿಕೆಯ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಗೋಪಾಲ್ ರೈ, ಈ ರಾಜ್ಯಗಳಲ್ಲಿ ನಿರ್ದಿಷ್ಟ ಸ್ಥಾನ ಹಂಚಿಕೆಯ ಬಗ್ಗೆ ಮಾತುಕತೆ ನಡೆದಿಲ್ಲ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಎಪಿ ದೆಹಲಿ ಹಾಗೂ ಪಂಜಾಬ್‌ಗಳಲ್ಲಿ ಅಧಿಕಾರದಲ್ಲಿದೆ. ಎರಡೂ ರಾಜ್ಯಗಳ ಕಾಂಗ್ರೆಸ್ ಘಟಕ ಎಎಪಿ ಜೊತೆಗಿನ ಮೈತ್ರಿಯನ್ನು ವಿರೋಧಿಸಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಡವರ ಭೂಮಿ ಮತ್ತು ನೈಸ್‌ ರಾಜಕಾರಣ

ಪಂಜಾಬ್‌ನಲ್ಲಿ ಕಾಂಗ್ರೆಸ್ ಹಾಗೂ ಎಎಪಿ ಲೋಕಸಬಾ ಚುನಾವಣಾ ಮೈತ್ರಿಯ ಬಗ್ಗೆ ಬಹಿರಂಗವಾಗಿ ವಾಗ್ದಾಳಿ ನಡೆಸಿವೆ.

“ನಾವು ಮೈತ್ರಿಯೊಂದಿಗೆ ಚುನಾವಣೆಯಲ್ಲಿ ಸ್ಪರ್ಧಿಸುತ್ತೇವೆ. ಮುಂದಿನ ಸಭೆಯಲ್ಲಿ ಸ್ಥಾನ ಹಂಚಿಕೆಯ ಬಗ್ಗೆ ಮಾತುಕತೆ ನಡೆಯಲಿದೆ. ನಾವು ಒಕ್ಕೂಟದಲ್ಲಿರುವುದರಿಂದ ಅಧಿಕೃತ ನಿಲುವನ್ನು ತೆಗೆದುಕೊಳ್ಳಬೇಕಿದೆ. ಅದಕ್ಕಾಗಿ ಎರಡೂ ಪಕ್ಷಗಳು ಸಿದ್ದತೆ ಮಾಡಿಕೊಂಡು ಚರ್ಚೆ ನಡೆಸುತ್ತವೆ” ಎಂದು ಗೋಪಾಲ್ ರೈ ತಿಳಿಸಿದ್ದಾರೆ.

ಐದು ರಾಜ್ಯಗಳಲ್ಲಿ ಲೋಕಸಭೆ ಚುನಾವಣೆಯ ಸ್ಥಾನ ಹಂಚಿಕೆ ನಿರೀಕ್ಷೆಯ ಬಗ್ಗೆ ಕಾಂಗ್ರೆಸ್ ಮತ್ತು ಎಎಪಿ ಸೋಮವಾರ ಚರ್ಚೆ ನಡೆಸಿದ್ದವು. ಇಂಡಿಯಾ ಒಕ್ಕೂಟದಲ್ಲಿ ಎರಡೂ ಪ್ರಮುಖ ಪಕ್ಷಗಳಾಗಿರುವುದರಿಂದ ಮುಂದಿನ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...