ಅಬಕಾರಿ ನೀತಿ ಹಗರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ನೀಡಲಾಗಿದ್ದ ಜಾಮೀನಿಗೆ ದೆಹಲಿ ಹೈಕೋರ್ಟ್ ತಡೆ ನೀಡಿರುವ ಆದೇಶಕ್ಕೆ ಅಸಮ್ಮತಿ ವ್ಯಕ್ತಪಡಿಸಿರುವ ಆಮ್ ಆದ್ಮಿ ಪಕ್ಷ (ಎಎಪಿ) ಈ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗುವುದಾಗಿ ಹೇಳಿದೆ. “ದೆಹಲಿ ಹೈಕೋರ್ಟ್ ಆದೇಶವನ್ನು ನಾವು ಒಪ್ಪುವುದಿಲ್ಲ. ಇದನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸುತ್ತೇವೆ” ಎಂದು ತಿಳಿಸಿದೆ.
“ಈ ಮದ್ಯದ ಹಗರಣ ಎಂದು ಕರೆಯಲಾಗುವ ಹಗರಣದಲ್ಲಿ ಕೇಜ್ರಿವಾಲ್ ವಿರುದ್ಧ ಯಾವುದೇ ಪುರಾವೆಗಳಿಲ್ಲ ಎಂದು ವಿಚಾರಣಾ ನ್ಯಾಯಾಲಯ ಸ್ಪಷ್ಟವಾಗಿ ಹೇಳಿದೆ. ವಿಚಾರಣಾ ನ್ಯಾಯಾಲಯದ ಆದೇಶವನ್ನೂ ನೋಡದೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಈ ತೀರ್ಪನ್ನು ನಾವು ಒಪ್ಪುವುದಿಲ್ಲ. ನಮ್ಮ ಕಾನೂನು ತಂಡ ಇದನ್ನು ಪರಿಶೀಲಿಸುತ್ತಿದೆ” ಎಂದು ಎಎಪಿ ವಕ್ತಾರ ಪ್ರಿಯಾಂಕಾ ಕಕ್ಕರ್ ಹೇಳಿದ್ದಾರೆ.
ಅಬಕಾರಿ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ವಿಚಾರಣಾ ನ್ಯಾಯಾಲಯವು ಜೂನ್ 20ರಂದು ಜಾಮೀನು ಮಂಜೂರು ಮಾಡಿದೆ. ಒಂದು ಲಕ್ಷ ರೂಪಾಯಿಯ ವೈಯಕ್ತಿಕ ಬಾಂಡ್‌ನಲ್ಲಿ ಅವರನ್ನು ಬಿಡುಗಡೆ ಮಾಡಲು ಆದೇಶಿಸಿತ್ತು.
ಇದನ್ನು ಓದಿದ್ದೀರಾ? ಅಬಕಾರಿ ನೀತಿ ಪ್ರಕರಣ | ತಿಹಾರ್ ಜೈಲಿನಿಂದಲೇ ಅರವಿಂದ್ ಕೇಜ್ರಿವಾಲ್‌ರನ್ನು ಬಂಧಿಸಿದ ಸಿಬಿಐ!
ಆದರೆ ಈ ಆದೇಶವನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯ (ಇಡಿ) ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದು, ತುರ್ತು ವಿಚಾರಣೆ ಮನವಿ ಮಾಡಿದೆ. ಇಡಿ ಅರ್ಜಿಯ ತುರ್ತು ವಿಚಾರಣೆ ನಡೆಸಿದ ಹೈಕೋರ್ಟ್ ವಿಚಾರಣಾ ನ್ಯಾಯಾಲಯದ ಆದೇಶಕ್ಕೆ ಮಧ್ಯಂತರ ತಡೆ ನೀಡಿದೆ.
ಈ ಆದೇಶವನ್ನು ಪ್ರಶ್ನಿಸಿ ಕೇಜ್ರಿವಾಲ್ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದು, ಈ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಇದು ‘ಅಸಹಜ’ ಎಂದು ಹೇಳಿದೆ. ಹಾಗೆಯೇ ಈ ವಿಷಯದ ಕುರಿತು ಹೈಕೋರ್ಟ್‌ನ ಆದೇಶಕ್ಕಾಗಿ ಕಾಯಲು ಬಯಸುವುದಾಗಿ ಹೇಳಿದೆ.
ಆದರೆ ಈ ಹಂತದಲ್ಲಿ ಯಾವುದೇ ಆದೇಶವನ್ನು ಪ್ರಕಟಿಸುವುದು ಸಮಸ್ಯೆಗೆ ಪೂರ್ವಾಗ್ರಹ ಪಡಿಸಿದಂತಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಇಂದು ಕೇಜ್ರಿವಾಲ್ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರಿಗೆ ತಿಳಿಸಿದೆ.
ಇದನ್ನು ಓದಿದ್ದೀರಾ? ಕೇಜ್ರಿವಾಲ್‌ಗಿಲ್ಲ ಜಾಮೀನು: ‘ವಿಚಾರಣಾ ನ್ಯಾಯಾಲಯ ಗಮನಕೊಟ್ಟಿಲ್ಲ’ ಎಂದ ದೆಹಲಿ ಹೈಕೋರ್ಟ್
ಮಂಗಳವಾರ ದೆಹಲಿ ಹೈಕೋರ್ಟ್ ತನ್ನ ಆದೇಶವನ್ನು ಪ್ರಕಟಿಸಿದ್ದು, ವಿಚಾರಣಾ ನ್ಯಾಯಾಲಯವು ಕೇಜ್ರಿವಾಲ್ ಅವರಿಗೆ ನೀಡಿದ ಜಾಮೀನು ಆದೇಶಕ್ಕೆ ತಡೆ ನೀಡಿದೆ. ಇದೀಗ ದೆಹಲಿ ಹೈಕೋರ್ಟ್ ಆದೇಶ ಪ್ರಶ್ನಿಸಿ ಮತ್ತೆ ಎಎಪಿ ಸುಪ್ರೀಂ ಕೋರ್ಟ್ ಮೊರೆ ಹೋಗಲಿದೆ.
High Court ने Trial Court का आदेश पढ़े बिना ही ऑर्डर पर Stay लगा दिया है।
जिस पर Supreme Court ने भी कहा था कि अगर High Court ने ग़लती की है तो वो भी वैसा ही नहीं करेंगे। हाईकोर्ट पूर्वाग्रह से ग्रसित है।
हमें हाईकोर्ट से ज़्यादा उम्मीद भी नहीं थी क्योंकि जो स्टे उन्होंने… pic.twitter.com/3maOX4aPwX
— AAP (@AamAadmiParty) June 25, 2024





