ಬಿಜೆಪಿಯಿಂದ ಖರೀದಿ ಹೇಳಿಕೆ: ಅತಿಶಿಗೆ ಚುನಾವಣಾ ಆಯೋಗದಿಂದ ನೋಟಿಸ್

Date:

ಬಿಜೆಪಿಗೆ ಸೇರ್ಪಡೆಯಾಗದಿದ್ದರೆ ತಮ್ಮನ್ನು ಬಂಧಿಸಲಾಗುತ್ತದೆ ಎಂದು ಬಿಜೆಪಿಯವರು ಬೆದರಿಸುತ್ತಿದ್ದಾರೆ ಎಂದು ಹೇಳಿಕೆ ನೀಡಿದ ದೆಹಲಿ ಸಚಿವೆ ಅತಿಶಿ ಗೆ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯ ಆರೋಪದಡಿ ಚುನಾವಣಾ ಆಯೋಗ ನೋಟಿಸ್ ನೀಡಿದೆ.

ಹೇಳಿಕೆಗೆ ಸಂಬಂಧಿಸಿದಂತೆ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ದಾಖಲಿಸಿತ್ತು. ಈ ಹಿನ್ನೆಲೆಯಲ್ಲಿ ಆಯೋಗವು ನೋಟಿಸ್‌ ನೀಡಿದ್ದು, ಶನಿವಾರ ಸಂಜೆ 5 ಗಂಟೆಯೊಳಗೆ ಪ್ರತಿಕ್ರಿಯೆ ನೀಡುವಂತೆ ಆದೇಶಿಸಿದೆ.

“ಇವರು ಮಂತ್ರಿಯಾಗಿರುವುದರಿಂದ ಸಾರ್ವಜನಿಕವಾಗಿ ಇವರು ಹೇಳಿದ ಮಾತನ್ನು ಮತದಾರರು ನಂಬುತ್ತಾರೆ. ಒಂದು ವೇಳೆ ಈ ಮಾತನ್ನು ಹೇಳಿದ್ದರೆ ದಾಖಲೆ ಆಧಾರದ ಮೇಲೆ ದೃಢಪಡಿಸಲು ಸಿದ್ಧರಿರಬೇಕು. ಹೇಳಿಕೆಗೆ ಸಂಬಂಧಿಸಿದಂತೆ ಏ.6, 2024ರಂದು ಸಂಜೆ 5 ಗಂಟೆಯೊಳಗೆ ಪ್ರತಿಕ್ರಿಯೆ ನೀಡಬೇಕು”  ಎಂದು ಚುನಾವಣಾ ಆಯೋಗ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಎಂದೋ ಕೈತಪ್ಪಿದ ‘ಕಚ್ಚತೀವು’ ಕಥೆ ಇರಲಿ; ಚೀನಾ ಅತಿಕ್ರಮಣ ಬಗ್ಗೆ ಮೋದಿ ಮಾತಾಡಲಿ

ನೋಟಿಸ್ ಸ್ವೀಕರಿಸಿದ ನಂತರ ಮಾತನಾಡಿದ ಅತಿಶಿ, ಬಿಜೆಪಿ ದೂರು ನೀಡಿದ ನಂತರ ಚುನಾವಣಾ ಆಯೋಗವು ಮೊದಲು ಮಾಧ್ಯಮಗಳಲ್ಲಿ ನೋಟಿಸ್ ಭಿತ್ತರಿಸುತ್ತದೆ. ನಂತರ ನಾನು ಪಡೆಯುತ್ತೇನೆ. ನನ್ನ ಪ್ರಶ್ನೆ ಏನಂದರೆ ಚುನಾವಣಾ ಆಯೋಗ ಬಿಜೆಪಿಯ ಅಂಗಸಂಸ್ಥೆ ಆಗಿದೆಯೆ” ಎಂದು ಆಯೋಗದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

“ನೀವು ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗಳನ್ನು ನಡೆಸದಿದ್ದರೆ, ಚುನಾವಣಾ ಆಯೋಗ ತಪ್ಪು ಮಾಡುತ್ತಿದೆ ಎಂದು ಇತಿಹಾಸ ನೆನಸಿಕೊಳ್ಳುತ್ತದೆ” ಎಂದು ಹೇಳಿದರು.

“ನನ್ನ ನಿಕಟವರ್ತಿಗಳ ಕೆಲವರ ಮೂಲಕ ಬಿಜೆಪಿ ನನ್ನನ್ನು ಸಂಪರ್ಕಿಸಿತ್ತು. ನೀವು ನಿಮ್ಮ ರಾಜಕೀಯ ವೃತ್ತಿಯನ್ನು ಉಳಿಸಿಕೊಳ್ಳಬೇಕಾದರೆ ಬಿಜೆಪಿಗೆ ಸೇರಬೇಕೆಂದು ಅವರು ಹೇಳಿದ್ದರು. ನಾನು ಬಿಜೆಪಿ ಸೇರದಿದ್ದರೆ ಇ.ಡಿ ಒಂದು ತಿಂಗಳೊಳಗೆ ಬಂಧಿಸುತ್ತದೆ ಎಂದು ಬೆದರಿಸಿದ್ದರು” ಎಂದು ಅತಿಶಿ ಮಂಗಳವಾರ (ಏ.2) ಆರೋಪಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...