ಮಾಜಿ ಸೇನಾ ಮುಖ್ಯಸ್ಥ ನರವಣೆ ಅವರ ಅಪ್ರಕಟಿತ ಪುಸ್ತಕದ ಭಾಗಗಳು ವೈರಲ್: ದೆಹಲಿ ಪೊಲೀಸರಿಂದ ಎಫ್‌ಐಆರ್‌ ದಾಖಲು​

Date:

ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂ ಎಂ ನರವಣೆ ಅವರ ಇನ್ನೂ ಪ್ರಕಟಗೊಳ್ಳದ ‘ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ’ (Four Stars of Destiny) ಎಂಬ ಆತ್ಮಚರಿತ್ರೆಯ ಕೆಲವು ಪುಟಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಈ ಸಂಬಂಧ ದೆಹಲಿ ಪೊಲೀಸರು ಸೋಮವಾರ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.

ಈ ಅಪ್ರಕಟಿತ ಕೃತಿಯು ಇದೀಗ ರಾಷ್ಟ್ರ ರಾಜಧಾನಿಯಲ್ಲಿ ತೀವ್ರ ರಾಜಕೀಯ ಸಂಚಲನವನ್ನು ಮೂಡಿಸಿದ್ದು, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಈ ಪುಸ್ತಕದ ಆಯ್ದ ಭಾಗಗಳನ್ನು ಉಲ್ಲೇಖಿಸಿ, 2020ರ ಲಡಾಖ್ ಸಂಘರ್ಷದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಜವಾಬ್ದಾರಿಯನ್ನು ನಿರ್ವಹಿಸುವಲ್ಲಿ ವಿಫಲರಾಗಿದ್ದಾರೆ ಎಂದು ಸದನದಲ್ಲಿ ಗಂಭೀರ ಆರೋಪ ಹೊರಿಸಿದ್ದಾರೆ.

​ಸಂಸತ್ತಿನ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, “ಲೋಕಸಭಾ ಸ್ಪೀಕರ್ ಮತ್ತು ರಕ್ಷಣಾ ಸಚಿವರು ಈ ಪುಸ್ತಕ ಅಸ್ತಿತ್ವದಲ್ಲೇ ಇಲ್ಲ ಎಂದು ಹೇಳುತ್ತಿದ್ದಾರೆ. ಆದರೆ, ಇದು ನರವಣೆ ಅವರ ಸ್ವಂತ ಅನುಭವದ ಬರಹವಾಗಿದ್ದು, ಲಡಾಖ್‌ನಲ್ಲಿ ನಡೆದ ನೈಜ ಸಂಗತಿಗಳನ್ನು ವಿವರಿಸುತ್ತದೆ,” ಎಂದು ಪ್ರತಿಪಾದಿಸಿದ್ದಾರೆ. ಅತ್ತ ಸರ್ಕಾರ ಮತ್ತು ವಿಪಕ್ಷಗಳ ನಡುವಿನ ಈ ಜಟಾಪಟಿಯ ನಡುವೆ, ನರವಣೆ ಅವರ ಪುಸ್ತಕದ ವಿಚಾರವಾಗಿ ಉಂಟಾದ ಗದ್ದಲದ ಹಿನ್ನೆಲೆಯಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಯಾಗುವ ಸಾಧ್ಯತೆಗಳೂ ದಟ್ಟವಾಗಿವೆ ಎಂದು ವರದಿಗಳು ತಿಳಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಸ್ಪೀಕರ್ ನಡೆನುಡಿ ತಟಸ್ಥವಾಗಿರಬೇಕೆಂಬ ಸಂವಿಧಾನದ ಆಶಯದ ಸಾರಾಸಗಟು ಉಲ್ಲಂಘನೆಯಿದು!

​ರಾಹುಲ್ ಗಾಂಧಿ ಅವರು ಅಪ್ರಕಟಿತ ಪುಸ್ತಕದ ವಿಷಯಗಳನ್ನು ಸದನದಲ್ಲಿ ಪ್ರಸ್ತಾಪಿಸಿರುವುದು, ನಿವೃತ್ತ ಸೇನಾ ಅಧಿಕಾರಿಗಳಿಗೆ ಅನ್ವಯಿಸುವ ಕಟ್ಟುನಿಟ್ಟಿನ ನಿಯಮಗಳತ್ತ ಬೆಳಕು ಚೆಲ್ಲಿದೆ. ಅಧಿಕೃತ ರಹಸ್ಯ ಕಾಯ್ದೆಯ (Official Secrets Act) ಅನ್ವಯ, ದೇಶದ ಭದ್ರತೆಗೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿಯನ್ನು ನಿರ್ವಹಿಸಿದ ಹಿರಿಯ ಅಧಿಕಾರಿಗಳು ನಿವೃತ್ತಿಯ ನಂತರವೂ ಅಂತಹ ಮಾಹಿತಿಗಳನ್ನು ಬಹಿರಂಗಪಡಿಸುವಂತಿಲ್ಲ. ವಾಣಿಜ್ಯ ಅಥವಾ ಖಾಸಗಿ ಉದ್ಯೋಗಗಳಿಗೆ ಒಂದು ವರ್ಷದ ‘ಕೂಲಿಂಗ್ ಆಫ್’ ಅವಧಿ ಇದ್ದರೂ, ರಹಸ್ಯ ವಿಷಯಗಳನ್ನೊಳಗೊಂಡ ಪುಸ್ತಕ ಪ್ರಕಟಣೆಗೆ ಸರ್ಕಾರದ ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿದೆ. ಈ ನಿಯಮಗಳನ್ನು ಉಲ್ಲಂಘಿಸಿದರೆ ಕಾನೂನು ಕ್ರಮ ಜರುಗಿಸುವುದರ ಜತೆಗೆ, ಸಿ.ಸಿ.ಎಸ್ (ಪಿಂಚಣಿ) ನಿಯಮಗಳ ಅನ್ವಯ ಸಂಬಂಧಿತ ಅಧಿಕಾರಿಯ ಪಿಂಚಣಿಯನ್ನು ಭಾಗಶಃ ಅಥವಾ ಪೂರ್ಣವಾಗಿ ತಡೆಹಿಡಿಯುವ ಅಧಿಕಾರ ಸರ್ಕಾರಕ್ಕಿದೆ.

​ಜನರಲ್ ನರವಣೆ ಅವರು ಡಿಸೆಂಬರ್ 31, 2019 ರಿಂದ ಏಪ್ರಿಲ್ 30, 2022 ರವರೆಗೆ ಸೇನಾ ಮುಖ್ಯಸ್ಥರಾಗಿದ್ದರು. 2020ರ ಮೇ-ಜೂನ್ ಅವಧಿಯಲ್ಲಿ ಪೂರ್ವ ಲಡಾಖ್ ಮತ್ತು ಸಿಕ್ಕಿಂ ಗಡಿಗಳಲ್ಲಿ (LAC) ಚೀನಾ ಜತೆಗಿನ ಸಂಘರ್ಷ ಹಾಗೂ ಗಲ್ವಾನ್ ಕಣಿವೆಯಲ್ಲಿ 20 ಭಾರತೀಯ ಯೋಧರ ಹುತಾತ್ಮತೆಗೆ ಸಾಕ್ಷಿಯಾದ ಸಂದರ್ಭದಲ್ಲಿ ಅವರೇ ಸೇನೆಯ ನೇತೃತ್ವ ವಹಿಸಿದ್ದರು. ಅವರ ಪುಸ್ತಕದಲ್ಲಿ ಅಗ್ನಿಪಥ್ ಯೋಜನೆ ಮತ್ತು ಚೀನಾ ಗಡಿ ತಂಟೆಯ ಸೂಕ್ಷ್ಮ ವಿವರಗಳಿರುವುದರಿಂದ ರಕ್ಷಣಾ ಸಚಿವಾಲಯದ ಅನುಮತಿ ಬಾಕಿ ಇದ್ದು, ಪುಸ್ತಕ ಇನ್ನೂ ಅಧಿಕೃತವಾಗಿ ಬಿಡುಗಡೆಯಾಗಿಲ್ಲ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...