ಕಾಂಗ್ರೆಸ್‌ಗೆ ಸೇರುತ್ತೇನೆಂದ BJP ಮುಖಂಡನ ಮನೆ ಮೇಲೆ ACB ದಾಳಿ

Date:

ಈ ಹಿಂದೆ ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ್ದ ಮಹೇಂದ್ರಜೀತ್ ಸಿಂಗ್‌ ಅವರು ಇದೀಗ ಮರಳಿ ಕಾಂಗ್ರೆಸ್‌ಗೆ ಸೇರುವುದಾಗಿ ಇಂಗಿತ ವ್ಯಕ್ತಪಡಿಸಿದ್ದಾರೆ. ಈ ಬೆನ್ನಲ್ಲೇ, ಅವರ ನಿವಾಸದ ಮೇಲೆ ರಾಜಸ್ಥಾನದ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ದಾಳಿ ನಡೆಸಿದೆ ಎಂದು ಕಾಂಗ್ರೆಸ್‌ ಮುಖ್ಯಸ್ಥ ಗೋವಿಂದ್‌ ಸಿಂಗ್‌ ದೋತಾಸ್ರಾ ಆರೋಪಿಸಿದ್ದಾರೆ.

ರಾಜಸ್ಥಾನದಲ್ಲಿ ಅಶೋಕ್ ಗೆಹ್ಲೋಟ್‌ ನೇತೃತ್ವದ ಕಾಂಗ್ರೆಸ್‌ ಸರ್ಕಾರದಲ್ಲಿ ಮಹೇಂದ್ರಜೀತ್ ಅವರು ಸಚಿವರಾಗಿದ್ದರು. 2023ರ ರಾಜಸ್ಥಾನ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಅವರು ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ್ದರು. ಇದೀಗ, ಅವರು ಬಿಜೆಪಿ ಸರ್ಕಾರದ ಅಡಿಯಲ್ಲಿ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲವೆಂದು ಹೇಳಿಕೊಂಡಿದ್ದರು. ಕಾಂಗ್ರೆಸ್‌ಗೆ ಮರಳುವುದಾಗಿ ಘೋಷಿಸಿದರು.

ಕಾಂಗ್ರೆಸ್‌ಗೆ ಸೇರುವ ಉದ್ದೇಶದಿಂದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸುಖಜೀಂದರ್ ಸಿಂಗ್ ರಾಂಡ್ವಾ, ಕಾಂಗ್ರೆಸ್ ಅಧ್ಯಕ್ಷ ಗೋವಿಂದ್ ಸಿಂಗ್ ದೋತಾಸ್ರಾ ಹಾಗೂ ವಿಪಕ್ಷದ ನಾಯಕ ಟಿಕಾರಾಂ ಜುಲ್ಲಿ ಅವರನ್ನು ಭೇಟಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬೆನ್ನಲ್ಲೇ, ಅವರ ನಿವಾಸದ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅವರ ಆಸ್ತಿ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ ಎಂದು ಗೋವಿಂದ್‌ ಸಿಂಗ್ ಆರೋಪಿಸಿದ್ದಾರೆ. ಬಿಜೆಪಿ ತನ್ನ ಮುಂಖಡರನ್ನೂ ಹಿಡಿತದಲ್ಲಿ ಇಟ್ಟುಕೊಳ್ಳಲು ತನಿಖಾ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ. ಇದು ಪ್ರಜಾಪ್ರಭುತ್ವಕ್ಕೆ ಅವಮಾನ ಎಂದು ಟೀಕಿಸಿದ್ದಾರೆ.

ಆದಾಗ್ಯೂ, ಎಸಿಬಿ ದಾಳಿಯ ಕುರಿತು ಪ್ರತಿಕ್ರಿಯಿಸಲು ಮಾಳವೀಯ ಅವರು ನಿರಾಕರಿಸಿದ್ದಾರೆ. ಎಸಿಬಿ ಅಧಿಕಾರಿಗಳು ಕೂಡ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ ಎಂದು ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...