ಭಾಗ್ಮತಿ ಎಕ್ಸ್‌ಪ್ರೆಸ್ – ಗೂಡ್ಸ್‌ ರೈಲು ನಡುವೆ ಅಪಘಾತವಾಗಿದ್ದು ಯಾಕೆ? ಅಧಿಕಾರಿಗಳು ಹೇಳಿದ್ದೇನು?

Date:

ಮೈಸೂರಿನಲ್ಲಿ ದರ್ಭಾಂಗ್‌ಗೆ ಹೊರಟಿದ್ದ ಭಾಗ್ಮತಿ ಎಕ್ಸ್‌ಪ್ರೆಸ್‌ ರೈಲು ಶುಕ್ರವಾರ ರಾತ್ರಿ ಚೆನ್ನೈ ಸಮೀಪದ ಕವರಾಯಿಪ್ಪೆಟ್ಟೈ ರೈಲು ನಿಲ್ದಾಣದಲ್ಲಿ ನಿಂತಿದ್ದ ಗೂಡ್ಸ್‌ ರೈಲಿಗೆ ಡಿಕ್ಕಿ ಹೊಡೆದಿದೆ. ದುರ್ಘಟನೆಯಲ್ಲಿ 19 ಪ್ರಯಾಣಿಕರು ಗಾಯಗೊಂಡಿದ್ದಾರೆ. ಭಾಗ್ಮತಿ ಎಕ್ಸ್‌ಪ್ರೆಸ್‌ನ 12 ಬೋಗಿಗಳು ಹಳಿತಪ್ಪಿವೆ.

ನಿಂತಿದ್ದ ಗೂಡ್ಸ್‌ ರೈಲಿಗೆ ವೇಗವಾಗಿ ಬಂದ ಭಾಗ್ಮತಿ ಎಕ್ಸ್‌ಪ್ರೆಸ್‌ ಡಿಕ್ಕಿ ಹೊಡೆದಿರುವುದು ರೈಲ್ವೇ ಇಲಾಖೆಯಲ್ಲಿನ ಸಮನ್ವಯದ ಕೊರತೆಯನ್ನು ಎತ್ತಿತೋರಿಸಿದೆ. ಆದಾಗ್ಯೂ, ಭಾಗ್ಮತಿ ಎಕ್ಸ್‌ಪ್ರೆಸ್‌ ಅಪಘಾತಕ್ಕೀಡಲು ಕಾರಣವೇನು ಎಂಬ ಬಗ್ಗೆ ಅಧಿಕಾರಿಗಳು ವಿವರಿಸಿದ್ದಾರೆ.

ಭಾಗ್ಮತಿ ಎಕ್ಸ್‌ಪ್ರೆಸ್‌ ರೈಲು ಕವರೈಪ್ಪೆಟ್ಟೈ ನಿಲ್ದಾಣದಲ್ಲಿ ನಿಲುಗಡೆ ಮಾಡಬೇಕಿರಲಿಲ್ಲ. ಆ ನಿಲ್ದಾಣದ ಮೂಲಕ ಹಾದುಹೋಗಬೇಕಿತ್ತು. ಚೆನ್ನೈನಿಂದ ಹೊರಟ ನಂತರ, ಲೋಕೋ ಪೈಲೆಟ್‌ ಎಕ್ಸ್‌ಪ್ರೆಸ್‌ನ ಸಿಗ್ನಲ್‌ಗಳನ್ನು ಸರಿಯಾಗಿಯೇ ಅನುಸರಿಸಿದ್ದಾರೆ. ಆದರೂ, ಮುಖ್ಯ ಮಾರ್ಗದಲ್ಲಿ ರೈಲು ಹೋಗುವ ಬದಲು, ತಪ್ಪಾಗಿ ಲೂಪ್ ಲೈನ್‌ಗೆ ಬಂದಿದೆ. ಪರಿಣಾಮ ನಿಂತಿದ್ದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ” ಎಂದು ದಕ್ಷಿಣ ರೈಲ್ವೇಯ ಜನರಲ್ ಮ್ಯಾನೇಜರ್ ಆರ್.ಎನ್.ಸಿಂಗ್ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕವರಪೆಟ್ಟೈ ನಿಲ್ದಾಣವನ್ನು ರೈಲು ಪ್ರವೇಶಿಸುವಾಗ ರೈಲು ಸಿಬ್ಬಂದಿಗೆ ಭಾರಿ ಜರ್ಕ್‌ ಆಗಿರುವ ಅನುಭವವಾಗಿದೆ. ನೀಡಲಾಗಿದ್ದ ಸಿಗ್ನಲ್ ಪ್ರಕಾರ 75 ಕಿಮೀ ವೇಗದಲ್ಲಿ ಚಲಿಸುತ್ತಿದ್ದ ರೈಲು ಮುಖ್ಯ ಮಾರ್ಗದಲ್ಲಿ (ಹಳಿ) ಹೋಗುವ ಬದಲು, ಲೂಪ್ ಲೈನ್‌ಗೆ ಬಂದಿದೆ” ಎಂದು ಹೇಳಿದ್ದಾರೆ.

ಅಪಘಾತದಿಂದಾಗಿ ರೈಲಿನಲ್ಲಿ ಸಿಕ್ಕಿಬಿದ್ದ ಪ್ರಯಾಣಿಕರಿಗಾಗಿ ವಿಶೇಷ ರೈಲನ್ನು ನಿಯೋಜಿಸಲಾಗಿದೆ. ಪ್ರಯಾಣಿಕರಿಗೆ ಆಹಾರ ಮತ್ತು ನೀರನ್ನು ಒದಗಿಸಲಾಗಿದೆ. ಪ್ರಯಾಣಿಕರಿಗೆ ಸಹಾಯ ಮಾಡಲು ರೈಲ್ವೇಯು ಸಹಾಯ ಕೇಂದ್ರವನ್ನು ತೆರೆಯಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...