ಬದ್ರಿನಾಥ ಹೆದ್ದಾರಿಯಲ್ಲಿ ಭೀಕರ ಅಪಘಾತ; 10 ಮಂದಿ ಸಾವು

Date:

ಉತ್ತರಾಖಂಡದ ಬದ್ರಿನಾಥ್-ಋಷಿಕೇಶ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಭೀಕರ ಅಪಘಾತ ನಡೆದಿದೆ. ಟೆಂಪೋ ಟ್ರಾವೆಲರ್ ಆಳವಾದ ಕಮರಿಗೆ ಬಿದ್ದು, 10 ಮಂದಿ ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದು, ಪೊಲೀಸರು ಮತ್ತು ಎಸ್‌ಡಿಆರ್‌ಎಫ್ ತಂಡ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ.

ರುದ್ರಪ್ರಯಾಗ ಜಿಲ್ಲೆಯಲ್ಲಿ ದುರ್ಘಟನೆ ನಡೆದಿದೆ. ಉತ್ತರ ಪ್ರದೇಶದ ನೋಯ್ಡಾದಿಂದ ಬರುತ್ತಿದ್ದ ಟೆಂಪೋದಲ್ಲಿ ಒಟ್ಟು 17 ಮಂದಿ ಪ್ರಯಾಣಿಸುತ್ತಿದ್ದರು. ಆ ಟೆಂಪೋ 150-200 ಮೀಟರ್ ಆಳದ ಕಮರಿಗೆ ಬಿದ್ದಿದೆ. ಘಟನೆಯಲ್ಲಿ 10 ಮಂದಿ ಸಾವನ್ನಪ್ಪಿದ್ದಾರೆ. ಮೃತದೇಹಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಒಬ್ಬರ ಸ್ಥಿತಿ ಗಂಭೀರವಾಗಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ” ಎಂದು ಐಜಿ ಕರಣ್ ಸಿಂಗ್ ನಾಗ್ನ್ಯಾಲ್ ತಿಳಿಸಿದ್ದಾರೆ.

ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಮೃತರಿಗೆ ಸಾಂತ್ವನ ಹೇಳಿದ್ದಾರೆ. “ರುದ್ರಪ್ರಯಾಗ ಜಿಲ್ಲೆಯಲ್ಲಿ ಟೆಂಪೋ ಟ್ರಾವೆಲರ್ ಅಪಘಾತದ ಸುದ್ದಿ ಕೇಳಿ ಬಹಳ ದುಃಖವಾಯಿತು. ಸ್ಥಳೀಯ ಆಡಳಿತ ಮತ್ತು SDRF ತಂಡಗಳು ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಹತ್ತಿರದ ವೈದ್ಯಕೀಯ ಕೇಂದ್ರಕ್ಕೆ ಕಳುಹಿಸಲಾಗಿದೆ. ಘಟನೆಯ ಕುರಿತು ತನಿಖೆ ನಡೆಸುವಂತೆ ಜಿಲ್ಲಾ ಮ್ಯಾಜಿಸ್ಟ್ರೇಟರಿಗೆ ಆದೇಶ ನೀಡಲಾಗಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...