ಸಂಸತ್‌ಗೆ ‘ಕಲರ್‌ ಸ್ಮೋಕ್’ ಹೇಗೆ ಕೊಂಡೊಯ್ಯಬೇಕೆಂದು ಮೊದಲೇ ತಿಳಿದಿದ್ದ ಆರೋಪಿಗಳು

Date:

ಸಂಸತ್‌ ಕಪಾಲದ ವೇಳೆ ಗದ್ದಲ ಸೃಷ್ಠಿಸಿದ ಮೈಸೂರಿನ ಆರೋಪಿ ಮನೋರಂಜನ್ ಡಿ ಸಂಸತ್‌ಗೆ ಹೇಗೆ ‘ಕಲರ್ ಸ್ಮೋಕ್’ಗಳನ್ನು ತೆಗೆದುಕೊಂಡು ಹೋಗಬೇಕು ಎಂಬುದನ್ನು ತಿಳಿಸಿದ್ದ. ಆತ ತಿಂಗಳುಗಳ ಮುಂಚೆಯೇ ಸಂಸತ್‌ನ ಭದ್ರತಾ ವ್ಯವಸ್ಥೆಯ ಬಗ್ಗೆ ತಿಳಿದುಕೊಂಡು ಬಂದಿದ್ದ. ಸದನದಲ್ಲಿ ಗದ್ದಲ ಸೃಷ್ಠಿಸಲು ತಮ್ಮ ಸ್ನೇಹಿತ ಸಾಗರ್‌ ಶರ್ಮಾ ಎಂಬಾತನನ್ನು ಬಳಸಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

ಪೊಲೀಸ್ ಮೂಲಗಳ ಪ್ರಕಾರ, ಹಳೆ ಸಂಸತ್ ಭವನದಲ್ಲಿ ನಡೆದಿದ್ದ ಬಜೆಟ್ ಅಧಿವೇಶನದ ವೇಳೆ ಮನೋರಂಜನ್ ಕಲಾಪಕ್ಕೆ ಹಾಜರಾಗಿದ್ದ. ಸಂಸತ್‌ನಲ್ಲಿ ಭದ್ರತಾ ತಪಾಸಣೆಗಳು ಹೇಗೆ ನಡೆಯುತ್ತವೆ ಎಂಬುದನ್ನು ತಿಳಿದುಕೊಳ್ಳಲು ಆತ ಹೋಗಿದ್ದ. ತಪಾಸಣೆಯಲ್ಲಿ ಭೇಟಿ ನೀಡುವವರ ಬೂಟುಗಳನ್ನು ಪರಿಶೀಲಿಸುವುದಿಲ್ಲ ಎಂಬುದನ್ನು ಆತ ಕಂಡುಕೊಂಡಿದ್ದ.

ಬುಧವಾರ ಮನೋರಂಜನ್ ಮತ್ತು ಸಾಗರ್ ಶರ್ಮಾ ತಮ್ಮ ಶೂಗಳೊಳಗೆ ಬಣ್ಣದ ಹೊಗೆ ಡಬ್ಬಿಗಳನ್ನು ಬಚ್ಚಿಟ್ಟುಕೊಂಡು ಹೋಗಿದ್ದಾರೆ. ನಂತರ, ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರ ಕಚೇರಿಯಿಂದ ಪಡೆದಿದ್ದ ಪಾಸ್‌ಗಳೊಂದಿಗೆ ಸಂದರ್ಶಕರ ಗ್ಯಾಲರಿಗೆ ತೆರಳಿದ್ದಾರೆ. ತಾವು ಸಿಕ್ಕಿಕೊಳ್ಳದಂತೆ ಭದ್ರತಾ ತಪಾಸಣೆಗಳನ್ನು ಪೂರೈಸಿದ್ದಾರೆ. ಕಲಾಪದ ವೇಳೆ ಸಂದರ್ಶಕರ ಗ್ಯಾಲರಿಯಿಂದ ಚೇಂಬರ್‌ಗೆ ಜಿಗಿದು, ಬಣ್ಣದ ಹೊಗೆ (‘ಕಲರ್ ಸ್ಮೋಕ್‘)ಯನ್ನು ಹರಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಕರಣದಲ್ಲಿ ಈ ಇಬ್ಬರ ಜೊತೆಗೆ ಸಂಸತ್ತಿನ ಹೊರಗೆ ಬಣ್ಣದ ಹೊಗೆ ಬಳಸಿ ಪ್ರತಿಭಟನೆ ನಡೆಸಿದ ನೀಲಂ ಆಜಾದ್, ಅಮೋಲ್ ಶಿಂಧೆ ಹಾಗೂ ಇತರ ಆರೋಪಿ ವಿಕ್ಕಿ ಶರ್ಮಾ ಮತ್ತು ಆತನ ಪತ್ನಿ ರಾಖಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಲಲಿತ್ ಝಾ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಹೇಳಲಾಗಿದೆ.

ಮಣಿಪುರದ ಹಿಂಸಾಚಾರ, ದೇಶದಲ್ಲಿನ ನಿರುದ್ಯೋಗ ಮತ್ತು ರೈತರ ಸಮಸ್ಯೆಗಳನ್ನು ಎತ್ತಿ ತೋರಿಸುವುದೇ ಈ ಕೃತ್ಯದ ಹಿಂದಿನ ಉದ್ದೇಶವಾಗಿತ್ತು ಎಂದು ಬಂಧಿತರು ಹೇಳಿದ್ದಾರೆ ಎಂದು ತಿಳಿದುಬಂದಿದೆ. ಆರೋಪಿಗಳ ವಿರುದ್ಧ ಭಯೋತ್ಪಾದನೆ – ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿ ಓದಿದ್ದೀರಾ?: ಮೈಸೂರು | ಪ್ರತಾಪ್ ಸಿಂಹ ಕಚೇರಿಗೆ ಬಿಗಿ ಭದ್ರತೆ; ಸಂಸದನ ಅಮಾನತಿಗೆ ಆಗ್ರಹ

ಸಂದರ್ಶಕರ ಪಾಸ್‌ಗಾಗಿ ಮನೋರಂಜನ್‌ ಅವರ ತಂದೆ ನನ್ನನ್ನು ಸಂಪರ್ಕಿಸಿದ್ದರು ಎಂದು ಸ್ಪೀಕರ್‌ಗೆ ನೀಡಿರುವ ಪ್ರತಿಕ್ರಿಯೆಯಲ್ಲಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ತಮ್ಮ ಕ್ಷೇತ್ರದ ನಿವಾಸಿಗಳಿಗೆ ಸಂದರ್ಶಕರ ಪಾಸ್‌ ನೀಡಲಾಗುತ್ತದೆ ಎಂಬುದನ್ನು ಅವರು ತಿಳಿಸಿದ್ದಾರೆ.

ಬುಧವಾರ ಲೋಕಸಭೆಯಲ್ಲಿ ನಡೆದ ಆಘಾತಕಾರಿ ದೃಶ್ಯಗಳು ಸಂಸತ್ತಿನ ಭದ್ರತೆಯಲ್ಲಿನ ಲೋಪಗಳು ಮತ್ತು ಲೋಪಗಳಿಂದಾಗುವ ಗಂಭೀರ ಪರಿಣಾಮಗಳನ್ನು ಬೆಳಕಿಗೆ ತಂದಿವೆ. ಪ್ರಾಸಂಗಿಕವಾಗಿ, ಈ ಹಿಂದೆ, 2001ರಲ್ಲಿ ಒಂಬತ್ತು ಜೀವಗಳನ್ನು ಬಲಿ ಪಡೆದ ಸಂಸತ್ ದಾಳಿಯ 22ನೇ ವಾರ್ಷಿಕೋತ್ಸವದ ದಿನವೇ ಈ ದಾಳಿಯೂ ನಡೆದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...