ಪೊಲೀಸ್ ಮೇಲೆ ಹಲ್ಲೆ ಆರೋಪ | ವೈ.ಎಸ್.ಶರ್ಮಿಳಾ ಬಂಧನ

Date:

  • ಜಗನ್‌ ಮೋಹನ್ ರೆಡ್ಡಿ ಅವರ ಸಹೋದರಿ ವೈ.ಎಸ್.ಶರ್ಮಿಳಾ
  • ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ 11 ಮಂದಿ ಬಂಧನ

ಪೊಲೀಸ್ ಅಧಿಕಾರಿಯೊಬ್ಬರ ಮೇಲೆ ವಾಗ್ವಾದ ನಡೆಸಿ ಹಲ್ಲೆ ಮಾಡಿದ ಆರೋಪದಲ್ಲಿ ಹೈದರಾಬಾದ್‌ನಲ್ಲಿ ಸೋಮವಾರ (ಏಪ್ರಿಲ್ 24) ವೈಎಸ್‌ಆರ್‌ ತೆಲಂಗಾಣ ಪಕ್ಷದ ಅಧ್ಯಕ್ಷೆ ವೈ.ಎಸ್‌ ಶರ್ಮಿಳಾ ಅವರನ್ನು ಬಂಧಿಸಲಾಗಿದೆ.

ಹೈದರಾಬಾದ್‌ನ ತಮ್ಮ ನಿವಾಸದ ಹೊರಗೆ ಶರ್ಮಿಳಾ ಅವರು ಸೋಮವಾರ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಪೊಲೀಸರೊಂದಿಗೆ ವಾಗ್ವಾದ ನಡೆಸಿದರಲ್ಲದೆ ವೈ.ಎಸ್‌ ಶರ್ಮಿಳಾ ಅವರು ಅಧಿಕಾರಿಯೊಬ್ಬರ ಕೆನ್ನೆಗೆ ಹೊಡೆದಿದ್ದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದೆ.

ಘಟನೆಯ ಬಗ್ಗೆ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದೇನೆ. ಅನುಮತಿ ಪಡೆಯದೆ ಶರ್ಮಿಳಾ ಅವರು ಪ್ರತಿಭಟನೆ ನಡೆಸಲು ತೆರಳುತ್ತಿದ್ದಾಗ ಪೊಲೀಸರು ಅವರನ್ನು ತಡೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅವರ ಮೇಲೆ ಶರ್ಮಿಳಾ ಅವರು ಹಲ್ಲೆ ಮಾಡುತ್ತಿರುವುದು ವಿಡಿಯೋದಲ್ಲಿ ಕಂಡು ಬಂದಿದೆ. ಶರ್ಮಿಳಾ ಅವರು ಯಾವುದೇ ಪೂರ್ವಾನುಮತಿ ಪಡೆಯದೆ ಎಸ್‌ಐಟಿ ಕಚೇರಿಗೆ ತೆರಳುತ್ತಿರುವುದು ತಿಳಿದು ಬಂದಿದೆ.

“ಎಸ್‌ಐಟಿ ಅಧಿಕಾರಿಗಳು ಶರ್ಮಿಳಾ ಅವರ ನಿವಾಸಕ್ಕೆ ತೆರಳಿದಾಗ ಈ ಘಟನೆ ನಡೆದಿದೆ. ಈ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು ಕ್ರಮ ಕೈಗೊಳ್ಳುತ್ತೇವೆ” ಎಂದು ಉಪ ಪೊಲೀಸ್‌ ಆಯುಕ್ತ (ಪಶ್ಚಿಮ ವಲಯ) ಜೋಯಲ್‌ ಡೇವಿಸ್‌ ಅವರು ತಿಳಿಸಿದ್ದಾರೆ.

ಪೊಲೀಸರ ಮೇಲೆ ವೈ.ಎಸ್ ಶರ್ಮಿಳಾ ಆರೋಪಿಸಿದ್ದಾರೆ.

“ತೆಲಂಗಾಣ ನಾಗರಿಕ ಸೇವಾ ಆಯೋಗ (ಟಿಎಸ್‌ಪಿಎಸ್‌) ಪ್ರಶ್ನೆ ಪತ್ರಿಕೆ ಸೋರಿಕೆ ಸಂಬಂಧ ಮನವಿ ಸಲ್ಲಿಸಲು ವಿಶೇಷ ತನಿಖಾ ತಂಡ (ಎಸ್‌ಐಟಿ) ಕಚೇರಿಗೆ ತೆರಳುತ್ತಿದ್ದಾಗ ನನ್ನನ್ನು ಅಕ್ರಮವಾಗಿ ಬಂಧಿಸಿ ಗೃಹಬಂಧನ ವಿಧಿಸಲಾಗಿದೆ” ಎಂದು ಆರೋಪಿಸಿದ್ದಾರೆ.

ಪ್ರಶ್ನೆ ಪತ್ರಿಕೆ ಸೋರಿಕೆ ಸಂಬಂಧ ಎಸ್‌ಐಟಿ ತನಿಖೆ ನಡೆಸುತ್ತಿದೆ. ತೆಲಂಗಾಣ ಸರ್ಕಾರ ಈ ಪರೀಕ್ಷೆ ನಡೆಸುತ್ತದೆ.

ಪೊಲೀಸ್‌ ಸಿಬ್ಬಂದಿಯನ್ನು ತಳ್ಳುತ್ತಿರುವುದು, ಪೊಲೀಸ್‌ ಅಧಿಕಾರಿಯ ಕೆನ್ನೆಗೆ ಹೊಡೆಯುತ್ತಿರುವ ವೈ.ಎಸ್‌ ಶರ್ಮಿಳಾ ಅವರ ದೃಶ್ಯಗಳು ಜಾಲತಾಣದಲ್ಲಿ ಹರಿದಾಡಿವೆ.

ಘಟನೆ ನಂತರ ಶರ್ಮಿಳಾ ಅವರನ್ನು ಅಲ್ಲಿಂದ ಕರೆದೊಯ್ಯಲಾಗಿದೆ. ಈ ಕುರಿತು ದೃಶ್ಯಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿವೆ.

ಈ ಸುದ್ದಿ ಓದಿದ್ದೀರಾ? ಲಲಿತ್‌ ಮೋದಿ ನ್ಯಾಯಾಂಗ ನಿಂದನೆ | ಬೇಷರತ್‌ ಕ್ಷಮೆ ನಂತರ ವಿಚಾರಣಾ ಪ್ರಕ್ರಿಯೆ ತೆರವುಗೊಳಿಸಿದ ‘ಸುಪ್ರೀಂ’

ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್‌ ಮೋಹನ್‌ ರೆಡ್ಡಿ ಅವರ ಸಹೋದರಿ ಈ ವೈ.ಎಸ್‌ ಶರ್ಮಿಳಾ ಆಗಿದ್ದಾರೆ. ಶರ್ಮಿಳಾ ಅವರನ್ನು ಹೈದರಾಬಾದ್‌ನ ಜುಬ್ಲೀ ಹಿಲ್ಸ್‌ ಪೊಲೀಸ್‌ ಠಾಣೆಗೆ ಕರೆದೊಯ್ದರು. ಈ ವೇಳೆ ತಮ್ಮ ಪುತ್ರಿಯನ್ನು ಭೇಟಿ ಮಾಡಲು ಶರ್ಮಿಳಾ ಅವರ ತಾಯಿ ವೈ.ಎಸ್‌ ವಿಜಯಮ್ಮ ಅಲ್ಲಿಗೆ ತೆರಳಿದ್ದರು.

ಪ್ರಕರಣ ಸಂಬಂಧ ಈಗಾಗಲೇ 11 ಮಂದಿಯನ್ನು ಬಂಧಿಸಲಾಗಿದೆ. ಪ್ರಕರಣ ಸಂಬಂಧ ಈಗಾಗಲೇ ಮೂರು ಸರ್ಕಾರಿ ಹುದ್ದೆಗಳ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರದಲ್ಲಿ ಸರ್ಕಾರದ ವಿರುದ್ಧ ತೆಲಂಗಾಣ ರಾಜ್ಯದಾದ್ಯಂತ ಶರ್ಮಿಳಾ ಅವರ ಪಕ್ಷ ವ್ಯಾಪಕ ಪ್ರತಿಭಟನೆ ನಡೆಸುತ್ತಿದೆ.

ಪ್ರಶ್ನೆ ಪತ್ರಿಕೆ ಸೋರಿಕೆಗೆ ಮುಖ್ಯಮಂತ್ರಿ ಕೆ.ಚಂದ್ರಶೇಖರ್‌ ರಾವ್‌ ಸರ್ಕಾರ ಕಾರಣ ಎಂದು ಆರೋಪಿಸಲಾಗಿದೆ. ಈ ಸಂಬಂಧ ರಾಜ್ಯ ಸರ್ಕಾರದ ವಿರುದ್ದ ಶರ್ಮಿಳಾ ಅವರ ಪಕ್ಷ ಸೇರಿದಂತೆ ಇತರ ಪ್ರತಿಪಕ್ಷಗಳು ರಾಜ್ಯದಲ್ಲಿ ಪ್ರತಿಭಟನೆ ನಡೆಸುತ್ತಿವೆ.

ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರದಲ್ಲಿ ಸರ್ಕಾರದ ವಿರುದ್ಧ ತೆಲಂಗಾಣ ರಾಜ್ಯದಾದ್ಯಂತ ಶರ್ಮಿಳಾ ಅವರ ಪಕ್ಷ ವ್ಯಾಪಕ ಪ್ರತಿಭಟನೆ ನಡೆಸುತ್ತಿದೆ. ಶರ್ಮಿಳಾ ಅವರು ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈ.ಎಸ್‌ ರಾಜಶೇಖರ ರೆಡ್ಡಿ ಅವರ ಪುತ್ರಿಯಾಗಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...