ವಿವಾಹೇತರ ಸಂಬಂಧ ಆರೋಪ; ಇಬ್ಬರು ಪುರುಷರು ಮತ್ತು ಓರ್ವ ಮಹಿಳೆಯನ್ನು ಕಂಬಕ್ಕೆ ಕಟ್ಟಿ ಅಮಾನುಷ ಹಲ್ಲೆ

Date:

ವಿವಾಹೇತರ ಸಂಬಂಧ ಹೊಂದಿದ್ದಾರೆ ಎಂಬ ಆರೋಪದ ಮೇಲೆ ಇಬ್ಬರು ಪುರುಷರು ಮತ್ತು ಓರ್ವ ಮಹಿಳೆಯನ್ನು ಗ್ರಾಮಸ್ಥರು ವಿದ್ಯುತ್‌ ಕಂಬಕ್ಕೆ ಕಟ್ಟಿ ಅಮಾನುಷವಾಗಿ ಹಲ್ಲೆ ನಡೆಸಿರುವ ಘಟನೆ ಒಡಿಶಾದಲ್ಲಿ ನಡೆದಿದೆ. ಆದರೆ, ಓರ್ವ ಪುರುಷ ಮತ್ತು ಮಹಿಳೆ ಸಹೋದರ-ಸಹೋದರಿಯಂತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಮಾಹಿತಿಯ ಪ್ರಕಾರ, ಒಡಿಶಾದ ಕಾಶಿಪುರ ಗ್ರಾಮದ ಮಹಿಳೆಯು ಮಯೂರ್ಭಂಜ್ ಜಿಲ್ಲೆಯ ಜಶಿಪುರ ವಾರದ ಮಾರುಕಟ್ಟೆಗೆ ಇಬ್ಬರು ಪುರುಷರೊಂದಿಗೆ ಬೈಕ್‌ನಲ್ಲಿ ತೆರಳಿದ್ದರು. ಅವರು ಗ್ರಾಮಕ್ಕೆ ಮರಳಿ ಬರುವಾಗ ಅವರನ್ನು ಕುಟುಂಬದ ಸದಸ್ಯರು ಗಮನಿಸಿದ್ದು, ಅವರನ್ನು ತಡೆದಿದ್ದಾರೆ.

ಈ ವೇಳೆ, ಕುಟುಂಬಸ್ಥರು ಮತ್ತು ಪುರುಷರ ನಡುವೆ ಗಲಾಟೆ ನಡೆದಿದೆ. ಸ್ಥಳಕ್ಕೆ ಧಾವಿಸಿದ ಗ್ರಾಮಸ್ಥರು ಮಹಿಳೆ ಮತ್ತು ಇಬ್ಬರು ಪುರುಷರನ್ನು ವಿದ್ಯುತ್‌ ಕಂಬಕ್ಕೆ ಕಟ್ಟಿ ಹಾಕಿದ್ದಾರೆ. ಮಹಿಳೆ ಮತ್ತು ಆ ಇಬ್ಬರು ಪುರುಷರು ವಿವಾಹೇತರ ಸಂಬಂಧ ಹೊಂದಿದ್ದಾರೆಂದು ಸರದಿಯಲ್ಲಿ ಥಳಿಸಿದ್ದಾರೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಡಿಯೋದಲ್ಲಿ ಅವರನ್ನು ಗ್ರಾಮಸ್ಥರು ಹೊಡೆಯುತ್ತಿರುವುದು, ಒದೆಯುತ್ತಿರುವುದು ಹಾಗೂ ಕೋಲುಗಳಿಂದ ಥಳಿಸುತ್ತಿರುವುದು ಕಂಡುಬಂದಿದೆ.

ಮಹಿಳೆ ಮಾರುಕಟ್ಟೆಗೆ ಹೋಗಿದ್ದ ಪುರುಷರಲ್ಲಿ ಒಬ್ಬ ಆಕೆಯ ಸಂಬಂಧಿಯೇ ಆಗಿದ್ದು, ಆಕೆಯ ಸಹೋದರನಂತೆ ಇದ್ದನು. ಆದರೆ, ಅವರಿಬ್ಬರ ನಡುವೆ ವಿವಾಹೇತರ ಸಂಬಂಧವಿತ್ತು ಎಂದು ಆಕೆಯ ಚಿಕ್ಕಪ್ಪ ಮತ್ತು ಇತರರು ಅನುಮಾನಿಸುತ್ತಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಹಿಳೆ ಮತ್ತು ಪುರುಷರನ್ನು ಪೊಲೀಸರು ರಕ್ಷಿಸಿ, ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿ ವಿವರಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...