ಜೈಲಿನಲ್ಲೇ ವಿಡಿಯೋ ‘ಲೈವ್’ ಮಾಡಿದ ಕೊಲೆ ಆರೋಪಿ; ಮೂವರು ಜೈಲು ವಾರ್ಡನ್‌ಗಳ ಅಮಾನತು

Date:

ಜೈಲಿನಲ್ಲಿರುವ ಕೊಲೆ ಆರೋಪಿಯೊಬ್ಬಮೊಬೈಲ್ ಫೋನ್ ಹೊಂದಿದ್ದು, ಸಾಮಾಜಿಕ ಜಾಲತಾಣದಲ್ಲಿ ಲೈವ್ ವೀಡಿಯೋ ಮಾಡಿರುವ ಘಟನೆ ಉತ್ತರ ಪ್ರದೇಶದ ಬರೇಲಿ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ. ಈ ಪ್ರಕರಣದಲ್ಲಿ ಜೈಲಿನ ಮೂವರು ವಾರ್ಡನ್‌ಗಳನ್ನು ಜೈಲು ಆಡಳಿತ ಅಮಾನತುಗೊಳಿಸಿದೆ.

ಬರೇಲಿ ಸೆಂಟ್ರಲ್ ಜೈಲಿನಲ್ಲಿರುವ ಕೊಲೆ ಆರೋಪಿ ಆಸಿಫ್ ಲೈವ್ ವಿಡಿಯೋ ಹೋಸ್ಟ್ ಮಾಡುತ್ತಿರುವ ವಿಡಿಯೋ ಗುರುವಾರ ಸಾಮಾಜಿಕ ಜಾಲತಾಣದಲ್ಲಿ ಕಾಣಿಸಿಕೊಂಡಿತ್ತು. ಬಳಿಕ, ವಿಡಿಯೋ ಮಾಡಿದ್ದರ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ.

ಎರಡು ನಿಮಿಷದ ವಿಡಿಯೋದಲ್ಲಿ ಆರೋಪಿ ಆಸಿಫ್, “ನಾನು ಸ್ವರ್ಗದಲ್ಲಿದ್ದೇನೆ. ಸ್ವರ್ಗವನ್ನು ಆನಂದಿಸುತ್ತಿದ್ದೇನೆ” ಎಂದು ಹೇಳುತ್ತಿರುವುದು ಕಂಡುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ನೋಡಿದ ಕೊಲೆಯಾಗಿದ್ದ ವ್ಯಕ್ತಿಯ ಸಹೋದರ ಗುರುವಾರ ಜಿಲ್ಲಾ ಮ್ಯಾಜಿಸ್ಟ್ರೇಟ್ ಉಮೇಶ್ ಪ್ರತಾಪ್ ಸಿಂಗ್ ಅವರನ್ನು ಭೇಟಿಯಾಗಿ ಲಿಖಿತ ದೂರು ನೀಡಿದ್ದಾರೆ.

“ಮೂರು ಜೈಲು ವಾರ್ಡನ್‌ಗಳಾದ ರವಿಶಂಕರ್ ದ್ವಿವೇದಿ, ಹನ್ಸ್ ಜೀವ್ ಶರ್ಮಾ ಮತ್ತು ಗೋಪಾಲ್ ಪಾಂಡೆ ಅವರನ್ನು ಶುಕ್ರವಾರ ಕರ್ತವ್ಯ ಲೋಪಕ್ಕಾಗಿ ಅಮಾನತುಗೊಳಿಸಲಾಗಿದೆ. ಉಪ ಜೈಲರ್ ಕಿಶನ್ ಸಿಂಗ್ ಬಲ್ದಿಯಾ ಅವರನ್ನು ಲಖನೌ ಜೈಲು ಪ್ರಧಾನ ಕಚೇರಿಗೆ ವರ್ಗಾಯಿಸಲಾಗಿದೆ” ಎಂದು ಕಾರಾಗೃಹಗಳ ಉಪ ಇನ್ಸ್‌ಪೆಕ್ಟರ್ ಜನರಲ್ (ಡಿಐಜಿ) ಕುಂತಲ್ ಕುಮಾರ್ ಹೇಳಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಜೈಲರ್‌ಗಳಾದ ವಿಜಯ್ ಕುಮಾರ್ ರೈ ಮತ್ತು ನೀರಜ್ ಕುಮಾರ್ ಅವರಿಂದ ಲಿಖಿತ ವಿವರಣೆಯನ್ನು ಕೇಳಲಾಗಿದೆ ಎಂದು ಅವರು ಹೇಳಿದ್ದಾರೆ.

2019ರ ಡಿಸೆಂಬರ್ 2ರಂದು ಶಹಜಹಾನ್‌ಪುರದ ಸದರ್ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹಾಡಹಗಲೇ ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯುಡಿ) ಗುತ್ತಿಗೆದಾರ ರಾಕೇಶ್ ಯಾದವ್ (34) ಅವರನ್ನು ಗುಂಡಿಕ್ಕಿ ಕೊಂದ ಪ್ರಕರಣದಲ್ಲಿ ಆಸಿಫ್ ಆರೋಪಿಯಾಗಿದ್ದಾನೆ.

ಮತ್ತೊಬ್ಬ ಆರೋಪಿ ರಾಹುಲ್ ಚೌಧರಿ ಕೂಡ ಯಾದವ್‌ನನ್ನು ಕೊಂದ ಆರೋಪ ಹೊತ್ತಿದ್ದು, ಸದ್ಯ ಇವರಿಬ್ಬರನ್ನು ಬರೇಲಿ ಸೆಂಟ್ರಲ್ ಜೈಲಿನಲ್ಲಿ ಇರಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...