ಪ್ರೀತಿ ನಿರಾಕರಿಸಿದ್ದಕ್ಕೆ ಮದುವೆ ಹಿಂದಿನ ದಿನ ಯುವತಿ ಮೇಲೆ ಆ್ಯಸಿಡ್ ದಾಳಿ

Date:

ಪ್ರೀತಿಯನ್ನು ನಿರಾಕರಿಸಿದ್ದ ಯುವತಿ ಮೇಲೆ ಆಕೆಯ ಮದುವೆಯ ಹಿಂದಿನ ದಿನ ವಿಕೃತ ಯುವಕನೊಬ್ಬ ಆ್ಯಸಿಡ್ ದಾಳಿ ಮಾಡಿರುವ ಘಟನೆ ಉತ್ತರ ಪ್ರದೇಶದ ಮೌ ಜಿಲ್ಲೆಯಲ್ಲಿ ನಡೆದಿದೆ.

ಮೌ ಪ್ರದೇಶದ ನಿವಾಸಿ ರೀಮಾ ಅವರ ಮೇಲೆ ಆರೋಪಿ ರಾಮ್ ಜನಮ್ ಸಿಂಗ್ ಪಟೇಲ್ ಎಂಬಾತ ಆ್ಯಸಿಡ್ ಎರಚಿದ್ದಾನೆ. ‘ನೀನು ನನ್ನವಳಾಗದಿದ್ದರೆ, ಬೇರೆಯವರನ್ನೂ ಮದುವೆಯಾಗಬಾರದು’ ಎಂದು ಹೇಳಿ, ಆ್ಯಸಿಡ್ ದಾಳಿ ಮಾಡಿದ್ದಾನೆ ಎಂದು ವರದಿಯಾಗಿದೆ.

ಯುವತಿ ರೀಮಾ ಅವರಿಗೆ ವಿವಾಹ ನಿಶ್ಚಯವಾಗಿತ್ತು. ಮದುವೆ ತಯಾರಿಗಳು ನಡೆಯುತ್ತಿದ್ದವು. ಮದುವೆಯ ಹಿಂದಿನ ದಿನ ರೀಮಾ ಅವರು ಬ್ಯಾಂಕ್‌ನಲ್ಲಿ ಹಣ ‘ವಿತ್‌ಡ್ರಾ’ ಮಾಡಿಕೊಂಡು ಮನೆಗೆ ಮರಳುತ್ತಿದ್ದಾಗ ತನ್ನ ಸ್ನೇಹಿತನೊಂದಿಗೆ ಬೈಕ್‌ನಲ್ಲಿ ಬಂದ ಆರೋಪಿ, ಆಕೆಯ ಮೇಲೆ ಆ್ಯಸಿಡ್ ಎರಚಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನೆಯಿಂದಾಗಿ ಯುವತಿಯ ಮುಖ, ಭುಜ, ಕುತ್ತಿಗೆ ಹಾಗೂ ದೇಹದ ಮೇಲ್ಭಾಗ ತೀವ್ರವಾಗಿ ಸುಟ್ಟುಹೋಗಿದೆ. ಆಕೆಯನ್ನು ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಪಟೇಲ್ ಮತ್ತು ಆತನ ಸಹಚರರನ್ನು ಬಂಧಿಸಲಾಗಿದೆ. ಕೃತ್ಯಕ್ಕೆ ಬಳಸಿದ್ದ ಬೈಕ್ಅನ್ನು ವಶಕ್ಕೆ ಪಡೆಯಲಾಗಿದೆ. ಆಕೆಯ ಮದುವೆ ರದ್ದಾಗುವಂತೆ ಮಾಡವ ಉದ್ದೇಶದಿಂದ ಆರೋಪಿ ದಾಳಿ ನಡೆಸಿದ್ದಾಗಿ ಹೇಳಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಳೆದ ತಿಂಗಳು, ಉತ್ತರ ಪ್ರದೇಶದ ಶಹಜಹಾನ್‌ಪುರ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿ ವಿವಾಹೇತರ ಸಂಬಂಧ ಹೊಂದಿದ್ದಾರೆ ಎಂಬ ಅನುಮಾನದ ಮೇಲೆ ತನ್ನ ಪತ್ನಿ ಮತ್ತು ಇಬ್ಬರು ಹೆಣ್ಣುಮಕ್ಕಳ ಮೇಲೆ ಆ್ಯಸಿಡ್ ಎರಚಿದ್ದ ಪ್ರಕರಣ ಬೆಳಕಿಗೆ ಬಂದಿತ್ತು. ಇದೀಗ, ಮತ್ತೊಂದು ಆ್ಯಸಿಡ್ ದಾಳಿ ಪ್ರಕರಣ ನಡೆದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...