24 ವರ್ಷ ಹಳೆಯ ಮಾನನಷ್ಟ ಪ್ರಕರಣ: ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್ ದೋಷಿ

Date:

ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್ ವಿರುದ್ಧ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ದಾಖಲಿಸಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ನ್ಯಾಯಾಲಯ ಶುಕ್ರವಾರ ಮೇಧಾ ಪಾಟ್ಕರ್ ಅವರನ್ನು ದೋಷಿ ಎಂದು ತೀರ್ಪು ನೀಡಿದೆ.

ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ರಾಘವ್ ಶರ್ಮಾ ಅವರು ಪಾಟ್ಕರ್ ಅವರನ್ನು ಕ್ರಿಮಿನಲ್ ಮಾನನಷ್ಟ ಅಪರಾಧಿ ಎಂದು ಘೋಷಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಾಟ್ಕರ್ ಮತ್ತು ನರ್ಮದಾ ಬಚಾವೋ ಆಂದೋಲನ (ಎನ್‌ಬಿಎ) ವಿರುದ್ಧ ಜಾಹೀರಾತುಗಳನ್ನು ಪ್ರಕಟಿಸಿದ ಕಾರಣ ಪಾಟ್ಕರ್ ಮತ್ತು ಸಕ್ಸೇನಾ 2000ರಿಂದ ಕಾನೂನು ಹೋರಾಟದಲ್ಲಿ ತೊಡಗಿದ್ದಾರೆ. ಸಕ್ಸೇನಾ ಆ ಅಹಮದಾಬಾದ್ ಮೂಲದ ಎನ್‌ಜಿಒ ನ್ಯಾಷನಲ್ ಕೌನ್ಸಿಲ್ ಫಾರ್ ಸಿವಿಲ್ ಲಿಬರ್ಟೀಸ್‌ನ ಮುಖ್ಯಸ್ಥರಾಗಿದ್ದರು.

ಇದನ್ನು ಓದಿದ್ದೀರಾ?  ಗಾಯ ಗಾರುಡಿ | ದೊಡ್ಡಬಳ್ಳಾಪುರದ ಟೌನ್‍ಹಾಲ್‌ನಲ್ಲಿ ಮೇಧಾ ಪಾಟ್ಕರ್ ಎಬ್ಬಿಸಿದ ‘ಲಗಾನ್’ ಹಾಡಿನ ಹವಾ

ಟಿವಿ ಚಾನೆಲ್‌ನಲ್ಲಿ ತನ್ನ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ ಮಾನಹಾನಿ ಮಾಡಿದ್ದಾರೆ ಎಂದು ಸಕ್ಸೇನಾ ಪಾಟ್ಕರ್ ವಿರುದ್ಧ ಎರಡು ಪ್ರಕರಣಗಳನ್ನು ದಾಖಲಿಸಿದ್ದರು. ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಸಕ್ಸೇನಾ ವಿರುದ್ಧದ ಪಾಟ್ಕರ್ ಅವರ ಹೇಳಿಕೆಗಳು “ಮಾನಹಾನಿಕರ ಮಾತ್ರವಲ್ಲದೆ ನಕಾರಾತ್ಮಕ ಗ್ರಹಿಕೆಗಳನ್ನು ಪ್ರಚೋದಿಸುತ್ತದೆ” ಎಂದು ಹೇಳಿದೆ.

“ಆರೋಪಿ ಮೇಧಾ ಪಾಟ್ಕರ್ ಅವರು ದೂರುದಾರರ ಪ್ರತಿಷ್ಠೆಗೆ ಹಾನಿಯುಂಟುಮಾಡುವ ಉದ್ದೇಶ ಮತ್ತು ಅರಿವಿನಿಂದ ಪ್ರಚೋದಾನಾತ್ಮಕ ಹೇಳಿಕೆ ನೀಡಿದ್ದಾರೆ ಎಂಬುದು ಅನುಮಾನಾಸ್ಪದವಾಗಿ ಸಾಬೀತಾಗಿದೆ” ಎಂದು ನ್ಯಾಯಾಲಯ ತಿಳಿಸಿದೆ.

ಇದನ್ನು ಓದಿದ್ದೀರಾ?  ಹೊಸ ಓದು | ನಡುಬಗ್ಗಿಸದ ಎದೆಯ ದನಿ: ಶೂದ್ರ ಯುವಕರು ಓದಬೇಕಾದ ಪುಸ್ತಕ

ಸಕ್ಸೇನಾ “ಗುಜರಾತ್‌ನ ಜನರನ್ನು ಮತ್ತು ಅವರ ಸಂಪನ್ಮೂಲಗಳನ್ನು ವಿದೇಶಿ ಹಿತಾಸಕ್ತಿಗಳಿಗೆ ಅಡಮಾನವಿಟ್ಟಿದ್ದಾರೆ” ಎಂದು ಪಾಟ್ಕರ್ ಆರೋಪ ಮಾಡಿದ್ದರು.

“ಆರೋಪಿಯು (ಪಾಟ್ಕರ್) ಈ ಹೇಳಿಕೆಯನ್ನು ಸಾಬೀತುಪಡಿಸಲು ಯಾವುದೇ ಪುರಾವೆಗಳನ್ನು ಒದಗಿಸಲು ಸಾಧ್ಯವಾಗಿಲ್ಲ. ಆದ್ದರಿಂದಾಗಿ ಮೇಧಾ ಪಾಟ್ಕರ್ ಅವರು ಐಪಿಸಿಯ ಸೆಕ್ಷನ್ 500ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧವನ್ನು ಮಾಡಿದ್ದಾರೆ. ಈ ಮೂಲಕ ಅವರಿಗೆ ಶಿಕ್ಷೆ ವಿಧಿಸಲಾಗಿದೆ” ಎಂದು ನ್ಯಾಯಾಲಯ ಹೇಳಿದೆ. ಪಾಟ್ಕರ್ ಎರಡು ವರ್ಷಗಳ ಜೈಲು ಶಿಕ್ಷೆ ಅಥವಾ ದಂಡ ಅಥವಾ ಎರಡೂ ಶಿಕ್ಷೆಯನ್ನು ಪಡೆಯಬಹುದು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...