ದೆಹಲಿ ಪೊಲೀಸರಿಂದ ಬೆಂಗಳೂರಿನಲ್ಲಿ ಅಕ್ರಮ ಚಟುವಟಿಕೆ : ದೂರು ದಾಖಲು

Date:

ಬೆಂಗಳೂರು ನಗರದಲ್ಲಿ ಅಕ್ರಮ ಚಟುವಟಿಕೆ ನಡೆಸಿರುವ ದೆಹಲಿ ಪೊಲೀಸರ ವಿರುದ್ಧ ಬೆಂಗಳೂರು ನಗರ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.

ಮಾನವ ಹಕ್ಕುಗಳ ಹೋರಾಟಗಾರ ಮತ್ತು ಅಸೋಸಿಯೇಷನ್ ಫಾರ್ ಪ್ರೊಟೆಕ್ಷನ್ ಆಫ್ ಸಿವಿಲ್ ರೈಟ್ಸ್‌ (ಎಪಿಸಿಆರ್) ಸಂಘಟನೆಯ ರಾಷ್ಟ್ರೀಯ ಕಾರ್ಯದರ್ಶಿ ನದೀಮ್ ಖಾನ್ ಅವರನ್ನು ದೆಹಲಿ ಪೊಲೀಸರು ಬೆಂಗಳೂರಿಗೆ ಆಗಮಿಸಿ, ಅಕ್ರಮವಾಗಿ ಬಂಧಿಸಲು ಯತ್ನಿಸಿರುವ ಘಟನೆ ನ.30ರ ಸಂಜೆ ನಡೆದಿತ್ತು.

ಈ ಬೆಳವಣಿಗೆಗೆ ಸಂಬಂಧಿಸಿ ದೆಹಲಿ ಪೊಲೀಸರ ವಿರುದ್ಧ ನದೀಮ್ ಖಾನ್ ಕುಟುಂಬಸ್ಥರು ಬೆಂಗಳೂರು ಪೊಲೀಸರಿಗೆ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡಿರುವ ಸಂಪಿಗೆಹಳ್ಳಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್, ಮುಂದಿನ ಕ್ರಮ ಕೈಗೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬೆಳವಣಿಗೆಯ ಬಗ್ಗೆ ಬೆಂಗಳೂರಿನ ಸಂಪಿಗೆಹಳ್ಳಿ ಪೊಲೀಸರಿಗೆ ದೂರು ನೀಡಿರುವ ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಸಹೋದರ, “ಶನಿವಾರ ಸಂಜೆ 5ರ ಸುಮಾರಿಗೆ ದೆಹಲಿಯ ಶಾಹೀನ್ ಬಾಗ್ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ (ಎಸ್ಎಚ್ಒ) ಎಂದು ಹೇಳಿಕೊಂಡು ಬಂದ ನಾಲ್ವರು ಅಧಿಕಾರಿಗಳು ಅಕ್ರಮವಾಗಿ ನುಗ್ಗಿದ್ದಾರೆ. ವಾರಂಟ್ ಅಥವಾ ಪೂರ್ವ ಸೂಚನೆಯಿಲ್ಲದೆ ಬಂದಿದ್ದಲ್ಲದೇ, ನಮ್ಮನ್ನು ಬೆದರಿಸಿದ್ದಾರೆ. ಯಾಕೆ ಬಂದಿದ್ದೀರಿ ಎಂದು ಪ್ರಶ್ನಿಸಿದ್ದಕ್ಕೆ ನದೀಮ್ ಖಾನ್ ಅವರ ವಿರುದ್ಧ ನಮ್ಮ ಠಾಣೆಯಲ್ಲಿ ಶನಿವಾರ ಮಧ್ಯಾಹ್ನ 12:48 ಕ್ಕೆ ಎಫ್‌ಐಆರ್ ದಾಖಲಿಸಿಕೊಂಡಿದ್ದೇವೆ. ಅವರನ್ನು ಹುಡುಕಿಕೊಂಡು ಬಂದಿದ್ದೇವೆ ಎಂದು ತಿಳಿಸಿದ್ದರು. ದಾಖಲೆ ಕೇಳಿದಾಗ ಆನ್‌ಲೈನ್ ಪ್ರತಿಯನ್ನು ತೋರಿಸಿದ್ದಾರೆ” ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

sampigehalli Police nadeem khan

“ಮನೆಗೆ ನುಗ್ಗಿದ ವೇಳೆ ಯಾವುದೇ ಸಮವಸ್ತ್ರದಲ್ಲಿ ಇರಲಿಲ್ಲ. 8 ಗಂಟೆ ಸುಮಾರಿಗೆ, ಬೆಂಗಳೂರಿನ ಸಂಪಿಗೆಹಳ್ಳಿ ಪೊಲೀಸ್ ಠಾಣೆಯ 3 ಪೊಲೀಸ್ ಅಧಿಕಾರಿಗಳು ಕೂಡ ನನ್ನ ನಿವಾಸಕ್ಕೆ ಬಂದರು. ದೆಹಲಿ ಪೊಲೀಸರು ಸ್ಥಳೀಯ ಪೊಲೀಸರಿಗೆ ಸೂಚನೆ ನೀಡಿಲ್ಲ ಎಂಬುದು ನಂತರ ಸ್ಪಷ್ಟವಾಯಿತು. ರಾತ್ರಿ 9 ಗಂಟೆಯವರೆಗೆ ಮನೆಯ ಮೊದಲ ಮಹಡಿಯ ಹಾಲ್‌ನಲ್ಲಿ ಕುಳಿತು ತನಿಖೆಗೆ ನದೀಮ್‌ನನ್ನು ತಮ್ಮೊಂದಿಗೆ ದೆಹಲಿಗೆ ಬರುವಂತೆ ಒತ್ತಾಯಿಸಿದ್ದರು. ಯಾವುದೇ ಸಮನ್ಸ್, ನೋಟಿಸ್, ವಾರಂಟ್ ಇಲ್ಲದಿದ್ದರೂ, ಎಸ್‌ಎಚ್‌ಒ ಮತ್ತು ಇತರ ಪೊಲೀಸ್ ಅಧಿಕಾರಿಗಳು ಮನೆಯಲ್ಲೇ ಐದು ಗಂಟೆಗಳ ಕಾಲ ನಮ್ಮನ್ನು ಬೆದರಿಸಿದ್ದಾರೆ” ಎಂದು ತಿಳಿಸಿದ್ದಾರೆ.

ಎಫ್ಐಆರ್‌ನಲ್ಲಿ ದಾಖಲಿಸಿಕೊಂಡಿರುವ ಎಲ್ಲ ಸೆಕ್ಷನ್‌ನ ಅಪರಾಧಗಳಿಗೆ ಮೂರು ವರ್ಷಗಳಿಗಿಂತ ಕಡಿಮೆಯಿರುವ ಶಿಕ್ಷೆಗಳಾಗಿದೆ. ಆದ್ದರಿಂದ ಇದಕ್ಕೆಲ್ಲ ನೋಟಿಸ್ ನೀಡಬೇಕಿದೆ. ಅದ್ಯಾವುದನ್ನೂ ದೆಹಲಿ ಪೊಲೀಸರು ಪಾಲಿಸಿಲ್ಲ. ಈ ಎಫ್‌ಐಆರ್ ದಾಖಲಾಗುವುದಕ್ಕೂ ಮೊದಲು, ನವೆಂಬರ್ 29ರ ತಡರಾತ್ರಿ ದೆಹಲಿಯಲ್ಲಿರುವ ಎಪಿಸಿಆರ್ ಕಚೇರಿಗೆ 20 ಪೊಲೀಸ್ ಅಧಿಕಾರಿಗಳು ನುಗ್ಗಲು ಪ್ರಯತ್ನಿಸಿದ್ದಾರೆ. ನದೀಮ್ ಮತ್ತು ನನಗೆ ಪೊಲೀಸರು ಮಾನಸಿಕ ಹಿಂಸೆ ನೀಡಿದ್ದು, ಬೆದರಿಕೆ ಹಾಕಿದ್ದಾರೆ. ಕ್ರಿಮಿನಲ್ ಬೆದರಿಕೆ, ಅತಿಕ್ರಮಣ, ಅಧಿಕಾರದ ದುರುಪಯೋಗ ನಡೆಸಿದ ದೆಹಲಿ ಪೊಲೀಸರ ವಿರುದ್ಧ ಎಫ್‌ಐಆರ್ ದಾಖಲಿಸಬೇಕು. ಜೀವಕ್ಕೆ ಅಪಾಯವಾಗದಂತೆ ಮತ್ತು ಕಾನೂನು ಪ್ರಕ್ರಿಯೆಯ ದುರುಪಯೋಗವಾಗದಂತೆ ನಮ್ಮ ಕುಟುಂಬಕ್ಕೆ ರಕ್ಷಣೆ ಒದಗಿಸಿ ಎಂದು ಬೆಂಗಳೂರಿನ ಸಂಪಿಗೆಹಳ್ಳಿ ಪೊಲೀಸರಿಗೆ ನೀಡಿರುವ ದೂರಿನಲ್ಲಿ ನದೀಮ್ ಖಾನ್ ಕುಟುಂಬಸ್ಥರು ಆಗ್ರಹಿಸಿದ್ದಾರೆ.

ಇದನ್ನು ಓದಿದ್ದೀರಾ? ಎಫ್‌ಐಆರ್ ದಾಖಲಾದ ಕೆಲವೇ ಗಂಟೆಗಳಲ್ಲಿ ಬೆಂಗಳೂರಿನಲ್ಲಿ ಪ್ರತ್ಯಕ್ಷವಾದ ದೆಹಲಿ ಪೊಲೀಸರು: ನದೀಮ್ ಖಾನ್ ಅಕ್ರಮ ಬಂಧನಕ್ಕೆ ಯತ್ನ

ಈ ಬೆಳವಣಿಗೆಯ ಬಗ್ಗೆ ಈ ದಿನ ಡಾಟ್ ಕಾಮ್‌ ಜೊತೆಗೆ ಮಾತನಾಡಿರುವ ಎಪಿಸಿಆರ್ ಸಂಘಟನೆಯ ಕರ್ನಾಟಕ ರಾಜ್ಯ ಕಾರ್ಯದರ್ಶಿ ಅಡ್ವೊಕೇಟ್ ನಿಯಾಝ್ ಅಹ್ಮದ್, “ದೆಹಲಿ ಪೊಲೀಸರು ಈಗ ದಾಖಲಿಸಿಕೊಂಡಿರುವ ಎಫ್‌ಐಆರ್‌ನಲ್ಲಿ ಆರೋಪಿಗಳ ಬಂಧನಕ್ಕೂ ಮೊದಲು ನೋಟಿಸ್ ನೀಡಬೇಕಿದೆ. ಅಲ್ಲದೇ, ಈ ಬಗ್ಗೆ ಸುಪ್ರೀಂ ಕೋರ್ಟ್‌ನ ಮಾರ್ಗಸೂಚಿ ಕೂಡ ಇದೆ. ಇದು ಯಾವುದನ್ನೂ ಅನುಸರಿಸದೆ, ಅಕ್ರಮ ಬಂಧನಕ್ಕೆ ಯತ್ನಿಸಿದ್ದಾರೆ. ಮನೆಗೆ ಬಂದವರ ಬಳಿಯಲ್ಲಿ ಐಡಿ ಕಾರ್ಡ್‌ ಕೂಡ ಇರಲಿಲ್ಲ. ಅಲ್ಲದೇ, ಯಾವುದೇ ಮಾಹಿತಿ ನೀಡದೆ ಮನೆಗೆ ನುಗ್ಗಿದ್ದಾರೆ. ಸ್ಥಳೀಯ ಪೊಲೀಸರಿಗೂ ಮಾಹಿತಿ ನೀಡಿರಲಿಲ್ಲ. ಅತಿಕ್ರಮಣ ಪ್ರವೇಶ ಮಾಡಿ, ಅಕ್ರಮ ಚಟುವಟಿಕೆ ನಡೆಸಿರುವ ದೆಹಲಿ ಪೊಲೀಸರ ಮೇಲೆ ಎಫ್‌ಐಆರ್ ದಾಖಲಿಸುವಂತೆ ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ನದೀಮ್ ಖಾನ್ ಕುಟುಂಬಸ್ಥರು ದೂರು ನೀಡಿದ್ದಾರೆ. ಬೆಂಗಳೂರು ದೂರು ದಾಖಲಿಸಿಕೊಂಡಿದ್ದಾರೆ” ಎಂದು ತಿಳಿಸಿದರು.

“ನದೀಮ್ ಖಾನ್ ‘ದ್ವೇಷದ ವಿರುದ್ಧ ಒಂದಾದ ನಾವೆಲ್ಲರೂ’ ಎಂಬ ಸಂಘಟನೆಯ ಪದಾಧಿಕಾರಿಯಾಗಿದ್ದು, ಭಾರತ್ ಜೋಡೋ‌ ಅಭಿಯಾನದ ರಾಷ್ಟ್ರೀಯ ಪದಾಧಿಕಾರಿಯೂ ಆಗಿದ್ದಾರೆ. ಅವರನ್ನು ದುರುದ್ದೇಶಪೂರ್ವಕವಾಗಿ ಪ್ರಕರಣಗಳಲ್ಲಿ ಸಿಲುಕಿಸಲು ಯತ್ನಿಸುತ್ತಿರುವುದು ಸ್ಪಷ್ಟ” ಎಂದು ಜಾಗೃತ ಕರ್ನಾಟಕದ ಡಾ.ವಾಸು ಎಚ್ ವಿ ಅವರು ಹೇಳಿದರು.

ದೆಹಲಿ ಪೊಲೀಸರು ಇನ್ನಷ್ಟು ಕುಖ್ಯಾತಿ ಪಡೆಯುವ ಮೊದಲು ನ್ಯಾಯಾಲಯಗಳು ಮಧ್ಯೆ ಪ್ರವೇಶಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

“ಪೊಲೀಸರು ಕಾನೂನು ಪಾಲಿಸದೇ ಈ ರೀತಿ ಅಕ್ರಮ ಚಟುವಟಿಕೆಗಳನ್ನು ನಡೆಸಿದರೆ, ಕಾನೂನಿನ ಕುರಿತು ಜನರಿಗೆ ವಿಶ್ವಾಸ ಕುಂದುತ್ತದೆ. ನದೀಮ್ ಖಾನ್ ವಿಚಾರದಲ್ಲಿ ದೆಹಲಿ ಪೊಲೀಸರು ನಡೆದುಕೊಂಡಿರುವ ರೀತಿಯೇ ಸರಿ ಇಲ್ಲ. ಅನುಮಾನ ಉಂಟು ಮಾಡುವಂಥದ್ದು. ಈ ಹಿಂದೆ ದಿಶಾ ರವಿಯವರ ಪ್ರಕರಣದಲ್ಲೂ ಇದೇ ರೀತಿ ನಡೆದುಕೊಂಡಿದ್ದರು. ಕರ್ನಾಟಕ ಸರ್ಕಾರ ಹಾಗೂ ಬೆಂಗಳೂರಿನ ಪೊಲೀಸರು ಏನೂ ಮಾಡಿರಲಿಲ್ಲ” ಎಂದು ವಕೀಲ, ಸಾಮಾಜಿಕ ಕಾರ್ಯಕರ್ತ ವಿನಯ್ ಶ್ರೀನಿವಾಸ್ ಅವರು ಈ ದಿನ ಡಾಟ್ ಕಾಮ್‌ ಜೊತೆ ಮಾತನಾಡುತ್ತಾ ಹೇಳಿದರು.

“ನಮ್ಮದು ಒಕ್ಕೂಟ ದೇಶ. ದೆಹಲಿ ಪೊಲೀಸರು ಕೇಂದ್ರ ಗೃಹ ಇಲಾಖೆಯ ಅಡಿಯಲ್ಲಿದ್ದಾರೆ ಎಂದು ತಿಳಿದುಕೊಂಡು ತಮಗಿಷ್ಟ ಬಂದಂತೆ ನಡೆದುಕೊಳ್ಳಬಾರದು ಎಂಬುದನ್ನು ಮೊದಲು ಅರ್ಥ ಮಾಡಿಕೊಳ್ಳಬೇಕು. ನದೀಮ್ ಹಾಗೂ ಎಪಿಸಿಆರ್‌ನವರು ದನಿ ಇಲ್ಲದವರ ಪರವಾಗಿ ಕೆಲಸ ಮಾಡುತ್ತಿರುವುದರಿಂದ ಗುರಿ ಮಾಡಿಕೊಳ್ಳಲಾಗಿದೆ. ಅವರನ್ನು ಬೆನ್ನತ್ತುತ್ತಿರುವುದು ಖಂಡನೀಯ. ಕರ್ನಾಟಕದ ಕಾಂಗ್ರೆಸ್ ಸರ್ಕಾರ ಈ ಬಗ್ಗೆ ಕೂಡ ಕ್ರಮ ತೆಗೆದುಕೊಳ್ಳಲು ಮುಂದಾಗಬೇಕು” ಎಂದು ವಿನಯ್ ಶ್ರೀನಿವಾಸ್ ಆಗ್ರಹಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...