ನಾನುಮ್ ರೌಡಿ ಧಾನ್ ವಿವಾದ | ನಯನತಾರಾ ವಿರುದ್ಧ ಮೊಕದ್ದಮೆ ಹೂಡಿದ ಧನುಷ್

Date:

ನಟಿ ನಯನತಾರ ಬದುಕು ಆಧರಿಸಿದ ನೆಟ್‌ಫ್ಲಿಕ್ಸ್ ಸಾಕ್ಷ್ಯಚಿತ್ರ ‘ನಯನತಾರ: ಬಿಯಾಂಡ್‌ ದ ಫೇರಿಟೇಲ್‌ʼನಲ್ಲಿ ನಾನುಮ್ ರೌಡಿ ದಾನ್ ಚಲನಚಿತ್ರದ ತುಣುಕನ್ನು ಒಪ್ಪಿಗೆ ಪಡೆಯದೆ ಬಳಸಲಾಗಿದೆ ಎಂದು ಆರೋಪಿಸಿ ನಟ ಧನುಷ್‌ ಅವರು ದಂಪತಿಗಳಾದ ನಯನತಾರ ಹಾಗೂ ವಿಘ್ನೇಶ್‌ ಶಿವನ್‌ ವಿರುದ್ಧ ಮದ್ರಾಸ್‌ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

‘ನಾನುಮ್ ರೌಡಿ ಧಾನ್’ ಚಿತ್ರವನ್ನು ವಂಡರ್ ಬಾರ್ ಫಿಲ್ಮ್ ಸಂಸ್ಥೆಯ ಬ್ಯಾನರ್ ಅಡಿಯಲ್ಲಿ ಧನುಷ್ ನಿರ್ಮಿಸಿದ್ದರು. ಚಿತ್ರದಲ್ಲಿ ನಯನತಾರಾ ನಾಯಕಿಯಾಗಿದ್ದಾರೆ. ಈ ಸಿನಿಮಾದ ದೃಶ್ಯವನ್ನು ಸಾಕ್ಷ್ಯಚಿತ್ರದಲ್ಲಿ ಬಳಸಲಾಗಿದೆ. ಆದರೆ ಅನುಮತಿ ಪಡೆದಿಲ್ಲ ಎಂಬುದು ಧನುಷ್ ಆರೋಪ. ಇದು ನಯನತಾರಾ ಅವರ ಜೀವನ, ನಟನಾ ವೃತ್ತಿ ಮತ್ತು ಅವರ ವಿವಾಹದ ಕುರಿತಾದ ಸಾಕ್ಷ್ಯಚಿತ್ರವಾಗಿದೆ.

ಇದನ್ನು ಓದಿದ್ದೀರಾ? ನಟ ಧನುಷ್ ವಿರುದ್ಧ ಬಹಿರಂಗ ಪತ್ರ ಬರೆದ ನಟಿ ನಯನತಾರಾ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನ್ಯಾಯಮೂರ್ತಿ ಅಬ್ದುಲ್ ಖುದ್ದೋಸ್ ಅವರ ನೇತೃತ್ವದ ಪೀಠಕ್ಕೆ ಬುಧವಾರ ವಂಡರ್‌ಬಾರ್‌ ಸಲ್ಲಿಸಿರುವ ಸಿವಿಲ್ ಮೊಕದ್ದಮೆಯನ್ನು ಸಲ್ಲಿಸಿದೆ.

ಇನ್ನು ನೆಟ್‌ಫ್ಲಿಕ್ಸ್‌ನ ಮಾತೃ ಸಂಸ್ಥೆಯಾದ ಲಾಸ್ ಗಟೋಸ್ ಪ್ರೊಡಕ್ಷನ್ ಸರ್ವಿಸಸ್ ಇಂಡಿಯಾ ಲಿಮಿಟೆಡ್‌ ಅನ್ನು ಕೂಡಾ ಪಕ್ಷಕಾರರನ್ನಾಗಿಸಲು ವಂಡರ್‌ಬಾರ್ ಪರ ಹಾಜರಾದ ರಿಯ ವಕೀಲ ಪಿಎಸ್ ರಾಮನ್ ಹೈಕೋರ್ಟ್‌ ಅನುಮತಿ ಕೋರಿದ್ದಾರೆ. ಇದಕ್ಕೆ ನಯನತಾರಾ ಪರ ವಕೀಲ ಸತೀಶ್‌ ಪರಾಸರನ್‌ ಮತ್ತು ನೆಟ್‌ಫ್ಲಿಕ್ಸ್‌ ಇಂಡಿಯಾ ಪರ ವಕೀಲ ಆರ್‌ ಪಾರ್ಥಸಾರಥಿ ವಿರೋಧ ವ್ಯಕ್ತಪಡಿಸಿದರು. ಆದರೆ ಹೈಕೋರ್ಟ್ ಲಾಸ್ ಗಟೋಸ್‌ಗೆ ಅರ್ಜಿ ಸಲ್ಲಿಸಲು ಅನುಮತಿ ನೀಡಿದರು.

ಈ ಹಿಂದೆ ತಮ್ಮ ಸಿನಿಮಾದ ದೃಶ್ಯಗಳನ್ನು ಬಳಸಿಕೊಂಡಿದ್ದಾರೆಂದು ಆರೋಪಿಸಿ ನಟಿ ನಯನತಾರಾ ಅವರಿಗೆ ನಟ ಧನುಷ್ ಲೀಗಲ್‌ ನೋಟಿಸ್‌ ಕಳಿಸಿದ್ದರು. ಪರಿಹಾರವಾಗಿ 10 ಕೋಟಿ ರೂ. ನೀಡುವಂತೆ ಬೇಡಿಕೆ ಇಟ್ಟಿದ್ದರು. ತಮಗೆ ನೋಟಿಸ್ ಕಳಿಸಿರುವ ಧನುಷ್ ವಿರುದ್ಧ ನಯನತಾರಾ ಆಕ್ರೋಶ ವ್ಯಕ್ತಪಡಿಸಿದ್ದರು.

“ಅಭಿಮಾನಿಗಳು ನೋಡುವ ಧನುಷ್‌ಗೂ, ಅಸಲಿ ಧನುಷ್‌ಗೂ ವ್ಯತ್ಯಾಸಗಳಿವೆ. ಅವರು ಇಷ್ಟು ಕೀಳುಮಟ್ಟಕ್ಕೆ ಇಳಿದಿದ್ದಾರೆ. ಸಿನಿಮಾ ಕ್ಷೇತ್ರದಲ್ಲಿ ಯಾವುದೇ ಹಿನ್ನೆಲೆಯಿಲ್ಲದೆ, ಅಭಿಮಾನಿಗಳ ಬೆಂಬಲದಿಂದ ಒಂಟಿ ಮಹಿಳೆಯಾಗಿ ಈ ಮಟ್ಟಕ್ಕೆ ಬೆಳೆದು ಬಂದಿದ್ದೇನೆ. ಧನುಷ್ ಅವರ ನೋಟಿಸ್‌ಗೆ ತಕ್ಕ ಪ್ರತ್ಯುತ್ತರ ನೀಡುತ್ತೇನೆ” ಎಂದು ನಯನತಾರಾ ಹೇಳಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...