ಅದಾನಿ ಗ್ರೂಪ್ ಎಲ್ಲ ಷೇರುಗಳು ಕುಸಿತ: ಅದಾನಿ ಪೋರ್ಟ್ಸ್‌ ಶೇ.20ರಷ್ಟು ಇಳಿಕೆ

Date:

ಎಕ್ಸಿಟ್‌ ಪೋಲ್‌ಗಳಲ್ಲಿ ಊಹಿಸಿದ್ದಕ್ಕಿಂತ ಕಡಿಮೆ ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸುತ್ತಿದ್ದಂತೆ ಷೇರು ಮಾರುಕಟ್ಟೆಯಲ್ಲಿ ಅದಾನಿ ಗ್ರೂಪ್ ಷೇರುಗಳು ಭಾರೀ ಕುಸಿತ ಕಂಡಿದೆ. ಗೌತಮ್ ಅದಾನಿ ಮಾಲೀಕತ್ವದ ಅದಾನಿ ಗ್ರೂಪ್‌ನ ಎಲ್ಲ ಷೇರುಗಳು ಮಂಗಳವಾರು ಇಳಿಕೆಯಾಗಿದೆ.

ಅದಾನಿ ಪೋರ್ಟ್ಸ್ ಷೇರು ಶೇ.20ರಷ್ಟು, ಅದಾನಿ ಎನರ್ಜಿ ಸಲ್ಯೂಷನ್ಸ್ ಶೇ.19.80ರಷ್ಟು, ಅದಾನಿ ಪವರ್ ಶೇ.19.76ರಷ್ಟು, ಅದಾನಿ ಪವರ್ ಶೇ.19.76ರಷ್ಟು, ಅಂಬುಜಾ ಸಿಮೆಂಟ್ಸ್ ಶೇ.19.20ರಷ್ಟು, ಅದಾನಿ ಎಂಟರ್‌ಪ್ರೈಸಸ್ ಶೇ.19.13ರಷ್ಟು ಕುಸಿದಿದೆ.

ಅದಾನಿ ಟೋಟಲ್ ಗ್ಯಾಸ್ ಶೇ.18.55, ಅದಾನಿ ಗ್ರೀನ್ ಎನರ್ಜಿ ಶೇ.18.31, ಎನ್‌ಡಿಟಿವಿ ಶೇ.15.65, ಎಸಿಸಿ ಶೇ.14.49 ಮತ್ತು ಅದಾನಿ ವಿಲ್ಮಾರ್ ಶೇ.9.81ರಷ್ಟು ಕುಸಿದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?   ರಾಹುಲ್ ಗಾಂಧಿ ದೇಶ ಮುನ್ನಡೆಸಬೇಕು ಎಂಬುವುದು ರಾಷ್ಟ್ರದ ಆಶಯ: ಸಂಜಯ್ ರಾವತ್

ಈ ಹಿಂದಿನ ಸೆಷನ್‌ನಲ್ಲಿ ಭಾರೀ ಲಾಭವನ್ನು ದಾಖಲಿಸಿದ್ದ ಬಿಎಸ್‌ಇ ಸೆನ್ಸೆಕ್ಸ್ ಮಂಗಳವಾರ ಭಾರೀ ನಷ್ಟ ಅನುಭವಿಸಿದೆ. ಸೆನ್ಸೆಕ್ಸ್ 4,131.44 ಅಂಕ ಅಥವಾ ಶೇಕಡ 5.40ರಷ್ಟು ಕುಸಿದು 72,337.34ಕ್ಕೆ ತಲುಪಿದರೆ, ನಿಫ್ಟಿ 1,263.3 ಅಂಕ ಅಥವಾ ಶೇಕಡ 5.43ರಷ್ಟು ಇಳಿದು 22,000.60ರಲ್ಲಿ ವಹಿವಾಟು ನಡೆಸುತ್ತಿದೆ.

ಸೋಮವಾರ ಅದಾನಿ ಗ್ರೂಪ್‌ನ ಎಲ್ಲಾ ಷೇರುಗಳು ಸೋಮವಾರ ಭಾರೀ ಏರಿಕೆ ಕಂಡಿದ್ದವು. ಅದಾನಿ ಪವರ್ ಸುಮಾರು ಶೇಕಡ 16ರಷ್ಟು ಜಿಗಿದು ಅದಾನಿ ಗ್ರೂಪ್‌ನ ಹತ್ತು ಸಂಸ್ಥೆಗಳ ಒಟ್ಟು ಮಾರುಕಟ್ಟೆ ಮೌಲ್ಯ 19.42 ಲಕ್ಷ ಕೋಟಿ ರೂಪಾಯಿಗೆ ತಲುಪಿತ್ತು.

ಇದನ್ನು ಓದಿದ್ದೀರಾ?  ಚುನಾವನಾ ಫಲಿತಾಂಶ | ಮತ ಎಣಿಕೆಯ ನಡುವೆಯೇ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ

ಷೇರು ಮಾರುಕಟ್ಟೆಯಲ್ಲಿ ಅದಾನಿ ಸಂಸ್ಥೆ ವಂಚನೆ ಮಾಡಿದೆ ಎಂದು ಹಿಂಡನ್‌ಬರ್ಗ್ ವರದಿ ಮಾಡುವುದಕ್ಕೂ ಮುನ್ನ ಇದ್ದ ಮಾರುಕಟ್ಟೆ ಮೌಲ್ಯಕ್ಕೆ ಅದಾನಿ ಎಂಟರ್‌ಪ್ರೈಸಸ್, ಅದಾನಿ ಪೋರ್ಟ್ಸ್, ಅದಾನಿ ಪವರ್ ಮತ್ತು ಅದಾನಿ ಗ್ರೀನ್ ಸೇರಿದಂತೆ ಹಲವಾರು ಷೇರುಗಳು ತಲುಪಿದ್ದವು.

ಬಿಜೆಪಿ ನೇತೃತ್ವದ ಎನ್‌ಡಿಎ 296 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಇಂಡಿಯಾ ಒಕ್ಕೂಟ ಎಕ್ಸಿಟ್ ಪೋಲ್ ಅನ್ನು ಹುಸಿಗೊಳಿಸಿ 227 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಬಿಜೆಪಿ 542 ಸ್ಥಾನಗಳಲ್ಲಿ 236ರಲ್ಲಿ ಮುಂದಿದ್ದರೆ, ಕಾಂಗ್ರೆಸ್ 97ರಲ್ಲಿ ಮುನ್ನಡೆ ಸಾಧಿಸಿದೆ. ಬಿಜೆಪಿ ಹಲವಾರು ಕ್ಷೇತ್ರಗಳನ್ನು ಕಳೆದುಕೊಂಡರೆ ಕಾಂಗ್ರೆಸ್‌ಗೆ ಖಾತೆಗೆ 52 ಕ್ಷೇತ್ರಗಳು ಹೆಚ್ಚುವರಿಯಾಗಿ ಸೇರ್ಪಡೆಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...