ಮಹಾರಾಷ್ಟ್ರ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದ ʻಜಾಹೀರಾತುʼ; ಫಡ್ನವಿಸ್‌ ನಿರ್ಲಕ್ಷಿಸಿದ ಶಿಂಧೆ ಬಣ

Date:

ಮಹಾರಾಷ್ಟ್ರದ ಪ್ರಮುಖ ದಿನ ಪತ್ರಿಕೆಗಳಲ್ಲಿ ಮಂಗಳವಾರ ಪ್ರಕಟವಾದ ಜಾಹೀರಾತು ಒಂದು ಇದೀಗ ʻಮಹಾʼ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ.

ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಬಣ ನೀಡಿರುವ ಜಾಹೀರಾತಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಚಿತ್ರಗಳು ಮಾತ್ರ ಕಾಣಿಸಿಕೊಂಡಿದ್ದು, ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರನ್ನು ನಿರ್ಲಕ್ಷಿಸಲಾಗಿದೆ. ಇದು ಹೊಸ ರಾಜಕೀಯ ವಿವಾದಕ್ಕೆ ನಾಂದಿ ಹಾಡಿದೆ.

ಜಾಹೀರಾತಿನ ಮೂಲಕ, ʻಏಕ್​ನಾಥ್​ ಶಿಂಧೆ ಅವರೇ ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿ ಆಗಬೇಕು, ಶಿಂಧೆ ಅವರೇ ಈಗಿನ ಸರ್ಕಾರದ ಅವಧಿ ಮುಗಿಯುವವರೆಗೆ ಸಿಎಂ ಆಗಿರಬೇಕು, ಮುಂದಿನ ಚುನಾವಣೆಯ ಬಳಿಕವೂ ಶಿವಸೇನೆಗೆ ಸಿಎಂ ಸ್ಥಾನ ಬಿಟ್ಟುಕೊಟ್ಟು ಬಿಜೆಪಿ ಕಿರಿಯ ಪಾಲುದಾರನಂತೆ ಇರಬೇಕುʼ ಎಂಬ ಸಂದೇಶವನ್ನು ಶಿವಸೇನೆ, ಬಿಜೆಪಿಗೆ ರವಾನಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʻಬಿಜೆಪಿ ಸಾಕಷ್ಟು ತ್ಯಾಗ ಮಾಡಿದೆʼ

ಶಿವಸೇನೆ ನೀಡಿರುವ ಜಾಹೀರಾತು ರಾಜ್ಯ ಬಿಜೆಪಿಯ ಕಣ್ಣು ಕೆಂಪಾಗಿಸಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ ಶಾಸಕ ಪ್ರವೀಣ್‌  ದಾರೇಕರ್, ʻಫಡ್ನವೀಸ್ ಅವರನ್ನು ಅವಮಾನಿಸುವ ರೀತಿಯಲ್ಲಿನ ಯಾವುದೇ ಪ್ರಯತ್ನವನ್ನು ನಾವು ಒಪ್ಪುವುದಿಲ್ಲ. ಇದು ಅತ್ಯಂತ ದುರದೃಷ್ಟಕರ. ಶಿಂಧೆ ಮತ್ತು ಫಡ್ನವಿಸ್ ಇಬ್ಬರೂ ಜನರೆಡೆಯಲ್ಲಿ ಜನಪ್ರಿಯರು. ಇಬ್ಬರೂ ರಾಜ್ಯ ಸರ್ಕಾರವನ್ನು ಸರಿಯಾದ ದಿಕ್ಕಿನಲ್ಲಿ ಮುನ್ನಡೆಸುತ್ತಿದ್ದಾರೆ. ಇದನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು. ಇಬ್ಬರೂ ಒಟ್ಟಾಗಿ ಇರುವ ವೇಳೆ ಒಬ್ಬರನ್ನು ನಿರ್ಲಕ್ಷಿಸುವುದು ಸರಿಯಲ್ಲ. ಇದರಿಂದ ಮೈತ್ರಿಯಲ್ಲಿ ಮುನಿಸು ಕಾಣಿಕೊಳ್ಳಬಹುದು. 40 ಶಾಸಕರು ಇರುವ (ಶಿಂಧೆ- ನೇತೃತ್ವದ ಶಿವಸೇನೆ) ಏಕಾಂಗಿಯಾಗಿ ಸರ್ಕಾರ ರಚಿಸಲು ಸಾಧ್ಯವಿತ್ತೇ? ಬಿಜೆಪಿ ಸಾಕಷ್ಟು ತ್ಯಾಗ ಮಾಡಿದೆ. 105 ಶಾಸಕರಿದ್ದರೂ ಫಡ್ನವೀಸ್ ಉಪ ಮುಖ್ಯಮಂತ್ರಿಯಾದರು. ಅವರಿಗಿಂತಲೂ ಬಿಜೆಪಿ ಮೂರು ಪಟ್ಟು ಶಾಸಕರನ್ನು ಹೊಂದಿದೆ.ʼ ಎಂದು ಶಾಸಕ ಪ್ರವೀಣ್‌ ದಾರೇಕರ್ ಹೇಳಿದ್ದಾರೆ.

addvt

ಈ ಸುದ್ದಿ ಓದಿದ್ದೀರಾ?: ಆಟಿಸಂ ಖಾಯಿಲೆಯಿಂದ ಬಳಲುತ್ತಿದ್ದ ಬಾಲಕನನ್ನು ಎಳೆದೊಯ್ದ ಬೀದಿ ನಾಯಿಗಳು: ಸಾವು

ಜಾಹೀರಾತಿನಲ್ಲೇನಿದೆ?

ಚುನಾವಣಾ ಸಮೀಕ್ಷೆಗಳ ಪ್ರಕಾರ ಶೇಕಡಾ 30.2ರಷ್ಟು ಮಹಾರಾಷ್ಟ್ರದ ಜನತೆ ಬಿಜೆಪಿಯನ್ನೂ ಶೇಕಡಾ 16.2ರಷ್ಟು ಮಹಾರಾಷ್ಟ್ರದ ಜನತೆ ಏಕ್​ನಾಥ್​ ಶಿಂಧೆ ನೇತೃತ್ವದ ಶಿವಸೇನೆಯನ್ನು ಬಯಸುತ್ತಿದ್ದಾರೆ.

ಈ ಅಂಕಿಗಳ ಪ್ರಕಾರ ಮಹಾರಾಷ್ಟ್ರದಲ್ಲಿ ಒಟ್ಟು ಶೇಕಡಾ 46.4ರಷ್ಟು ಮಂದಿ ರಾಜ್ಯದ ಅಭಿವೃದ್ಧಿಗಾಗಿ ಬಿಜೆಪಿ ಮತ್ತು ಏಕ್​ನಾಥ್​ ಶಿಂಧೆ ನೇತೃತ್ವದ ಶಿವಸೇನೆ ಮೈತ್ರಿಕೂಟದ ಮೇಲೆ ವಿಶ್ವಾಸವಿಟ್ಟಿದ್ದಾರೆ.

ಅದಕ್ಕಿಂತಲೂ ಹೆಚ್ಚಾಗಿ ಮುಖ್ಯಮಂತ್ರಿ ಸ್ಥಾನಕ್ಕಾಗಿ ಮಾಡಲಾದ ಸಮೀಕ್ಷೆಯಲ್ಲಿ ಶೇಕಡಾ 26.1ರಷ್ಟು ಮಹಾರಾಷ್ಟ್ರದ ಜನತೆ ಏಕ್​ನಾಥ್​ ಶಿಂಧೆ ಅವರನ್ನೂ ಮತ್ತು ಶೇಕಡಾ 23.2ರಷ್ಟು ಮಂದಿ ದೇವೇಂದ್ರ ಫಡ್ನವೀಸ್​ ಅವರನ್ನು ಮುಂದಿನ ಮುಖ್ಯಮಂತ್ರಿಯಾಗಿ ಕಾಣಲು ಬಯಸಿದ್ದಾರೆ ಸಮೀಕ್ಷೆ ಹೇಳಿದೆ.

ಈ ಮೂಲಕ ಶೇಕಡಾ 49.3ರಷ್ಟು ಮಹಾರಾಷ್ಟ್ರದ ಜನತೆ ರಾಜ್ಯದಲ್ಲಿ ನಾಯಕತ್ವಕ್ಕಾಗಿ ಬಿಜೆಪಿ ಮತ್ತು ಶಿವಸೇನೆ ಮೈತ್ರಿಕೂಟವನ್ನು ಬಯಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...