12 ರಾಜ್ಯಗಳಲ್ಲಿ 2ನೇ ಹಂತದ ಮತದಾರರ ವಿಶೇಷ ತೀವ್ರ ಪರಿಷ್ಕರಣೆ: ಚುನಾವಣಾ ಆಯೋಗ ಘೋಷಣೆ

Date:

12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ವಿಶೇಷ ತೀವ್ರ ಪರಿಷ್ಕರಣೆಯ ಎರಡನೇ ಹಂತವನ್ನು ಶೀಘ್ರದಲ್ಲೇ ನಡೆಸಲಾಗುವುದು ಎಂದು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಘೋಷಿಸಿದರು

ಸೋಮವಾರ ನವದೆಹಲಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, “ಇಂದು ನಾವು ಇಲ್ಲಿ ವಿಶೇಷ ತೀವ್ರ ಪರಿಷ್ಕರಣೆಯ ಎರಡನೇ ಹಂತದ ಜಾರಿಗೆ ಸಂಬಂಧಿಸಿದಂತೆ ಸಭೆ ಸೇರಿದ್ದೇವೆ. ಬಿಹಾರದ 7.5 ಕೋಟಿ ಮತದಾರರಿಗೆ ನನ್ನ ಶುಭಾಶಯಗಳು, ಅವರು ಯಶಸ್ವಿಯಾಗಿ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದಾರೆ. ಚುನಾವಣಾ ಆಯೋಗವು ದೇಶದ ಎಲ್ಲ ರಾಜ್ಯಗಳ ಚುನಾವಣಾ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಈ ಪ್ರಕ್ರಿಯೆಯನ್ನು ವಿವರವಾಗಿ ಚರ್ಚಿಸಿದೆ” ಎಂದು ಅವರು ಹೇಳಿದರು.

ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಗೋವಾ, ಪುದುಚೇರಿ, ಛತ್ತೀಸಗಢ, ಗುಜರಾತ್, ಕೇರಳ, ಮಧ್ಯಪ್ರದೇಶ, ಉತ್ತರಪ್ರದೇಶ, ರಾಜಸ್ಥಾನ, ಪಶ್ಚಿಮ ಬಂಗಾಳ, ತಮಿಳುನಾಡು ಮತ್ತು ಲಕ್ಷದ್ವೀಪಗಳಲ್ಲಿ 2ನೇ ಹಂತದ ಎಸ್‌ಐಆರ್‌ ಪ್ರಕ್ರಿಯೆ ನಡೆಯಲಿದೆ. ಪರಿಷ್ಕರಣೆಯು ಹೊಸ ಮತದಾರರನ್ನು ಸೇರಿಸುವುದು, ದೋಷಗಳನ್ನು ತಿದ್ದುವುದು ಹಾಗೂ ಮೃತ ಅಥವಾ ಸ್ಥಳಾಂತರವಾದ ಮತದಾರರ ಹೆಸರುಗಳನ್ನು ತೆಗೆಯುವುದನ್ನು ಒಳಗೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಹಾರದಲ್ಲಿ ನಡೆದ ಮೊದಲ ಹಂತದ ಎಸ್‌ಐಆರ್ ಕಾರ್ಯಕ್ರಮವು 90,000ಕ್ಕೂ ಹೆಚ್ಚು ಮತಗಟ್ಟೆಗಳಲ್ಲಿ ಮತದಾರರ ದೃಢೀಕರಣ ಕಾರ್ಯವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿತು ಮತ್ತು ಯಾವುದೇ ಮೇಲ್ಮನವಿಗಳು ವರದಿಯಾಗಿಲ್ಲ. “ಬಿಹಾರದ ಮತದಾರರ ಭಾಗವಹಿಸುವಿಕೆಯು ದೇಶದ ಉಳಿದ ಭಾಗಗಳಿಗೆ ಉತ್ತಮ ಮಾದರಿಯಾಗಿದೆ,” ಎಂದು ಮುಖ್ಯ ಚುನಾವಣಾ ಆಯುಕ್ತರು ಮೆಚ್ಚುಗೆ ವ್ಯಕ್ತಪಡಿಸಿದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕಾಂಗ್ರೆಸ್‌ಗಷ್ಟೇ ಅಲ್ಲ, ಸಮಾಜಕ್ಕೆ ಅರ್ಥವಾಗಿದೆಯೇ ಆರ್‌ಎಸ್‌ಎಸ್ ಅಜೆಂಡಾ?

ಮತದಾರರ ಪಟ್ಟಿಯ ನಿಖರತೆಯನ್ನು ಖಾತ್ರಿಪಡಿಸಿಕೊಳ್ಳಲು ಎಸ್‌ಐಆರ್ ಕಾರ್ಯಕ್ರಮವು ಅವಶ್ಯಕವಾಗಿದೆ. ಇದರ ಮೂಲ ಉದ್ದೇಶವು ದೋಷಗಳನ್ನು, ದ್ವಿಪ್ರತಿ ನೋಂದಣಿಗಳನ್ನು ಮತ್ತು ಮೃತಪಟ್ಟವರ ಹೆಸರುಗಳನ್ನು ಗುರುತಿಸಿ ತೆಗೆದುಹಾಕುವುದು. 1951 ರಿಂದ ಈ ರೀತಿಯ ಪರಿಷ್ಕರಣೆಯನ್ನು ಒಟ್ಟು ಎಂಟು ಬಾರಿ ನಡೆಸಲಾಗಿದ್ದು, ಕೊನೆಯದಾಗಿ 2002-2004ರ ಅವಧಿಯಲ್ಲಿ ಈ ಕಾರ್ಯ ನಡೆದಿತ್ತು. ವಲಸೆ, ದ್ವಿಪ್ರತಿ ನೋಂದಣಿಗಳು ಮತ್ತು ಮತದಾರರ ಮರಣದಿಂದಾಗಿ ಈ ಪರಿಷ್ಕರಣೆಯ ಅಗತ್ಯವಿದೆ.

ಸರಾಸರಿಯಾಗಿ, ಪ್ರತಿ 1,000 ಮತದಾರರಿಗೆ ಒಬ್ಬ ಬೂತ್ ಮಟ್ಟದ ಅಧಿಕಾರಿ (BLO) ನೇಮಕಗೊಳ್ಳುತ್ತಾರೆ. ಪ್ರತಿ ವಿಧಾನಸಭಾ ಕ್ಷೇತ್ರವು ಒಬ್ಬ ಚುನಾವಣಾ ನೋಂದಣಿ ಅಧಿಕಾರಿಯನ್ನು (ERO) ಹೊಂದಿರುತ್ತದೆ, ಇವರು ಸಾಮಾನ್ಯವಾಗಿ SDM ಶ್ರೇಣಿಯ ಅಧಿಕಾರಿಯಾಗಿರುತ್ತಾರೆ. ಇವರಿಗೆ ಸಹಾಯಕ ಚುನಾವಣಾ ನೋಂದಣಿ ಅಧಿಕಾರಿಗಳು (AEROs) ಸಹಾಯ ಮಾಡುತ್ತಾರೆ.

ಚುನಾವಣಾ ಆಯೋಗವು, ಎರಡನೇ ಹಂತದ SIR ಕಾರ್ಯಕ್ರಮವು ಭಾಗವಹಿಸುವ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿಯ ಪಾರದರ್ಶಕತೆ, ಸಮಗ್ರತೆ ಮತ್ತು ನಿಖರತೆಯ ಮೇಲೆ ಕೇಂದ್ರೀಕರಿಸುವುದು ಎಂದು ತಿಳಿಸಿದೆ.

ಎರಡನೇ ಹಂತ ಎಲ್ಲಿ?

ಅಂಡಮಾನ್‌ ಮತ್ತು ನಿಕೋಬಾರ್, ಲಕ್ಷದ್ವೀಪ, ಛತ್ತೀಸಗಢ, ಗೋವಾ, ಗುಜರಾತ್, ಕೇರಳ, ಮಧ್ಯ ಪ್ರದೇಶ, ಪುದುಚೇರಿ, ರಾಜಸ್ಥಾನ, ತಮಿಳುನಾಡು, ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳ

51 ಕೋಟಿ: ಎರಡನೇ ಹಂತದಲ್ಲಿ ಎಸ್ಐಆರ್‌ ನಡೆಯಲಿರುವ ರಾಜ್ಯಗಳು ಕೇಂದ್ರಾಡಳಿತ ಪ್ರದೇಶಗಳಲ್ಲಿರುವ ಒಟ್ಟು ಮತದಾರರು

ವೇಳಾಪಟ್ಟಿ

ನ.4; ಗಣತಿ ಪ್ರಕ್ರಿಯೆ ಆರಂಭ

ಡಿ.9; ಮತದಾರರ ಕರಡು ಪಟ್ಟಿ ಪ್ರಕಟ 2026ರ

ಫೆ.7; ಅಂತಿಮ ಪಟ್ಟಿ ಪ್ರಕಟ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...