2014ರಿಂದ ರಿಲಯನ್ಸ್ ಜಿಯೋಗೆ ಶುಲ್ಕ ವಿಧಿಸದ ಬಿಎಸ್‌ಎನ್‌ಎಲ್; ಸರ್ಕಾರಕ್ಕೆ 1,758 ಕೋಟಿ ರೂ. ನಷ್ಟ

Date:

ಸರ್ಕಾರಿ ಸ್ವಾಮ್ಯದ ದೂರಸಂಪರ್ಕ ಸೇವಾ ಪೂರೈಕೆದಾರ ಭಾರತ ಸಂಚಾರ ನಿಗಮ ಲಿಮಿಟೆಡ್ (ಬಿಎಸ್‌ಎನ್‌ಎಲ್) 2014ರ ಮೇ ತಿಂಗಳಿನಿಂದ 2024ರ ಮಾರ್ಚ್‌ ತಿಂಗಳವರೆಗೆ ರಿಲಯನ್ಸ್ ಜಿಯೋ ಇನ್ಫೋಕಾಮ್ ಲಿಮಿಟೆಡ್‌ಗೆ (ಆರ್‌ಜೆಐಎಲ್) ಬಿಲ್ ನೀಡದ ಕಾರಣದಿಂದಾಗಿ ಸರ್ಕಾರಕ್ಕೆ ಬರೋಬ್ಬರಿ 1,757.76 ಕೋಟಿ ರೂಪಾಯಿ ನಷ್ಟವಾಗಿದೆ.

ಬಿಎಸ್‌ಎನ್‌ಎಲ್‌ನ ಮೂಲಸೌಕರ್ಯ ಬಳಕೆ ವಿಚಾರದಲ್ಲಿ ರಿಲಯನ್ಸ್ ಜಿಯೋ ನಡುವೆ ಒಪ್ಪಂದ ನಡೆದಿತ್ತು. ಈ ಒಪ್ಪಂದದ ಪ್ರಕಾರ ಬಿಎಸ್‌ಎನ್‌ಎಲ್‌ ಶುಲ್ಕವನ್ನು ವಿಧಿಸದ ಕಾರಣದಿಂದಾಗಿ ಸರ್ಕಾರಕ್ಕೆ ಸಾವಿರಾರು ಕೋಟಿ ರೂಪಾಯಿ ನಷ್ಟವಾಗಿದೆ ಎಂದು ಭಾರತದ ಲೆಕ್ಕ ನಿಯಂತ್ರಕ ಮತ್ತು ಮಹಾಲೇಖಪಾಲರ (ಸಿಎಜಿ) ವರದಿ ಹೇಳಿದೆ.

ಇದನ್ನು ಓದಿದ್ದೀರಾ? ಜಿಯೋ ಬಳಕೆದಾರರಿಗೆ ರೀಚಾರ್ಜ್‌ ತುಟ್ಟಿ; ಹೊಸ ಬೆಲೆಗಳು ಹೀಗಿವೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಎಸ್‌ಎನ್‌ಎಲ್‌ನ ಮೂಲಸೌಕರ್ಯವನ್ನು ಹಂಚಿಕೊಳ್ಳಲು ರಿಲಯನ್ಸ್ ಜಿಯೋ ಜೊತೆ ಮಾಸ್ಟರ್ ಸರ್ವಿಸ್ ಒಪ್ಪಂದ (ಎಂಎಸ್‌ಎ) ಮಾಡಿಕೊಳ್ಳಲಾಗಿತ್ತು. ಈ ಒಪ್ಪಂದವು ಬಿಎಸ್‌ಎನ್‌ಎಲ್‌ನ ಮೂಲ ಸೌಕರ್ಯವನ್ನು ಜಿಯೋಗೆ 15 ವರ್ಷಗಳ ಕಾಲ ಬಳಸಲು ಅವಕಾಶ ನೀಡುತ್ತದೆ.

ಈ ಒಪ್ಪಂದ ನಡೆದ ಸಂದರ್ಭದಲ್ಲಿ ತೀವ್ರ ವಿರೋಧ ವ್ಯಕ್ತವಾಗಿತ್ತು. ಈ ಒಪ್ಪಂದದಿಂದಾಗಿ ಸರ್ಕಾರಕ್ಕೆ ನಷ್ಟವಾಗಲಿದೆ, ಖಾಸಗಿ ಟೆಲಿಕಾಂ ಸಂಸ್ಥೆಗಳು ವಿಸ್ತಾರವಾಗಿ ಬೆಳೆಯಲು ಅವಕಾಶ ಮಾಡಿಕೊಟ್ಟಂತಾಗುತ್ತದೆ ಎಂದು ಹಲವು ಪ್ರಗತಿಪರ ಸಂಘಟನೆಗಳು, ಎಡ ಪಕ್ಷಗಳು ಪ್ರತಿಭಟನೆ, ಧರಣಿ ನಡೆಸಿತ್ತು. ಈ ವಿರೋಧಗಳ ಮಧ್ಯೆಯೂ ಒಪ್ಪಂದ ನಡೆದಿತ್ತು.

ಪ್ರಧಾನಿ ನರೇಂದ್ರ ಮೋದಿ ಖಾಸಗಿ ಟೆಲಿಕಾಂ ಸಂಸ್ಥೆಗಳಿಗೆ ಉತ್ತೇಜನ ನೀಡಿ ಬಿಎಸ್‌ಎನ್‌ಎಲ್ ಅನ್ನು ಮುಚ್ಚುವ ಷಡ್ಯಂತ್ರ ಮಾಡುತ್ತಿದ್ದಾರೆ. ಅದರಲ್ಲೂ ತನ್ನ ಸ್ನೇಹಿತ ಗೌತಮ್ ಅದಾನಿ ಕುಟುಂಬಕ್ಕೆ ಸೇರಿದ ಸಂಸ್ಥೆಯನ್ನು ಬೆಳೆಸುವುದು ಮೋದಿ ತಂತ್ರ ಎಂದು ವಿಪಕ್ಷಗಳು ಆರೋಪಿಸಿತ್ತು. ವಿಪಕ್ಷಗಳು ಬಿಎಸ್‌ಎನ್‌ಎಲ್ ಪತನದ ಎಚ್ಚರಿಕೆಯನ್ನೂ ನೀಡಿತ್ತು. ಅದರಂತೆ ಈ ಹತ್ತು ವರ್ಷದ ಅವಧಿಯಲ್ಲಿ ಬಿಎಸ್‌ಎನ್‌ಎಲ್‌ ಬಳಕೆದಾರರ ಸಂಖ್ಯೆ ಭಾರೀ ಪ್ರಮಾಣದಲ್ಲಿ ಇಳಿಕೆಯಾಗಿದೆ. ಉಳಿದ ಖಾಸಗಿ ಟೆಲಿಕಾಂ ಸಂಸ್ಥೆಗಳನ್ನೆಲ್ಲಾ ಹಿಂದೆ ತಳ್ಳಿ ಜಿಯೋ ವಿಸ್ತಾರವಾಗಿ ಬೆಳೆದುಕೊಂಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...