ದೆಹಲಿ | ಧೂಳಿನ ಬಿರುಗಾಳಿ; 205 ವಿಮಾನಗಳು ವಿಳಂಬ, ನಿಲ್ದಾಣದಲ್ಲಿ ಪ್ರಯಾಣಿಕರ ದಟ್ಟಣೆ

Date:

ಶುಕ್ರವಾರ ದೆಹಲಿಯಲ್ಲಿ ತೀವ್ರವಾದ ಧೂಳಿನ ಬಿರುಗಾಳಿ ಉಂಟಾದ ಕಾರಣದಿಂದಾಗಿ ವಿಮಾನಯಾನದಲ್ಲಿ ವ್ಯತ್ಯಯ ಉಂಟಾಗಿದೆ. ಕನಿಷ್ಠ 205 ವಿಮಾನಗಳು ವಿಳಂಬವಾಗಿದ್ದು, ದೆಹಲಿ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ದಟ್ಟಣೆ ಉಂಟಾಗಿತ್ತು. ಕನಿಷ್ಠ 50 ವಿಮಾನಗಳ ಮಾರ್ಗ ಬದಲಾವಣೆ ಮಾಡಲಾಗಿದೆ. ಸರಾಸರಿ ಒಂದು ಗಂಟೆಗಳ ಕಾಲ ನಿರ್ಗಮನ ವಿಳಂಬವಾಗಿದೆ ಎನ್ನಲಾಗಿದೆ.

“ಧೂಳಿನ ಬಿರುಗಾಳಿಯ ನಂತರ, ಅನೇಕ ವಿಮಾನಗಳನ್ನು ಬೇರೆಡೆಗೆ ತಿರುಗಿಸಲಾಗಿದೆ ಮತ್ತು ರದ್ದುಗೊಳಿಸಲಾಗಿದೆ. ಇದರಿಂದಾಗಿ ದೆಹಲಿ ವಿಮಾನ ನಿಲ್ದಾಣದಲ್ಲಿ ತಮ್ಮ ವಿಮಾನಗಳಿಗಾಗಿ ಕಾಯುತ್ತಿದ್ದ ಪ್ರಯಾಣಿಕರಿಗೆ ಅನಾನುಕೂಲತೆ ಉಂಟಾಯಿತು. ಬೇರೆಡೆಗೆ ಮಾರ್ಗ ಬದಲಾಯಿಸಿಕೊಂಡ ವಿಮಾನಗಳು ದೆಹಲಿಗೆ ತಲುಪುವುದು ತಡವಾಗಿದೆ. ಇದರಿಂದಾಗಿ ವಿಮಾನ ನಿಲ್ದಾಣದಲ್ಲಿ ಜನದಟ್ಟಣೆ ಉಂಟಾಗಿದೆ” ಎಂದು ಅಧಿಕಾರಿಯೊಬ್ಬರು ಎಎನ್‌ಐಗೆ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ದೆಹಲಿ| ರಾಷ್ಟ್ರ ರಾಜಧಾನಿಯಲ್ಲಿ ಭಾರೀ ಮಳೆ: 7 ಮಂದಿ ಸಾವು; ಆರೆಂಜ್ ಅಲರ್ಟ್ ಘೋಷಣೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಏರ್ ಇಂಡಿಯಾ ಮತ್ತು ಇಂಡಿಗೋದಂತಹ ವಿಮಾನಯಾನ ಸಂಸ್ಥೆಗಳು ಈ ಬಗ್ಗೆ ಎಕ್ಸ್‌ನಲ್ಲಿ ಮಾಹಿತಿ ನೀಡಿದೆ. ಆದರೆ ನಿರಾಶೆಗೊಂಡ ಪ್ರಯಾಣಿಕರು ತಮ್ಮ ಕಷ್ಟವಾಗಿದೆ ಎಂದು ಹೇಳಿಕೊಂಡಿದ್ದಾರೆ. “ಶ್ರೀನಗರದಿಂದ ದೆಹಲಿಗೆ ಮುಂಬೈಗೆ ಸಂಜೆ 4 ಗಂಟೆಗೆ ವಿಮಾನವಿತ್ತು. ನಮ್ಮ ವಿಮಾನವು ಸಂಜೆ 6 ಗಂಟೆಯ ಸುಮಾರಿಗೆ ದೆಹಲಿಯಲ್ಲಿ ಇಳಿಯಬೇಕಿತ್ತು. ಆದರೆ ಧೂಳಿನ ಬಿರುಗಾಳಿಯಿಂದಾಗಿ ಚಂಡೀಗಢಕ್ಕೆ ಮಾರ್ಗ ಬದಲಾಯಿಸಲಾಗಿದೆ. ಅದಾದ ನಂತರ ರಾತ್ರಿ 11 ಗಂಟೆಗೆ ದೆಹಲಿಗೆ ತಲುಪಿದೆ” ಎಂದು ಏರ್ ಇಂಡಿಯಾ ವಿಮಾನದಲ್ಲಿದ್ದ ಪ್ರಯಾಣಿಕರೊಬ್ಬರು ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.

“ನಂತರ ನಮ್ಮನ್ನು ದೆಹಲಿಯಲ್ಲಿ ಮಧ್ಯಾಹ್ನ 12 ಗಂಟೆಗೆ ಮುಂಬೈಗೆ ತೆರಳುವ ಮತ್ತೊಂದು ವಿಮಾನ ಹತ್ತುವಂತೆ ತಿಳಿಸಲಾಗಿದೆ. ನಾವು ಸುಮಾರು 4 ಗಂಟೆಗಳ ಕಾಲ ವಿಮಾನದಲ್ಲಿ ಕುಳಿತುಕೊಂಡೆವು. ನಂತರ ಮತ್ತೆ ಇಳಿಯಲು ತಿಳಿಸಲಾಯಿತು. ಮತ್ತೆ ಭದ್ರತಾ ತಪಾಸಣೆಗೆ ಒಳಪಡಿಸಲಾಯಿತು. ಈಗ ಬೆಳಿಗ್ಗೆ 8 ಗಂಟೆ ನಾವು ಇನ್ನೂ ವಿಮಾನ ನಿಲ್ದಾಣದಲ್ಲಿ ಕಾಯುತ್ತಿದ್ದೇವೆ. ನಮ್ಮ ವಿಮಾನ ಇನ್ನೂ ಟೇಕ್ ಆಫ್ ಆಗಿಲ್ಲ” ಎಂದು ಸಿಲುಕಿಕೊಂಡ ಪ್ರಯಾಣಿಕರು ಹೇಳಿದ್ದಾರೆ.

ಇನ್ನು ಕೆಲವರು ಎಕ್ಸ್‌ನಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ನಿರ್ವಹಣೆ, ಮಾಹಿತಿ ನೀಡುವ ವಿಚಾರದಲ್ಲಿ ವಿಶ್ವ ದರ್ಜೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣವಾದ ನವದೆಹಲಿ ಬಸ್ ನಿಲ್ದಾಣಕ್ಕಿಂತ ಕೆಟ್ಟದಾಗಿದೆ” ಎಂದು ತಿಳಿಸಿದ್ದಾರೆ.

“ಕೋಲ್ಕತ್ತಾದಿಂದ ದೆಹಲಿಗೆ ಇಂಡಿಗೋ ವಿಮಾನವನ್ನು ಸಂಜೆಯಿಂದ 6 ಬಾರಿ ಮರು ನಿಗದಿಪಡಿಸಲಾಗಿದೆ. ಇಂಡಿಯಾಗೋ ಪ್ರಯಾಣಿಕರನ್ನು ಹಗುರವಾಗಿ ಪರಿಗಣಿಸುತ್ತಿದ್ದೀರಾ? ನಿಮ್ಮಿಂದಾಗಿ ಈಗಾಗಲೇ ಆರು ಗಂಟೆ ನಷ್ಟವಾಗಿದೆ” ಎಂದಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...